ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವೈದ್ಯರ ಬೇಡಿಕೆಗೆ ಸ್ಪಂದಿಸಿದ ಸರ್ಕಾರ, ವಿಶೇಷ ಭತ್ಯೆ ಹೆಚ್ಚಳ

|
Google Oneindia Kannada News

ಬೆಂಗಳೂರು, ಡಿಸೆಂಬರ್ 22: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ವೃಂದಗಳ ತಜ್ಞ ವೈದ್ಯರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯಾಧಿಕಾರಿಗಳಿಗೆ ವಿಶೇಷ ಭತ್ಯೆಗಳನ್ನು ಪರಿಷ್ಕರಿಸಿ ಆದೇಶ ಹೊರಡಿಸಲಾಗಿದೆ. ಈ ಮೂಲಕ ವೈದ್ಯರಿಗೆ ತ್ವರಿತವಾಗಿ ಸ್ಪಂದಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಕೋವಿಡ್ ಸಂದರ್ಭದಲ್ಲಿ ವೈದ್ಯರು ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ಮತ್ತು ಭವಿಷ್ಯದಲ್ಲಿ ಯುವ ವೈದ್ಯರು ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಮಾಡಲು ಪ್ರೋತ್ಸಾಹಿಸಲು ತಜ್ಞ ವೈದ್ಯರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ & ದಂತ ಆರೋಗ್ಯಾಧಿಕಾರಿಗಳಿಗೆ 2020 ರ ಸೆಪ್ಟೆಂಬರ್ 1 ರಿಂದ ಜಾರಿಗೆ ಬರುವಂತೆ ವಿಶೇಷ ಭತ್ಯೆಗಳನ್ನು ಪರಿಷ್ಕರಿಸಲಾಗಿದೆ.

ಕರ್ನಾಟಕ ವೈದ್ಯಾಧಿಕಾರಿಗಳ ಸಂಘವು ಸಿಜಿಎಚ್ ಸಿ ಮಾದರಿಯಲ್ಲಿ ಭತ್ಯೆ ಪರಿಷ್ಕರಿಸುವಂತೆ ಕೋರಿತ್ತು. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಸಭೆ ನಡೆಸಿ ಈ ಕುರಿತು ಚರ್ಚೆ ನಡೆಸಿದ್ದರು.

2015 ರಲ್ಲಿ ವಿಶೇಷ ಭತ್ಯೆಗಳನ್ನು ಪರಿಷ್ಕರಿಸಲಾಗಿತ್ತು

2015 ರಲ್ಲಿ ವಿಶೇಷ ಭತ್ಯೆಗಳನ್ನು ಪರಿಷ್ಕರಿಸಲಾಗಿತ್ತು

ಈ ಹಿಂದೆ 2015 ರಲ್ಲಿ ವಿಶೇಷ ಭತ್ಯೆಗಳನ್ನು ಪರಿಷ್ಕರಿಸಲಾಗಿತ್ತು. 0-6 ವರ್ಷ ಸೇವೆ ಸಲ್ಲಿಸಿದ ಎಂಬಿಬಿಎಎಸ್/ಬಿಡಿಎಸ್ ವಿದ್ಯಾರ್ಹತೆ ಇರುವವರಿಗೆ ಮಾಸಿಕ 21,000 ರೂ.ನಿಂದ 30,500 ರೂ., ಸ್ನಾತಕೋತ್ತರ ಪದವಿ/ಡಿಪ್ಲೊಮಾ ವಿದ್ಯಾರ್ಹತೆ ಇರುವವರಿಗೆ ಮಾಸಿಕ 42,600 ರೂ.ನಿಂದ 55,500 ರೂ., ಸೂಪರ್ ಸ್ಪೆಷಾಲಿಟಿ ವಿದ್ಯಾರ್ಹತೆ ಇರುವವರಿಗೆ ಮಾಸಿಕ 50,800 ರೂ.ನಿಂದ 64,500 ರೂ.ಗೆ ಹೆಚ್ಚಿಸಲಾಗಿದೆ.

6-13 ವರ್ಷ ಸೇವೆ ಸಲ್ಲಿಸಿದ ಎಂಬಿಬಿಎಸ್ ವೈದ್ಯರು

6-13 ವರ್ಷ ಸೇವೆ ಸಲ್ಲಿಸಿದ ಎಂಬಿಬಿಎಸ್ ವೈದ್ಯರು

6-13 ವರ್ಷ ಸೇವೆ ಸಲ್ಲಿಸಿದ ಎಂಬಿಬಿಎಸ್/ಬಿಡಿಎಸ್ ಅರ್ಹತೆ ಹೊಂದಿದವರಿಗೆ ಮಾಸಿಕ 22,000 ರೂ.ನಿಂದ 37,500 ರೂ., ಸ್ನಾತಕೋತ್ತರ ಪದವಿ/ಡಿಪ್ಲೊಮಾ ವಿದ್ಯಾರ್ಹತೆ ಇರುವವರಿಗೆ ಮಾಸಿಕ 43,700 ರೂ.ನಿಂದ 64,500 ರೂ., ಸೂಪರ್ ಸ್ಪೆಷಾಲಿಟಿ ವಿದ್ಯಾರ್ಹತೆ ಇರುವವರಿಗೆ ಮಾಸಿಕ 52,100 ರೂ.ನಿಂದ 73,500 ರೂ.ಗೆ ಹೆಚ್ಚಿಸಲಾಗಿದೆ.

13-20 ವರ್ಷ ಸೇವೆ ಸಲ್ಲಿಸಿದ ಎಂಬಿಬಿಎಸ್ ವೈದ್ಯರು

13-20 ವರ್ಷ ಸೇವೆ ಸಲ್ಲಿಸಿದ ಎಂಬಿಬಿಎಸ್ ವೈದ್ಯರು

13-20 ವರ್ಷ ಸೇವೆ ಸಲ್ಲಿಸಿದ ಎಂಬಿಬಿಎಸ್/ಬಿಡಿಎಸ್ ಅರ್ಹತೆ ಹೊಂದಿದವರಿಗೆ ಮಾಸಿಕ 23,000 ರೂ.ನಿಂದ 44,500 ರೂ., ಸ್ನಾತಕೋತ್ತರ ಪದವಿ/ಡಿಪ್ಲೊಮಾ ವಿದ್ಯಾರ್ಹತೆ ಇರುವವರಿಗೆ ಮಾಸಿಕ 44,800 ರೂ.ನಿಂದ 73,500 ರೂ., ಸೂಪರ್ ಸ್ಪೆಷಾಲಿಟಿ ವಿದ್ಯಾರ್ಹತೆ ಇರುವವರಿಗೆ ಮಾಸಿಕ 58,400 ರೂ.ನಿಂದ 83,500 ರೂ.ಗೆ ಹೆಚ್ಚಿಸಲಾಗಿದೆ.

20-25 ವರ್ಷ ಸೇವೆ ಸಲ್ಲಿಸಿದ ಎಂಬಿಬಿಎಸ್ ವೈದ್ಯರು

20-25 ವರ್ಷ ಸೇವೆ ಸಲ್ಲಿಸಿದ ಎಂಬಿಬಿಎಸ್ ವೈದ್ಯರು

20-25 ವರ್ಷ ಸೇವೆ ಸಲ್ಲಿಸಿದ ಎಂಬಿಬಿಎಸ್/ಬಿಡಿಎಸ್ ಅರ್ಹತೆ ಹೊಂದಿದವರಿಗೆ ಮಾಸಿಕ 23,000 ರೂ.ನಿಂದ 52,500 ರೂ., ಸ್ನಾತಕೋತ್ತರ ಪದವಿ/ಡಿಪ್ಲೊಮಾ ವಿದ್ಯಾರ್ಹತೆ ಇರುವವರಿಗೆ ಮಾಸಿಕ 44,800 ರೂ.ನಿಂದ 83,500 ರೂ., ಸೂಪರ್ ಸ್ಪೆಷಾಲಿಟಿ ವಿದ್ಯಾರ್ಹತೆ ಇರುವವರಿಗೆ ಮಾಸಿಕ 58,400 ರೂ.ನಿಂದ 93,500 ರೂ.ಗೆ ಹೆಚ್ಚಿಸಲಾಗಿದೆ.

25 ವರ್ಷಕ್ಕಿಂತ ಹೆಚ್ಚು ವರ್ಷ ಸೇವೆ ಸಲ್ಲಿಸಿದವರು

25 ವರ್ಷಕ್ಕಿಂತ ಹೆಚ್ಚು ವರ್ಷ ಸೇವೆ ಸಲ್ಲಿಸಿದವರು

25 ವರ್ಷಕ್ಕಿಂತ ಹೆಚ್ಚು ವರ್ಷ ಸೇವೆ ಸಲ್ಲಿಸಿದ ಎಂಬಿಬಿಎಸ್/ಬಿಡಿಎಸ್ ಅರ್ಹತೆ ಹೊಂದಿದವರಿಗೆ ಮಾಸಿಕ 23,000 ರೂ.ನಿಂದ 60,500 ರೂ., ಸ್ನಾತಕೋತ್ತರ ಪದವಿ/ಡಿಪ್ಲೊಮಾ ವಿದ್ಯಾರ್ಹತೆ ಇರುವವರಿಗೆ ಮಾಸಿಕ 44,800 ರೂ.ನಿಂದ 93,500 ರೂ., ಸೂಪರ್ ಸ್ಪೆಷಾಲಿಟಿ ವಿದ್ಯಾರ್ಹತೆ ಇರುವವರಿಗೆ ಮಾಸಿಕ 58,400 ರೂ.ನಿಂದ 1,03,500 ರೂ.ಗೆ ಹೆಚ್ಚಿಸಲಾಗಿದೆ.

Recommended Video

Bangalore: ರೂಪಾಂತರಗೊಂಡ ಕೊರೊನಾ ವೈರಸ್‌ ಬಗ್ಗೆ ರಾಜ್ಯದಲ್ಲಿ ಕಟ್ಟೆಚ್ಚರ- ಸಿಎಂ ಯಡಿಯೂರಪ್ಪ ಮಾಹಿತಿ | Oneindia Kannada

English summary
Government has revised special allowance to Specialist doctors, medical officers and dentists working under Karnataka health departmentwith effect from September 1, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X