ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದ್ವಿತೀಯ ಪಿಯುಸಿ ಫಲಿತಾಂಶ ಯಾರಿಗೆ ತೃಪ್ತಿ ತಂದಿಲ್ಲ, ಜು.30ರೊಳಗೆ ಅರ್ಜಿ ಸಲ್ಲಿಸಿ: ಸುರೇಶ್ ಕುಮಾರ್

|
Google Oneindia Kannada News

ಬೆಂಗಳೂರು, ಜುಲೈ 21: ದ್ವಿತೀಯ ಪಿಯುಸಿ ಫಲಿತಾಂಶದ ಕುರಿತು ತೃಪ್ತಿ ಇಲ್ಲದವರು ಜುಲೈ 30ರೊಳಗೆ ಅರ್ಜಿ ಸಲ್ಲಿಸಿ ಎಂದು ಸಚಿವ ಸುರೇಶ್ ಕುಮಾರ್ ವಿದ್ಯಾರ್ಥಿಗಳಿಗೆ ತಿಳಿಸಿದ್ದಾರೆ.

ಎಸ್ಎಸ್ಎಲ್‌ಸಿ ಮತ್ತು ಪ್ರಥಮ ಪಿಯುಸಿ ಫಲಿತಾಂಶ ಆಧರಿಸಿ ಪ್ರಕಟಿಸಿರುವ ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶ ತೃಪ್ತಿಕರವಾಗಿಲ್ಲದಿದ್ದಲ್ಲಿ ಅಂತರ ವಿದ್ಯಾರ್ಥಿಗಳು ಜು.30ರೊಳಗೆ ಅರ್ಜಿ ಸಲ್ಲಿಸಬೇಕೆಂದು ಹೇಳಿದ್ದಾರೆ.

2nd PUC ವಿದ್ಯಾರ್ಥಿಗಳ ಕೊರೊನಾ ಪ್ಯಾಕೇಜ್ ಫಲಿತಾಂಶ ಪ್ರಕಟ 2nd PUC ವಿದ್ಯಾರ್ಥಿಗಳ ಕೊರೊನಾ ಪ್ಯಾಕೇಜ್ ಫಲಿತಾಂಶ ಪ್ರಕಟ

ಸಲ್ಲಿಕೆಯಾದ ಅರ್ಜಿಗಳನ್ನು ಪ್ರಾಂಶುಪಾಲರು ಸ್ಟೂಟೆಂಟ್ಸ್ ಅಜಿವ್ಮೆಂಟ್ ಟ್ರ್ಯಾಕಿಂಗ್ ಪೋರ್ಟಲ್ ನಲ್ಲಿ ದಾಖಲಿಸಲು ಜು.30 ಕೊನೆಯ ದಿನವಾಗಿದೆ. ಜು.31ರೊಳಗೆ ಅರ್ಜಿಗಳನ್ನು ಕಡ್ಡಾಯವಾಗಿ ತಮ್ಮ ಜಿಲ್ಲಾ ಉಪನಿರ್ದೇಶಕ ಕಚೇರಿಕೆ ಸಲ್ಲಿಸಬೇಕು. ಉಪ ನಿರ್ದೇಶಕರು ಆಗಸ್ಟ್ 2ರೊಳಗೆ ಇಲಾಖೆಯ ಕೇಂದ್ರ ಕಚೇರಿಗೆ ಕಳುಹಿಸಬೇಕು.

Students Unhappy With 2nd PUC Results Will Have To Register For Supplementary Examination By July 30

ಪಿಯು ಪರೀಕ್ಷಾ ಶುಲ್ಕ ಮರುಪಾವತಿ ಕುರಿತು ಪ್ರತಿಕ್ರಿಯೆ ನೀಡಿದ ಅವರು, 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾಗಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಶುಲ್ಕವನ್ನು ವಿದ್ಯಾರ್ಥಿಗಳಿಗೆ ಹಿಂತಿರುಗಿಸುವ ಯಾವುದೇ ಚಿಂತನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪರೀಕ್ಷೆ ರದ್ದಾದರೂ ಫಲಿತಾಂಶ ನೀಡಲು ಇಲಾಖೆಗೆ ಹಾಲಿ ಸಂಗ್ರಹಿಸಿರುವ ಪರೀಕ್ಷಾ ಶುಲ್ಕದ ಮೊತ್ತಕ್ಕಿಂತ ಹೆಚ್ಚು ವೆಚ್ಚ ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಆಗಿದೆ. ಹಾಗಾಗಿ ಪರೀಕ್ಷಾ ಶುಲ್ಕ ವಾಪಸ್ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಫಲಿತಾಂಶ ತೃಪ್ತಿಕರವಾಗಿಲ್ಲದಿದ್ದಲ್ಲಿ ವಿದ್ಯಾರ್ಥಿಗಳು ಜು.30ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅಂತಹ ವಿದ್ಯಾರ್ಥಿಗಳು ತಮ್ಮ ಶಾಲೆಯ ಪ್ರಾಂಶುಪಾಲರನ್ನು ಭೇಟಿಯಾಗಿ ಅರ್ಜಿ ಸಲ್ಲಿಸಬರಹುದು. ಫಲಿತಾಂಶ ರದ್ದುಪಡಿಸಿಕೊಂಡ ವಿದ್ಯಾರ್ಥಿಗಳಿಗೆ ಆಗಸ್ಟ್ ನಲ್ಲಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

ಉತ್ತೀರ್ಣರಾದವರಿಗೆ ಪದವಿಗೆ ಅವಕಾಶ: ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾದ ಪ್ರತಿಯೊಬ್ಬ ವಿದ್ಯಾರ್ಥಿಗೂ ಪದವಿ ವ್ಯಾಸಂಗಕ್ಕೆ ಅವಕಾಶವಾಗುವಂತೆ ಪದವಿ ಕಾಲೇಜುಗಳಲ್ಲಿನ ಸೀಟುಗಳ ಸಂಖ್ಯೆ ಹೆಚ್ಚಿಸಲು ಉನ್ನತ ಶಿಕ್ಷಣ ಇಲಾಖೆ ಕ್ರಮವಹಿಸಲಿದೆ ಎಂದು ಸಚಿವ ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ.

Recommended Video

ಶ್ರೀಲಂಕಾ ತಂಡದ ಕೋಚ್ ನಿನ್ನೆ ನಡೆದುಕೊಂಡ ರೀತಿ ಇದು | Oneindia Kannada

ಈ ಬಾರಿ ಪರೀಕ್ಷೆ ಬರೆದಿದ್ದ ಎಲ್ಲಾ ವಿದ್ಯಾರ್ಥಿಗಳನ್ನೂ ಪಾಸು ಮಾಡಿರುವುದರಿಂದ ಉನ್ನತ ಶಿಕ್ಷಣ ಪ್ರವೇಶಕ್ಕೆ ಸಹಜವಾಗಿಯೇ ಸಂಖ್ಯೆ ಹೆಚ್ಚಾಗಲಿದೆ. ಈ ಸಂಬಂಧ ಈಗಾಗಲೇ ಉನ್ನತ ಶಿಕ್ಷಣ ಇಲಾಖೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿಎನ್.ಅಶ್ವತ್ಥ ನಾರಾಯಣ ಅವರೊಂದಿಗೆ ಮಾತುಕತೆ ನಡೆಸಲಾಗಿದೆ.

English summary
Students unhappy with PUC II results will have to register for supplementary examination by July 30. The exams will be held from August 19 to September 3.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X