ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ

By Gururaj
|
Google Oneindia Kannada News

ಬೆಂಗಳೂರು, ಆಗಸ್ಟ್ 13 : ಸರ್ಕಾರಿ ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತದೆ. 2019-20ನೇ ಶೈಕ್ಷಣಿಕ ವರ್ಷದಿಂದ ಇದನ್ನು ಜಾರಿಗೆ ತರಲು ಸಿದ್ಧತೆ ನಡೆದಿದೆ.

ಉನ್ನತ ಶಿಕ್ಷಣ ಇಲಾಖೆ ಈ ಕುರಿತು ಯೋಜನೆಯನ್ನು ತಯಾರು ಮಾಡಿದೆ. ಬ್ಯಾಂಕಿಂಗ್, ನಾಗರಿಕ ಸೇವಾ ಪರೀಕ್ಷೆ, ರೈಲ್ವೆ ನೇಮಕಾತಿಗಳ ಪರೀಕ್ಷೆಗಳಿಗೆ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಲು ಚಿಂತನೆ ನಡೆಸಲಾಗಿದೆ.

ಪಿಯು ವಿದ್ಯಾರ್ಥಿಗಳಿಗೆ ಉಚಿತವಾಗಿ ಸ್ಮರ್ಧಾತ್ಮಕ ಪರೀಕ್ಷೆ ತರಬೇತಿಪಿಯು ವಿದ್ಯಾರ್ಥಿಗಳಿಗೆ ಉಚಿತವಾಗಿ ಸ್ಮರ್ಧಾತ್ಮಕ ಪರೀಕ್ಷೆ ತರಬೇತಿ

412 ಕಾಲೇಜುಗಳನ್ನು ಓದುತ್ತಿರುವ ಸುಮಾರು 3.04 ಲಕ್ಷ ವಿದ್ಯಾರ್ಥಿಗಳಿಗೆ ಈ ಯೋಜನೆಯ ಅನ್ವಯ ಲಾಭ ಸಿಗಲಿದೆ. ಪದವಿ ನಂತರ ವಿದ್ಯಾರ್ಥಿಗಳು ಉದ್ಯೋಗಕ್ಕಾಗಿ ಹುಡುಕಾಟ ನಡೆಸುವುದನ್ನು ತಪ್ಪಿಸಲು ತರಬೇತಿ ನೀಡಲಾಗುತ್ತದೆ.

Students of govt degree colleges will train for competitive exam

ಸರ್ಕಾರಿ ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಬಡ ಮತ್ತು ಮಧ್ಯಮ ವರ್ಗದ ಕುಟುಂಬದಿಂದ ಬಂದಿರುತ್ತಾರೆ. ಅವರು ಸಾವಿರಾರು ರೂಪಾಯಿಗಳ ಶುಲ್ಕ ಕಟ್ಟಿ, ಖಾಸಗಿ ಸಂಸ್ಥೆಗಳಲ್ಲಿ ತರಬೇತಿ ಪಡೆಯುವುದು ಸಾಧ್ಯವಾಗುವುದಿಲ್ಲ.

ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಇಲಾಖೆ ವಿವಿಧ ರೀತಿಯ ತರಬೇತಿಯನ್ನು ಆಯೋಜನೆ ಮಾಡಲಿದೆ. ವಿದ್ಯಾರ್ಥಿಗಳು ತಮಗೆ ಅಗತ್ಯವೆನಿಸಿದ ಕೋರ್ಸ್‌ಗಳಿಗೆ ಸೇರಬಹುದಾಗಿದೆ. ಇಂತಹ ತರಬೇತಿ ಆರಂಭಿಸಬೇಕು ಎಂದು ಹಿಂದಿನಿಂದಲೂ ಬೇಡಿಕೆ ಇತ್ತು.

ಪಿಯು ವಿದ್ಯಾರ್ಥಿಗಳಿಗೂ ತರಬೇತಿ : ಶಿಕ್ಷಣ ಇಲಾಖೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಸಿಇಟಿ ಸೇರಿದಂತೆ ಸರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ತರಬೇತಿ ನೀಡಲು ಯೋಜನೆ ರೂಪಿಸಿದೆ.

English summary
Karnataka Department of Higher Education will train students of government degree colleges for various competitive examinations banking, civil services and railways. This project will be implemented from the 2019-2020 academic year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X