ಸರದಿಯ ಆಧಾರದ ಮೇಲೆ ಭಾನುವಾರವೂ ಸಬ್ ರಿಜಿಸ್ಟ್ರಾರ್ ಕಚೇರಿ ತೆರೆಯಲು ಆದೇಶ
ಬೆಂಗಳೂರು, ಮಾರ್ಚ್ 15: ಬೆಂಗಳೂರು ಸೇರಿ ಮಹಾನಗರ ಪಾಲಿಕೆ ವ್ಯಾಪ್ತಿಯ ನೋಂದಣಿ ಕಚೇರಿಗಳನ್ನು ಭಾನುವಾರವೂ ಸಹಿತ ಕಾರ್ಯನಿರ್ವಹಿಸುವಂತೆ ಆದೇಶ ಮಾಡಲಾಗುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಮಾರ್ಚ್ 13 ರಂದು ಮಾಹಿತಿ ನೀಡಿದ್ದರು. ಇದರ ಬೆನ್ನಲ್ಲೇ ಸರ್ಕಾರ ಈ ಬಗ್ಗೆ ಆದೇಶ ಹೊರಡಿಸಿದೆ.
ಸಾರ್ವಜನಿಕರ ಅನುಕೂಲಕ್ಕಾಗಿ ಉತ್ತಮ ಸೇವೆಯನ್ನು ನೀಡುವ ಹಾಗೂ ಆಡಳಿತ ಸುಧಾರಣೆ ಮತ್ತು ಜನಸ್ನೇಹಿ ಆಡಳಿತಕ್ಕಾಗಿ ಪ್ರಾಯೋಗಿಕವಾಗಿ ಮೊದಲನೇ ಹಂತದಲ್ಲಿ ಮಾರ್ಚ್ 2024 ರಿಂದ ಪ್ರಾರಂಭಿಸುತ್ತಾ ಬೆಂಗಳೂರು ನಗರ ಜಿಲ್ಲೆಯ 5 ನೋಂದಣಿ ಜಿಲ್ಲೆಗಳಲ್ಲಿ ಪ್ರತಿ ಒಂದು ನೋಂದಣಿ ಜಿಲ್ಲೆಯಲ್ಲಿ ಒಂದು ಉಪ ನೋಂದಣಿ ಕಚೇರಿಯು ಪಾರದರ್ಶಕ ವಾರದ ಸರದಿಯ ಆಧಾರದ ಮೇಲೆ ತೆರಯಲು ನಿರ್ಧರಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ನೋಂದಣಿ ಜಿಲ್ಲೆಯ ವ್ಯಾಪ್ತಿಯಲ್ಲಿನ ಉಪ ನೋಂದಣಿ ಕಚೇರಿಗಳ ಪೈಕಿ ಯಾವುದಾದರೂ ಒಂದು ಉಪ ನೋಂದಣಿ ಕಚೇರಿ ಪಾರದರ್ಶಕವಾದ ವಾರದ ಸರದಿಯ ಆಧಾರದ ಮೇಲೆ ಪ್ರತಿ ಭಾನುವಾರ ಕಾರ್ಯನಿರ್ವಹಿಸುವಂತೆ ಆದೇಶಿಸಲಾಗಿದೆ. ಇದಕ್ಕೆ ಬದಲಾಗಿ ಆ ವಾರದ ಮಂಗಳವಾರದ ದಿನದಂದು ಸದರಿ ಕಚೇರಿಗೆ ಪರಿಹಾರವಾಗಿ ರಜೆಯನ್ನು ನೀಡಲು ಆದೇಶಿಸಿದೆ.
ಇದೇ ರೀತಿ ಪ್ರಾಯೋಗಿಕವಾಗಿ ಏಪ್ರಿಲ್ ಮಾಹೆಯಿಂದ ರಾಜ್ಯದ ಬೆಂಗಳೂರು ನಗರ ನೋಂದಣಿ ಜಿಲ್ಲೆಗಳು ಮತ್ತು ಬೆಂಗಳೂರು ಗ್ರಾಮಾಂತರ ನೋಂದಣಿ ಜಿಲ್ಲೆಯು ಸೇರಿದಂತೆ ರಾಜ್ಯದ ಇತರೆ ಎಲ್ಲಾ ನೋಂದಣಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಉಪ ನೋಂದಣಿ ಕಚೇರಿಗಳಲ್ಲಿ ಒಂದು ಉಪ ನೋಂದಣಿ ಕಚೇರಿಯನ್ನು ಪಾರದರ್ಶಕವಾದ ವಾರದ ಸರದಿಯ ಆಧಾರದ ಮೇಲೆ ಪ್ರತಿ ಭಾನುವಾರ ಕಾರ್ಯನಿರ್ವಹಿಸುವಂತೆ ಹಾಗೂ ಇದಕ್ಕೆ ಬದಲಾಗಿ ಸದರಿ ಕಛೇರಿಗಳಿಗೆ ಆ ವಾರದ ಮಂಗಳವಾರ ದಿನದಂದು ಪರಿಹಾರವಾಗಿ ರಜೆಯನ್ನು ನೀಡಲು ಆದೇಶಿಸಿದೆ.
ನೋಂದಣಿ ಜಿಲ್ಲೆಯ ಉಪ ನೋಂದಣಿ ಕಚೇರಿಗಳ ಪೈಕಿ ಭಾನುವಾರದಂದು ಪಾರದರ್ಶಕ ವಾರದ ಸರದಿಯ ಆಧಾರದ ಮೇಲೆ ಕಾರ್ಯನಿರ್ವಹಿಸುವ ಉಪ ನೋಂದಣಿ ಕಚೇರಿಯ ವಿವರಗಳನ್ನು ಈ ಕೂಡಲೇ ನೋಂದಣಿ ಮಹಾಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತರು ಸಾರ್ವಜನಿಕರ ಮಾಹಿತಿಗಾಗಿ ಅವರ ಕಚೇರಿಯ ಅಧಿಕೃತ ಜಾಲತಾಣದಲ್ಲಿ ಹಾಗೂ ಕಾವೇರಿ-2 ಜಾಲತಾಣದಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟಿಸುವುದು.

ಭಾನುವಾರದಂದು ಕಾರ್ಯನಿರ್ವಹಿಸುವ ಉಪ ನೋಂದಣಿ ಕಚೇರಿಗಳಲ್ಲಿ ದಸ್ತಾವೇಜುಗಳನ್ನು ನೋಂದಾಯಿಸಿಕೊಳ್ಳಲು ಸಾರ್ವಜನಿಕರು ಅನುಕೂಲಕರ ಸಮಯವನ್ನು ನಿಗದಿಪಡಿಸಿಕೊಳ್ಳಲು ಕಾವೇರಿ-2 ತಂತ್ರಾಂಶದಲ್ಲಿ ಸೂಕ್ತ ಪಾರದರ್ಶಕ ಅವಕಾಶಗಳನ್ನು ಕಲ್ಪಿಸಲು ನೋಂದಣಿ ಮಹಾಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತರು ಅವಶ್ಯಕ ಕ್ರಮ ಕೈಗೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications