ತಪ್ಪಿದ ನೀಟ್ ಪರೀಕ್ಷೆ: ವಿದ್ಯಾರ್ಥಿಗಳ ಪರ ಮೋದಿಗೆ ಎಚ್‌ಡಿಕೆ ಮನವಿ
ಬೆಂಗಳೂರು, ಮೇ 05: ರೈಲ್ವೆ ಇಲಾಖೆ ತಪ್ಪಿನಿಂದಾಗಿ ಅತಿ ಮುಖ್ಯ ನೀಟ್ ಪರೀಕ್ಷೆ ತಪ್ಪಿಸಿಕೊಂಡ ರಾಜ್ಯದ ನೂರಾರು ವಿದ್ಯಾರ್ಥಿಗಳ ಪರವಾಗಿ ಕುಮಾರಸ್ವಾಮಿ ಅವರು ಪ್ರಧಾನಿ ಮೋದಿಗೆ ಮನವಿ ಸಲ್ಲಿಸಿದ್ದಾರೆ.
ತಮ್ಮದಲ್ಲದ ತಪ್ಪಿನಿಂದಾಗಿ ಪರೀಕ್ಷೆ ತಪ್ಪಿಸಿಕೊಂಡ ವಿದ್ಯಾರ್ಥಿಗಳ ಪರವಾಗಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ ಅವರು, ಮೋದಿ, ರೈಲ್ವೆ ಸಚಿವ ಪಿಯೂಷ್ ಘೋಯಲ್, ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಅವರಿಗೆ ಮನವಿ ಸಲ್ಲಿಸಿದ್ದು, ವಿದ್ಯಾರ್ಥಿಗಳಿಗೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ ಒದಗಿಸುವಂತೆ ಕೋರಿದ್ದಾರೆ.

ಹಂಪಿ ರೈಲು ಏಳು ಗಂಟೆ ತಡವಾಗಿ ಬೆಂಗಳೂರಿಗೆ ಆಗಮಿಸಿದ ಕಾರಣ ನೂರಾರು ವಿದ್ಯಾರ್ಥಿಗಳು ಇಂದು ಬಹುಮುಖ್ಯ ನೀಟ್ ಪರೀಕ್ಷೆ ಬರೆಯುವುದನ್ನು ತಪ್ಪಿಸಿಕೊಂಡರು.
ಸಿದ್ದರಾಮಯ್ಯ ಅವರು ಸಹ ಈ ಬಗ್ಗೆ ಟ್ವೀಟ್ ಮಾಡಿದ್ದು, ಅವರೂ ಸಹ ಮೋದಿ ಹಾಗೂ ಪಿಯೂಷ್ ಗೋಯಲ್ ಅವರಿಗೆ ಮನವಿ ಮಾಡಿದ್ದು, ವಿದ್ಯಾರ್ಥಿಗಳಿಗೆ ಮರಳಿ ಪರೀಕ್ಷೆ ಬರೆಯಲು ಅವಕಾಶ ಕೊಡುವಂತೆ ಕೇಳಿದ್ದಾರೆ.












Click it and Unblock the Notifications