ಉಪನೋಂದಣಾಧಿಕಾರಿ ಕಚೇರಿ ಕೆಲಸದ ಅವಧಿ ವಿಸ್ತರಣೆ, ಪೂರ್ಣ ತಿಳಿಯಿರಿ
ಬೆಂಗಳೂರು, ಸೆಪ್ಟಂಬರ್ 22: ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಉಪ ನೋಂದಣಾಧಿಕಾರಿ ಕಚೇರಿ (Sub Registrar office) ಕೆಸಲದ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಈ ಕುರಿತು ಖುದ್ದು ಮುದ್ರಾಂಕ ಇಲಾಖೆ ಆದೇಶ ಹೊರಡಿಸಿದೆ.
ಪ್ರಸಕ್ತ ಸಾಲಿನ (2023-24) ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರಗಳನ್ನು ಪರಿಷ್ಕರಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ನೋಂದಣಿ ಮಾಡಿಸುವ ನಾಗರಿಕರ ಸಂಖ್ಯೆ ಹೆಚ್ಚಳವಾಗುವ ನಿರೀಕ್ಷೆಗಳು ಇವೆ. ಈ ಕಾರಣದಿಂದ ಇದೇ ತಿಂಗಳಾಂತ್ಯ ಸೆಪ್ಟಂಬರ್ 30ರವರೆಗೆ ರಾಜ್ಯದ ಎಲ್ಲಾ ಉಪ ನೋಂದಣಾಧಿಕಾರಿ (ಸಬ್ ರಿಜಿಸ್ಟ್ರಾರ್ ಕಚೇರಿ) ಅವಧಿಯನ್ನು ಬೆಳಗ್ಗೆ 8 ರಿಂದ ರಾತ್ರಿ 8 ರವರಗೆ ಶುಕ್ರವಾರ ವಿಸ್ತರಣೆ ಮಾಡಲಾಗಿದೆ.

ಈ ಸಂಬಂಧ ಶುಕ್ರವಾರ ನೋಂದಣಿ ಮಹಾಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತ ಬಿ.ಆರ್ ಮಮತಾ ಪ್ರಕಟಣೆ ಹೊರಡಿಸಿದ್ದಾರೆ. ಕಚೇರಿ ಕಾರ್ಯನಿರ್ವಹಣಾ ಅವಧಿ ವಿಸ್ತರಿಸಿದ್ದರಿಂದ ನೋಂದಣಿಗಳು ಹೆಚ್ಚಾದರೂ ಸಹಿತ ಸಾರ್ವಜನಿಕರಿಗೆ ತೊಂದರೆ ಆಗುವುದಿಲ್ಲ.
ಸೆಪ್ಟೆಂಬರ್ 23 ನಾಲ್ಕನೇ ಶನಿವಾರದಂದೂ ಸಹ ಕಚೇರಿ ಕಾರ್ಯ ನಿರ್ವಹಣೆ ಮಾಡಲಿದೆ. ಈ ಹೆಚ್ಚುವರಿ ಕೆಲಸದ ಅವಧಿ ಸ. 30 ರವರೆಗೆ ಮಾತ್ರ ಅನ್ವಯ ಆಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.












Click it and Unblock the Notifications