ಸುದೀಪ್ ರಾಜಕಾರಣಿ ಅಲ್ಲ, ಸೋಲಿಗೆ ಕಿಚ್ಚನನ್ನ ಹೊಣೆ ಮಾಡುವುದು ಸರಿ ಅಲ್ಲ: ಬಸವರಾಜ ಬೊಮ್ಮಾಯಿ

ಬೆಂಗಳೂರು, ಮೇ 14: ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ರಾಜ್ಯ ಬಿಜೆಪಿ ನಾಯಕರನ್ನ ನಿದ್ದೆಗೆಡಿಸಿದೆ. ಈಗಾಗಲೇ ಮೂರು ವರ್ಷಗಳ ಕಾಲ ಅಧಿಕಾರವನ್ನ ನಡೆಸಿದ್ದ ಬಿಜೆಪಿ ನಾಯಕರು ಮತ್ತೊಮ್ಮೆ ಸರ್ಕಾರವನ್ನ ರಚಿಸಲು ಸಿದ್ದತೆಯನ್ನ ನಡೆಸಿದ್ದು, ರಾಜ್ಯದ ಜನತೆ ಈ ಬಾರೀ 136 ಸ್ಥಾನಗಳನ್ನ ಕಾಂಗ್ರೆಸ್‌ ಗ ನೀಡಿದ್ದು, ಬಿಜೆಪಿಗೆ ಭಾರೀ ಹಿನ್ನಡೆಯಾಗಿದೆ.

ಈಗಾಗಲೇ ಬಿಜೆಪಿ ಪಾಳಯದಲ್ಲಿ ಸೋಲಿನ ಹೊಣೆ ವಿಚಾರವಾಗಿ ಚರ್ಚೆಯಾಗುತ್ತಿದ್ದು, ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಸೋಲಿನ ಹೊಣೆ ನಾನೇ ಹೊರುತ್ತೇವೆ ಎಂದು ಇಬ್ಬರು ನಾಯಕರು ಹೇಳಿದ್ದು, ಇದೀಗ ನಟ ಕಿಚ್ಚ ಸುದೀಪ್‌ ಬಿಜೆಪಿ ಪರ ಪ್ರಚಾರ ನಡೆಸಿದ್ದು, ಸೋಲಿನ ಹೊಣೆ ವಿಚಾರವಾಗಿ ಚರ್ಚೆಯಾಗುತ್ತಿದೆ.

basavaraj bommai

ಈ ಕುರಿತು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಸುದೀಪ್ ರಾಜಕಾರಣಿ ಅಲ್ಲ.ಸೋಲಿಗೆ ಅವರನ್ನು ಹೊಣೆ ಅನ್ನುವುದು ಸರಿಯಲ್ಲ‌. ನಾನು ಈಗಾಗಲೇ ಹೇಳಿದ್ದೇನೆ. ಈ ಸೋಲಿಗೆ ನಾನೇ ಹೊಣೆ ಹೊರುತ್ತೇನೆ ಎಂದು ಹೇಳಿದರು.

ಪಕ್ಷಕ್ಕೆ ಆದ ಹಿನ್ನೆಡೆಯ ಜವಬ್ದಾರಿ ನಾನೇ ಹೊರುತ್ತೇನೆ. ಕಳೆದ ಬಾರಿ ನನಗೆ 104 ಸೀಟು ಬಂದಿತ್ತು. ಈ ಬಾರಿ ಪರ್ಸೆಂಟೇಜ್ ಜಾಸ್ತಿ ಬಂದರು, ಕಡಿಮೆ ಸೀಟು ಬಂದಿವೆ.ಏನೇ ಆಗಲಿ ಸೋಲು ಸೋಲು. ನಾವು ಇದರ ಬಗ್ಗೆ ಆತ್ಮವಲೋಕನ ಮಾಡಿ, ಎಲ್ಲಿ ತಪ್ಪು ಆಗಿದೆ ಅದನ್ನು ಸರಿಪಡಿಸುವ ಕೆಲಸ ಮಾಡುತ್ತೇವೆ ಎಂದರು.

ನಮ್ಮದು ಒಂದು ರಾಷ್ಟ್ರೀಯ ಪಕ್ಷ. ನಾವು ಕೇವಲ ಚುನಾವಣಗೆ ಮಾತ್ರ ಕೆಲಸ ಮಾಡಲ್ಲ. ರಾಷ್ಟ್ರದ ನಿರ್ಮಾಣಕ್ಕೆ ಕೆಲಸ ಮಾಡುತ್ತೇವೆ. ಇನ್ನೇನು ಕೇವಲ 8 ರಿಂದ 10 ತಿಂಗಳಲ್ಲಿ ಲೋಕಸಭೆ ಚುನಾವಣೆ ಬರುತ್ತಿದೆ. ಆ ಚುನಾವಣೆಗೆ ಪಕ್ಷ ಗಟ್ಟಿಗೊಳಿಸುವ ಕೆಲಸ ಮಾಡುತ್ತೇವೆ. ಈ ಚುನಾವಣೆ ಫಲಿತಾಂಶ ಮುಂದಿನ ಚುನಾವಣೆಗೆ ದಿಕ್ಸೂಚಿ ಅಲ್ಲ ಎಂದರು.

basavaraj bommai

ನಾವು ಹಿಂದೆ ಎಷ್ಟೋ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳನ್ನು ನೋಡಿದ್ದೇವೆ. ಸೋಲಿಗೆ ಹಲವಾರು ರೀತಿಯ ಕಾರಣಗಳು ಇವೆ. ಅವುಗಳನ್ನು ಎಲ್ಲವನ್ನೂ ಕುಳಿತು ಚರ್ಚೆ ಮಾಡುತ್ತೇವೆ. ಏನು ವ್ಯತ್ಯಾಸ ಆಗಿದೆ, ಎಲ್ಲಿ ಏನಾಗಿದೆ ಎಂದು ಚರ್ಚಿಸಿ, ಆಗಿದ್ದ ತಪ್ಪುಗಳನ್ನು ಸರಿಪಡಿಸಿಕೊಳ್ಳುತ್ತೇವೆ. ರಾಜ್ಯದ ಆರ್ಥಿಕ ಸ್ಥಿತಿ ಹಾಳು ಮಾಡದೇ ಜನರ ಕಲ್ಯಾಣ ಆಗಲಿ. ಪಕ್ಷಕ್ಕೆ ಆದ ಹಿನ್ನೆಡೆಯ ಜವಾಬ್ದಾರಿ ನಾನೇ ಹೊರುತ್ತೇನೆ. ವಿರೋಧ ಪಕ್ಷದಲ್ಲಿದ್ದು ಸಮರ್ಪಕವಾಗಿ ಕೆಲಸ ಮಾಡುತ್ತೇವೆ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಆಡಳಿತ ವಿರೋಧಿ ಅಲೆಗೆ ಸೋಲಾಗಿದ್ಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸೋಲಿಗೆ ಅನೇಕ‌ ಕಾರಣಗಳಿದೆ. ನಮ್ಮ ವೋಟ್‌ಬ್ಯಾಂಕ್ ಸರಿಯಾಗಿ ಕ್ರೋಡಿಕರಣವಾಗಿಲ್ಲ, ಅನೇಕ‌ ಕಾರಣಗಳಿದೆ ಒಂದೇ ಕಾರಣದಿಂದ ಸೋತಿಲ್ಲ, ಬೇರೆ ಬೇರೆ ರೀತಿಯಲ್ಲಿ ಸೋಲಿಗೆ ಕಾರಣವಾಗಿದೆ. ಲೋಕಸಭಾ ಚುನಾವಣೆಯ‌ ವಿಷಯವೇ ಬೇರೆ, ಅದು ಬೇರೆಯದೆ ಆಧಾರದಲ್ಲಿ ನಡೆಯಲಿದೆ. ಲೋಕಸಭಾ ಚುನಾವಣೆ,ವಿಧಾನಸಭಾ ಚುನಾವಣೆಗೂ ಭಿನ್ನವಿದೆ ಎಂದರು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+