DCM DK Shivakumar: 11 ಸಾವಿರ ಕೋಟಿ ಮೊತ್ತದ ನೀರಾವರಿ ಯೋಜನೆಗಳ ಕುರಿತು ಪ್ರಸ್ತಾವನೆ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು, ಫೆಬ್ರವರಿ 27: ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ 11 ಸಾವಿರ ಕೋಟಿ ಮೊತ್ತದ ರಾಜ್ಯದ ವಿವಿಧ ನೀರಾವರಿ ಯೋಜನೆಗಳ ಜತೆಗೆ ಮೇಕೆದಾಟು ಯೋಜನೆ ವಿಚಾರದಲ್ಲಿ ಕೇಂದ್ರ ಸರ್ಕಾರದ ನಿಲುವು ಸ್ಪಷ್ಟಪಡಿಸುವಂತೆ ಕೇಂದ್ರ ಜಲಶಕ್ತಿ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ರಾಜಸ್ಥಾನದ ಉದಯಪುರದಲ್ಲಿ ಕೇಂದ್ರ ಜಲಶಕ್ತಿ ಸಚಿವಾಲಯದಿಂದ ಆಯೋಜಿಸಲಾಗಿದ್ದ ಸಮ್ಮೇಳನದಲ್ಲಿ ವಿವಿಧ ರಾಜ್ಯಗಳ 34 ಜಲಸಂಪನ್ಮೂಲ ಸಚಿವರು, 4-5 ಮುಖ್ಯಮಂತ್ರಿಗಳು, ಕೆಲವು ರಾಜ್ಯಗಳ ಉಪಮುಖ್ಯಮಂತ್ರಿಗಳು ಭಾಗವಹಿಸಿದ್ದರು. ನಮ್ಮ ರಾಜ್ಯದಿಂದ ನಾನು ಹಾಗೂ ನಮ್ಮ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಭಾಗವಹಿಸಿದ್ದೆವು. ನಮ್ಮ ರಾಜ್ಯದ ನೀರಾವರಿ ಯೋಜನೆಗಳ ವಿಚಾರವನ್ನು ನಾನು ಪ್ರಸ್ತಾಪ ಮಾಡಿದ್ದೆ. ಈ ವಿಚಾರವಾಗಿ ಜಲಶಕ್ತಿ ಸಚಿವರ ಬಳಿಯೂ ವೈಯಕ್ತಿಕವಾಗಿ ಈ ವಿಚಾರ ಪ್ರಸ್ತಾಪಿಸಿದ್ದೆವು. ನಂತರ ಕೇಂದ್ರ ಜಲಶಕ್ತಿ ಸಚಿವರು ನಿನ್ನೆ ಸಭೆ ಮಾಡಲು ಸಮಯ ನೀಡಿದ್ದರು. ಕೇಂದ್ರ ಜಲಶಕ್ತಿ ಸಚಿವಾಲಯ ಹಾಗೂ ರಾಜ್ಯದ ಎಲ್ಲಾ ಅಧಿಕಾರಿಗಳ ಸಭೆ ಮಾಡಿದೆವು ಎಂದು ತಿಳಿಸಿದರು.

ಈ ಯೋಜನೆ ವಿಚಾರವಾಗಿ ಕೇಂದ್ರ ಸರ್ಕಾರದ ನಿಲುವೇನು ಎಂದು ತಿಳಿಸುವಂತೆ ಕೇಳಿದ್ದೇವೆ. ಈ ವಿಚಾರದಲ್ಲಿ ಸಮಯವ್ಯರ್ಥ ಮಾಡುವುದು ಬೇಡ. ಈ ಯೋಜನೆ ಮಾಡಲು ನೀವು ಬದ್ಧರಾಗಿದ್ದೀರಾ ಅಥವಾ ಇಲ್ಲವೇ? ಕೇಂದ್ರ ಜಲಶಕ್ತಿ ಸಚಿವಾಲಯ ನ್ಯಾಯದ ಸ್ಥಾನದಲ್ಲಿ ಕೂತಿದ್ದು, ಈ ಯೋಜನೆ ಬಗ್ಗೆ ನಿಲುವೇನು ಎಂಬುದನ್ನು ಸ್ಪಷ್ಟಪಡಿಸುವಂತೆ ಕೇಳಿದ್ದೇವೆ. ಈ ಯೋಜನೆಯಿಂದ ಎರಡೂ ರಾಜ್ಯಗಳಿಗೆ ಉಪಯೋಗವಾಗಬೇಕು. ಇನ್ನು ಪೆನ್ನಾರ್ ನದಿ ವಿಚಾರವಾಗಿ ಕರ್ನಾಟಕ ಹಾಗೂ ತಮಿಳುನಾಡು ನಡುವೆ ತಿಕ್ಕಾಟವಿದ್ದು, ಸಂಧಾನದ ಮೂಲಕ ಈ ಸಮಸ್ಯೆ ಬಗೆಹರಿಸಿಕೊಳ್ಳಬಹುದೇ ಎಂದು ಕೇಳಿದ್ದೇವೆ. ಕಳೆದ ವರ್ಷ 300 ಟಿಎಂಸಿ, ಅದಕ್ಕೂ ಹಿಂದಿನ ವರ್ಷ 400 ಟಿಎಂಸಿ ನೀರು ಸಮುದ್ರಕ್ಕೆ ಸೇರಿದೆ. ಇದನ್ನು ನಾವು ಬಳಸಿಕೊಳ್ಳಬೇಕು ಎಂದು ತಿಳಿಸಿದರು.
ಈ ಮಧ್ಯೆ ತುಂಗಭದ್ರಾ ಅಣೆಕಟ್ಟಿನಲ್ಲಿ ಹೂಳು ತುಂಬಿಕೊಂಡಿರುವ ಹಿನ್ನೆಲೆಯಲ್ಲಿ ಸುಮಾರು 30 ಟಿಎಂಸಿ ನೀರು ನಷ್ಟವಾಗುತ್ತಿದೆ. ಹೀಗಾಗಿ ನವಲಿ ಬಳಿ ಸಮಾನಾಂತರ ಅಣೆಕಟ್ಟು ನಿರ್ಮಾಣ ಮಾಡುವ ಯೋಜನೆ ಇದೆ. ಈ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಹಾಗೂ ತೆಲಂಗಾಣ ಸಚಿವರು ಹಾಗೂ ಅಧಿಕಾರಿಗಳ ಜತೆ ಪ್ರತ್ಯೇಕ ಸಭೆ ಮಾಡಲಾಯಿತು. ಅದನ್ನು ಕೇಂದ್ರ ಸಚಿವರ ಗಮನಕ್ಕೂ ತರಲಾಯಿತು. ಈ ಬಗ್ಗೆ ನೀವೆ ಕೂತು ಚರ್ಚೆ ಮಾಡಿ. ನೀವು ಒಮ್ಮತಕ್ಕೆ ಬಂದರೆ ನಮಗೂ ಒಪ್ಪಿಗೆ ಇದೆ ಎಂದು ಕೇಂದ್ರ ಸಚಿವರು ತಿಳಿಸಿದರು.
ಈ ವಿಚಾರವಾಗಿ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಪ್ರತ್ಯೇಕವಾಗಿ ಕರೆ ಮಾಡಿ ಮಾರ್ಚ್ ಮೊದಲ ವಾರದಲ್ಲಿ ಚರ್ಚೆ ಮಾಡಲು ಸಮಯಾವಕಾಶ ನೀಡಿ ಎಂದು ಕೇಳಿದ್ದೇವೆ. ಈ ಯೋಜನೆಗೆ ನಮ್ಮ ತಾಂತ್ರಿಕ ಸಲಹಾ ಸಮಿತಿಯು ಪರ್ಯಾಯ ಮಾರ್ಗವನ್ನು ಸೂಚಿಸಿದ್ದು, ಇದನ್ನು ಉಭಯ ರಾಜ್ಯಗಳ ಜತೆ ಚರ್ಚೆ ಮಾಡದೇ ಮಾಧ್ಯಮಗಳ ಮುಂದೆ ಹೇಳಲು ಸಾಧ್ಯವಿಲ್ಲ. ಈ ಹಿಂದೆ ಹೂಳೆತ್ತಲು ಅನೇಕ ಪ್ರಸ್ತಾವನೆಗಳು ಬಂದಿದ್ದವು. 24-30 ಟಿಎಂಸಿ ನೀರು ಸಂಗ್ರಹವಾಗುವಷ್ಟು ಹೂಳನ್ನು ಎತ್ತಿ ಎಲ್ಲಿ ಹಾಕಬೇಕು? ಇದಕ್ಕೆ ತಗಲುವ ವೆಚ್ಚ ಗಮನಿಸಿ ತಾಂತ್ರಿಕ ಸಮಿತಿ ಈ ಪ್ರಸ್ತಾವನೆ ನೀಡಿದೆ. ಆಂಧ್ರ ಪ್ರದೇಶ ಸಿಎಂ ಮಾರ್ಚ್ ಮೊದಲ ವಾರದಲ್ಲಿ ಸಭೆಗೆ ಕಾಲಾವಕಾಶ ನೀಡಲಿದ್ದು, ಅವರು ಸಮಯ ನಿಗದಿ ಮಾಡಿದ ಬಳಿಕ ನಾನು ಹಾಗೂ ಇಡೀ ತಂಡ ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿದ್ದೇವೆ ಎಂದರು.
ಉಳಿದಂತೆ ನದಿ ಜೋಡಣೆ ವಿಚಾರವಾಗಿ ಕೇಂದ್ರ ಸರ್ಕಾರದ ಮುಂದೆ ಅನೇಕ ಪ್ರಸ್ತಾಪಗಳಿದ್ದು, ನಾವು ನಮ್ಮ ಪಾಲಿನ ನೀರಿನ ಬಗ್ಗೆ ಪ್ರಸ್ತಾವನೆ ಮಾಡಿದ್ದೇವೆ. ಇದರ ಜತೆಗೆ ರಾಜ್ಯದ ಆಣೆಕಟ್ಟುಗಳ ಗೇಟ್ ಬದಲಾವಣೆ ಹಾಗೂ ಸುರಕ್ಷತಾ ಕ್ರಮಗಳ ಬಗ್ಗೆ ತಾಂತ್ರಿಕ ಸಮಿತಿ ನೇಮಿಸಲಾಗಿದೆ. ಇನ್ನು ಕಾಲುವೆಗಳ ನೀರು ಕೊನೆ ಭಾಗದವರೆಗೂ ತಲುಪಲು ಅಗತ್ಯ ಕ್ರಮ ಕೈಗೊಳ್ಳಲು ಅತ್ಯಾಧುನಿಕ ತಂತ್ರಜ್ಞಾನ ಒಳಗೊಂಡ ಯೋಜನೆ ರೂಪಿಸಲಾಗಿದೆ.
ಮಾರ್ಚ್ 18ರ ಒಳಗಾಗಿ ಮತ್ತೆ ಭೇಟಿ ಮಾಡಿ ಸಭೆ ನಡೆಸಲು ಕೇಂದ್ರ ಸಚಿವರ ಬಳಿ ಕಾಲಾವಕಾಶ ಪಡೆಯಲಾಗಿದೆ. ಜಲಶಕ್ತಿ ಇಲಾಖೆ ರಾಜ್ಯ ಸಚಿವರಾದ ಸೋಮಣ್ಣ ಅವರ ಅಭಿಪ್ರಾಯವನ್ನು ಪಡೆದು ನಾವು ಸಭೆ ಮಾಡಿದ್ದೇವೆ. ನಮ್ಮ ರಾಜ್ಯದ ಹಿತಕ್ಕೆ ಪರವಾಗಿ ಅವರು ಚರ್ಚೆ ಮಾಡಿದ್ದಾರೆ ಎಂದರು.
-
Tamilnadu Election 2026: ಮಹಿಳೆಯರಿಗೆ 2 ಸಾವಿರ: ತಮಿಳುನಾಡಿನ ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆ ಬಿಡುಗಡೆ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ.











Click it and Unblock the Notifications