ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಅಂಟೀತು ಎಚ್ಚರ: ಮಹಾರಾಷ್ಟ್ರದಿಂದ ಎದುರಾಗುತ್ತಾ ಗಂಡಾಂತರ!?

|
Google Oneindia Kannada News

ಬೆಂಗಳೂರು, ಮಾರ್ಚ್.11: ನೆರೆರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾವೈರಸ್ ಸೋಂಕು ಕರ್ನಾಟಕದಲ್ಲಿ ಭಯ ಹುಟ್ಟಿಸುವಂತಿದೆ. ಮಹಾರಾಷ್ಟ್ರದಲ್ಲಿ ಕೊವಿಡ್-19 ಸೋಂಕಿನ ಅಟ್ಟಹಾಸವು ಕನ್ನಡಿಗರ ಪಾಲಿಗೆ ಎಚ್ಚರಿಕೆ ಗಂಟೆ ಆಗಿರಬೇಕಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

"ನೆರೆಯ ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 13,000ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇದು ನನ್ನನ್ನು ಚಿಂತೆಗೀಡುಮಾಡಿದೆ. ಇದನ್ನು ಎಚ್ಚರಿಕೆಯ ಗಂಟೆ ಎಂದು ಪರಿಗಣಿಸಿ, ಹಬ್ಬ-ಹರಿದಿನಗಳು, ಸಭೆ-ಸಮಾರಂಭಗಳು ಏನೇ ಇದ್ದರೂ ಮಾಸ್ಕ್ ಧರಿಸಿವುದು, ಭೌತಿಕ ಅಂತರವನ್ನು ತಪ್ಪದೇ ಪಾಲಿಸಬೇಕು. ಜನಸಂದಣಿಯಿಂದ ದೂರವಿರಬೇಕು" ಎಂದು ಟ್ವೀಟ್ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಕೊರೊನಾ ಪ್ರಕರಣ ಏರಿಕೆ; ರಾಜ್ಯದಲ್ಲಿ ರಾತ್ರಿ ಪಾರ್ಟಿ ಮೇಲೆ ನಿಷೇಧಕೊರೊನಾ ಪ್ರಕರಣ ಏರಿಕೆ; ರಾಜ್ಯದಲ್ಲಿ ರಾತ್ರಿ ಪಾರ್ಟಿ ಮೇಲೆ ನಿಷೇಧ

ಕಳೆದ ಒಂದು ವಾರದಲ್ಲೇ ಅತಿಹೆಚ್ಚು ಕೊವಿಡ್-19 ಸೋಂಕಿತ ಪ್ರಕರಣಗಳು ರಾಜ್ಯದಲ್ಲೂ ವರದಿಯಾಗಿರುವುದು ಮತ್ತಷ್ಟು ಆತಂಕವನ್ನು ಹೆಚ್ಚಿಸುತ್ತಿದೆ. ಕಳೆದ 24 ಗಂಟೆಗಳಲ್ಲಿ 760 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಸ್ಥಿತಿಗತಿ ಹೇಗಿದೆ. ರಾಜ್ಯದ ಜನರಿಗೆ ಸಚಿವರು ನೀಡಿರುವ ಸಲಹೆಗಳೇನು ಎನ್ನುವುದರ ಕುರಿತು ಒಂದು ವರದಿ ಇಲ್ಲಿದೆ ನೋಡಿ.

ಖಾಸಗಿ ಶಾಲೆಗಳು ನಿಯಮ ಉಲ್ಲಂಘಿಸಿದ ಬಗ್ಗೆ ದೂರು

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನ ಭೀತಿ ನಡುವೆಯೂ "ಕೆಲ ಖಾಸಗಿ ಶಾಲೆಗಳು ಸರ್ಕಾರದ ಅನುಮತಿ ಇಲ್ಲದಿದ್ದರೂ 1-6ನೇ ತರಗತಿಯ ಮಕ್ಕಳಿಗೆ ಶಾಲೆ ಪುನರಾರಂಭಿಸಿರುವುದರ ಬಗ್ಗೆ ದೂರು ಬಂದಿವೆ. ನಿಯಮ ಉಲ್ಲಂಘಿಸಿ ತರಗತಿಗಳನ್ನು ಪುನರಾರಂಭಿಸಿರುವ ಶಾಲೆಗಳ ವಿರುದ್ಧ ಪರವಾನಗಿ ರದ್ದು ಸೇರಿದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ನನ್ನ ಮನವಿ" ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಕೊವಿಡ್-19 ಲಸಿಕೆ ಹಾಕಿಸಿಕೊಳ್ಳುವಂತೆ ಮನವಿ

"60 ವರ್ಷ ಮೇಲ್ಪಟ್ಟವರು, 45 ವರ್ಷ ಮೇಲ್ಪಟ್ಟು ಸಹ-ಅಸ್ವಸ್ಥತೆ ಹೊಂದಿರುವವರು ತಪ್ಪದೇ ಆದಷ್ಟು ಬೇಗ ಕೊರೊನಾ ಲಸಿಕೆ ಪಡೆಯಬೇಕೆಂದು ಕೋರುತ್ತೇನೆ. ನಮ್ಮ ಮನೆಗಳಲ್ಲಿ, ಬಂಧು-ಬಳಗದಲ್ಲಿ, ಸ್ನೇಹಿತರಲ್ಲಿ, ನೆರೆಹೊರೆಗಳಲ್ಲಿ ಕೊರೊನಾ ಲಸಿಕೆ ಪಡೆಯಲು ಅರ್ಹ ವ್ಯಕ್ತಿಗಳಿದ್ದರೆ ಅವರಿಗೆ ಲಸಿಕೆ ಪಡೆಯುವಂತೆ ಅರಿವು ಮೂಡಿಸಿ, ಸ್ಫೂರ್ತಿ ತುಂಬೋಣ" ಎಂಬು ಟ್ವಿಟ್ಟರ್ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಮಹಾರಾಷ್ಟ್ರದ ಕೊವಿಡ್-19 ಸೋಂಕಿನಿಂದ ಭಯ

ಮಹಾರಾಷ್ಟ್ರದ ಕೊವಿಡ್-19 ಸೋಂಕಿನಿಂದ ಭಯ

ಕೊರೊನಾವೈರಸ್ ಸೋಂಕಿನ ಅಟ್ಟಹಾಸಕ್ಕೆ ಮಹಾರಾಷ್ಟ್ರ ತತ್ತರಿಸಿ ಹೋಗಿದೆ. ಪ್ರತಿನಿತ್ಯ 10,000ಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 13,659 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 22,52,057ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 54 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 52,610ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೂ 20,99,207 ಸೋಂಕಿತರು ಗುಣಮುಖರಾಗಿದ್ದು, 99,008 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲೂ ಕೊರೊನಾವೈರಸ್ ಸೋಂಕಿನ ಅಟ್ಟಹಾಸ

ರಾಜ್ಯದಲ್ಲೂ ಕೊರೊನಾವೈರಸ್ ಸೋಂಕಿನ ಅಟ್ಟಹಾಸ

ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 760 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 331 ಸೋಂಕಿತರು ಗುಣಮುಖರಾಗಿದ್ದು, ಆರು ಜನರು ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದಾರೆ. ಬೆಂಗಳೂರು ನಗರ ಒಂದರಲ್ಲೇ 488 ಹೊಸ ಕೊವಿಡ್-19 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು 9,56,801 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 9,36,947 ಸೋಂಕಿತರು ಗುಣಮುಖರಾಗಿದ್ದರೆ, ಇದುವರೆಗೂ 12,379 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಉಳಿದಂತೆ 7,456 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾಹಿತಿ ನೀಡಿದೆ.

Recommended Video

ಕೇವಲ 24 ಗಂಟೆಗೆ ಎಷ್ಟ್ ಕೇಸ್ ದಾಖಲಾಗಿದೆ ಗೊತ್ತಾ ? | Oneindia Kannada
ಜಿಲ್ಲಾವಾರು ಕೊರೊನಾವೈರಸ್ ಪ್ರಕರಣಗಳು

ಜಿಲ್ಲಾವಾರು ಕೊರೊನಾವೈರಸ್ ಪ್ರಕರಣಗಳು

ರಾಜ್ಯದಲ್ಲಿ ಒಟ್ಟು 760 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 2, ಬಳ್ಳಾರಿ 6, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 7, ಬೆಂಗಳೂರು 488, ಬೀದರ್ 15, ಚಾಮರಾಜನಗರ 3, ಚಿಕ್ಕಬಳ್ಳಾಪುರ 6, ಚಿಕ್ಕಮಗಳೂರು 0, ಚಿತ್ರದುರ್ಗ 6, ದಕ್ಷಿಣ ಕನ್ನಡ 25, ದಾವಣಗೆರೆ 3, ಧಾರವಾಡ 25, ಗದಗ 1, ಹಾಸನ 4, ಹಾವೇರಿ 1, ಕಲಬುರಗಿ 37, ಕೊಡಗು 6, ಕೋಲಾರ 3, ಕೊಪ್ಪಳ 1, ಮಂಡ್ಯ 4, ಮೈಸೂರು 22, ರಾಯಚೂರು 1, ರಾಮನಗರ 1, ಶಿವಮೊಗ್ಗ 5, ತುಮಕೂರು 36, ಉಡುಪಿ 33, ಉತ್ತರ ಕನ್ನಡ 7, ವಿಜಯಪುರ 6, ಯಾದಗಿರಿ 0 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

English summary
Minister Dr. K Sudhakar Worry On Rise In Covid-19 Cases In Maharashtra, Request Karnataka People To Stay Safe.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X