ಶಾಸಕ ಸುಧಾಕರ್ ಗೆ ಕೊನೆಗೂ ನಿರೀಕ್ಷಿತ ಸ್ಥಾನ ಮಾನ ಕೊಟ್ಟ ಎಚ್ಡಿಕೆ
Recommended Video
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಾತಿಗೆ ಬೆಲೆ ಇದ್ದಿದ್ದರೆ ನನಗೆ ಸಚಿವ ಸ್ಥಾನ ಸಿಗಬೇಕಿತ್ತು' ಎಂದು ಅಸಮಾಧಾನ ಹೊರ ಹಾಕಿದ ಚಿಕ್ಕಬಳ್ಳಾಪುರದ ಶಾಸಕ ಡಾ. ಸುಧಾಕರ್ ಅವರಿಗೆ ಕೊನೆಗೂ ನಿರೀಕ್ಷಿತ ಸ್ಥಾನ ಮಾನ ಸಿಕ್ಕಿದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರನ್ನಾಗಿ ಡಾ.ಕೆ. ಸುಧಾಕರ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರವು ಗುರುವಾರದಂದು ಆದೇಶ ಹೊರಡಿಸಿದೆ.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿದ್ದ ಜಯರಾಮ್ ಅವರು ಗುರುವಾರ ಬೆಳಗ್ಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಸುಧಾಕರ್ ಅವರು ಶೀಘ್ರದಲ್ಲೇ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
ಎಚ್ ಡಿ ಕುಮಾರಸ್ವಾಮಿ ಅವರು ಜೂನ್ 14ರಂದು ಸಂಪುಟ ವಿಸ್ತರಣೆ ಮಾಡಿ ಇಬ್ಬರು ಪಕ್ಷೇತರರನ್ನು ತಮ್ಮ ಸಂಪುಟಕ್ಕೆ ಸೇರಿಸಿಕೊಂಡಿದ್ದರು. ಈ ಮೂಲಕ ಕಾಂಗ್ರೆಸ್ ಕೋಟಾಕ್ಕೆ ಬೆಲೆ ನೀಡಿಲ್ಲ ಎಂಬ ಕೂಗೆದ್ದಿತ್ತು. ಈ ಬಗ್ಗೆ ಅಸಮಾಧನ ವ್ಯಕ್ತಪಡಿಸಿದ್ದ ಸುಧಾಕರ್, ಪಕ್ಷದಲ್ಲಿ ರಾಹುಲ್ ಗಾಂಧಿ ಅವರ ಮಾತಿಗೆ ಬೆಲೆಯೇ ಇಲ್ಲ. ಒಂದು ವೇಳೆ ಅವರ ಮಾತಿಗೆ ಬೆಲೆ ಇದ್ದಿದ್ರೆ, ರಾಹುಲ್ ಗಾಂಧಿ ಭರವಸೆ ನೀಡಿದಾಗಲೇ ನನಗೆ ಸಚಿವ ಸ್ಥಾನ ಸಿಗುತ್ತಿತ್ತು ಎಂದು ಹೇಳಿದ್ದರು, ಆದರೆ, ಸ್ಥಾನ ಮಾನ ಸಿಕ್ಕಿಲ್ಲ ಎಂದರು.

ನಿಜಕ್ಕೂ ನನಗೆ ನೋವು ತಂದಿತ್ತು
"ನನಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನದಿಂದ ಕೋಕ್ನೀಡಲಾಗಿತ್ತು. ಇದು ನಿಜಕ್ಕೂ ನನಗೆ ನೋವು ತಂದಿತ್ತು. ಪರಿಸರ ಕಾಳಜಿಯ ನನ್ನ ಸಾಮರ್ಥ್ಯ ನೋಡಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಅವಕಾಶ ನೀಡಲಾಗಿತ್ತು. ಇದು ನನಗೆ ಬಯಸದೇ ಬಂದ ಭಾಗ್ಯವಾಗಿತ್ತು. ಆದರೆ ಕೊಕ್ ನೀಡಿದ್ದಾರೆ ಎಂದು ತಿಳಿದ ಮೇಲೆ ನನಗೆ ಪ್ರತಿಷ್ಠೆಯ ಪ್ರಶ್ನೆಯಾಗಿತ್ತು," ಎಂದರು. ಆದರೆ, ನನ್ನ ಆತ್ಮಗೌರವಕ್ಕೆ ಚ್ಯುತಿ ತಂದಿದನ್ನು ಸರಿಪಡಿಸಲು ಸಾಧ್ಯವಿಲ್ಲ ಎನ್ನುವ ಮೂಲಕ ತಮ್ಮ ನೋವು ಇನ್ನೂ ಶಮನವಾಗಿಲ್ಲ ಎಂದು ಪರೋಕ್ಷವಾಗಿ ಸೂಚಿಸಿದ್ದಾರೆ.

ನಾನು ಅತೃಪ್ತ ಶಾಸಕರ ಪಟ್ಟಿಯಲ್ಲಿಲ್ಲ
ನಾನು ಅತೃಪ್ತ ಶಾಸಕರ ಪಟ್ಟಿಯಲ್ಲಿಲ್ಲ. ನನಗೆ ಯಾವುದೇ ಅಧಿಕಾರ ಕೊಡಿ ಎಂದು ಯಾರನ್ನು ಕೇಳಿಲ್ಲ. ನನಗೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮುಖ್ಯಸ್ಥನಾಗಲೂ ಸೂಚಿಸಲಾಗಿತ್ತು. ಆದರೆ, ಈ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳು ಆದೇಶ ಹೊರಡಿಸಲಿಲ್ಲ ಎಂದರು. ಹಿರಿಯ ಕಾಂಗ್ರೆಸ್ಸಿಗ ರಾಮಲಿಂಗಾ ರೆಡ್ಡಿ ಅವರಂತೆ ಸುಧಾಕರ್ ಕೂಡಾ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಿದ್ದಾರೆ, ಸಚಿವ ಸ್ಥಾನ ಸಿಗದೆ ಅತೃಪ್ತ ಶಾಸಕರ ಬಣ ಸೇರಿದ್ದಾರೆ ಎಂಬ ಸುದ್ದಿಯನ್ನು ಸುಧಾಕರ್ ಅಲ್ಲಗೆಳೆದಿದ್ದಾರೆ.

ಸೂಕ್ತ ಸ್ಥಾನ ಮಾನದ ನಿರೀಕ್ಷೆಯಿತ್ತು
ಕಾಂಗ್ರೆಸ್ ನಾಯಕರನ್ನು ಹೊರಗಿಟ್ಟು ಪಕ್ಷೇತರರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಬಗ್ಗೆ ಪ್ರತಿಕ್ರಿಯಿಸಿ ಸಮ್ಮಿಶ್ರ ಸರ್ಕಾರದಲ್ಲಿ ಎರಡು ಪಕ್ಷಗಳ ಹಿತವನ್ನು ನೋಡಿಕೊಂಡು ಸಂಪುಟ ವಿಸ್ತರಣೆ ಮಾಡಬೇಕಾಗುತ್ತದೆ. ಸಂಪುಟಕ್ಕೆ ಯಾರನ್ನು ಸೇರಿಸಿಕೊಂಡಿದ್ದಾರೆ ಎಂಬುದರ ಬಗ್ಗೆ ನಾನು ಪ್ರತಿಕ್ರಿಯಿಸಲಾರೆ, ಮಾಲಿನ್ಯ ನಿಯಂತ್ರಣ ಮಂಡಳಿ ಮುಖ್ಯಸ್ಥ ಮತ್ತೆ ಒಲಿದು ಬಂದರೆ ಈ ಬಗ್ಗೆ ಪಕ್ಷದ ಹಿರಿಯ ಮುಖಂಡರೊಡನೆ ಮಾತನಾಡಿ, ನಿರ್ಧಾರ ಕೈಗೊಳ್ಳುತ್ತೇನೆ ಎಂದಿದ್ದಾರೆ.

ನೂತನ ಸಚಿವರಿಗೆ ಖಾತೆ ಹಂಚಿಕೆ ಕುತೂಹಲ
ಎಚ್ ಡಿ ಕುಮಾರಸ್ವಾಮಿ ಅವರು ಜೂನ್ 14ರಂದು ಸಂಪುಟ ವಿಸ್ತರಣೆ ಮಾಡಿ ಇಬ್ಬರು ಪಕ್ಷೇತರರನ್ನು ತಮ್ಮ ಸಂಪುಟಕ್ಕೆ ಸೇರಿಸಿಕೊಂಡಿದ್ದರು. ಸಂಪುಟ ಸೇರುವುದಕ್ಕೂ ಮುನ್ನ ರಾಣೇಬೆನ್ನೂರು ಶಾಸಕ ಶಂಕರ್ ಅವರು ತಮ್ಮ ಕೆಪಿಜೆಪಿ ಪಕ್ಷವನ್ನು ಕಾಂಗ್ರೆಸ್ ನಲ್ಲಿ ವಿಲೀನಗೊಳಿಸಿದರು. ಮುಳುಬಾಗಿಲಿನ ಶಾಸಕ ನಾಗೇಶ್ ಅವರು ಸಂಪುಟ ಸೇರಿದ್ದು, ಅಧಿಕಾರಿಯಾಗಿ ಅನುಭವ ಹೊಂದಿರುವುದರಿಂದ ಉತ್ತಮ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದಾರೆ. ಇಬ್ಬರಿಗೂ ಈ ಸಮಯಕ್ಕೆ ಖಾತೆ ಹಂಚಿಕೆಯಾಗಿಲ್ಲ.












Click it and Unblock the Notifications