ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆ ಅಸಾಧ್ಯ: ಸಿದ್ದರಾಮಯ್ಯ ಮುಂದೆ ಸಕ್ಕರೆ ಕಾರ್ಖಾನೆ ಮಾಲೀಕರು ಪಟ್ಟು!

ಬೆಂಗಳೂರು, ನವೆಂಬರ್‌ 07: ನಾವೇ ಬ್ಯಾಂಕ್ ನಿಂದ ಬಡ್ಡಿ ತೆಗೆದುಕೊಂಡು ಸಕ್ಕರೆ ಕಾರ್ಖಾನೆಗಳನ್ನು ನಡೆಸುತ್ತಿದ್ದೇವೆ. ಹೀಗೆ ಕಷ್ಟದಲ್ಲಿ ಇರುವಾಗ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆ ಅಸಾಧ್ಯವಾದ ಮಾತಾಗಿದೆ. ಬೇಕಾದ್ರೆ ಕಷ್ಟದಲ್ಲಿರುವಂತ ನಮ್ಮ ಸಕ್ಕರೆ ಕಾರ್ಖಾನೆಗಳನ್ನು ಸರ್ಕಾರವೇ ತೆಗೆದುಕೊಂಡು ನಡೆಸಲಿ. ನಾವು ಮಾತ್ರ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಸೋದಕ್ಕೆ ಅಸಾಧ್ಯ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮುಂದೆ ಸಕ್ಕರೆ ಕಾರ್ಖಾನೆ ಮಾಲೀಕರು ಪಟ್ಟು ಹಿಡಿದಿದ್ದಾರೆ ಎನ್ನಲಾದೆ.

ಕಬ್ಬು ಬೆಳೆಗಾರರ ಸಮಸ್ಯೆ ಕುರಿತಾಗಿ ಇಂದು ವಿಧಾನಸೌಧ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಕ್ಕರೆ ಕಾರ್ಖಾನೆ ಮಾಲಿಕರ ಸಭೆ ನಡೆದಿದ್ದು, ಸಕ್ಕರೆ ಕಾರ್ಖಾನೆ ನಡೆಸುವುದು ಬಹಳ ಕ್ಲಿಷ್ಟಕರವಾಗಿದೆ. ಸಕ್ಕರೆ, ಎಥೆನಾಲ್, ವಿದ್ಯುತ್ ಉತ್ಪಾದನೆ ಮಾಡಿದರೂ ನಾವು ಸಂಕಷ್ಟದಲ್ಲಿದ್ದೇವೆ. ಜೊತೆಗೆ ರೈತರಿಂದ ಕೆಟ್ಟ ಬೈಗುಳ ತಿನ್ನುತ್ತಿದ್ದೇವೆ. ನಾವು ಉದ್ಯೋಗ ಸೃಷ್ಟಿಸಿ ಗ್ರಾಮೀಣ ಆರ್ಥಿಕತೆಗೆ ಅಪಾರ ಕೊಡುಗೆ ನೀಡುತ್ತಿದ್ದೇವೆ. ಆದರೂ ಕೇಂದ್ರದ ನೀತಿಗಳಿಂದಲೂ ನಮಗೆ ನಷ್ಟ ಆಗುತ್ತಿದೆ. ರೈತರಿಂದಲೂ ಒತ್ತಡ ಇದೆ. ಹೀಗಾದಾಗ ನಾವು ಕಾರ್ಖಾನೆ ನಡೆಸುವುದೇ ಕಷ್ಟ ಆಗ್ತದೆ. ಬೇಕಿದ್ದರೆ ಸರ್ಕಾರವೇ ನಮ್ಮ ಕಾರ್ಖಾನೆಗಳನ್ನು ನಡೆಸಲಿ ಎಂದು ಕಾರ್ಖಾನೆ ಮಾಲೀಕರು ತಮ್ಮ ಸಂಕಷ್ಟ ಹೇಳಿಕೊಂಡರು.

Sugar factory owners say it is impossible to meet the demands of sugarcane growers

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಕ್ಕರೆ ಕಾರ್ಖಾನೆ ನಡೆಸುವುದು ನೀವು ಹೇಳುವಷ್ಟೇ ಕಷ್ಟ ಆಗಿದ್ದರೆ ಒಂದು ಕಾರ್ಖಾನೆ ಇದ್ದವರು ಎರಡು, ಮೂರು ಕಾರ್ಖಾನೆ ಮಾಲೀಕರಾಗಿದ್ದು ಹೇಗೆ ಎನ್ನುವ ರೈತರ ಪ್ರಶ್ನೆಗೆ ಏನು ಉತ್ತರ ಹೇಳ್ತೀರಿ ಎಂದು ಪ್ರಶ್ನಿಸಿದರು. ಇನ್ನೂ ಈ ವೇಳೆ ಕಾರ್ಖಾನೆ ಮಾಲೀಕರು ಮಾತನಾಡಿ, ರೈತರ ಬೇಡಿಕೆ ತಕ್ಕಂತೆ ಹಣ ಕೊಡುವುದು ನಮಗೆ ಕಷ್ಟ ಆಗ್ತದೆ. ರಾಜ್ಯ ಸರ್ಕಾರ ನೆರವು ನೀಡಲಿ ಎಂದು ಹೇಳಿದರು.

ಈ ವೇಳೆ ಸಚಿವ ಶಿವಾನಂದ ಪಾಟೀಲ್ ಅವರು ಮಾತನಾಡಿ, ಹಾಗಾದರೆ ನೀವೆಲ್ಲಾ ಒಟ್ಟಾಗಿ ಮಾಧ್ಯಮಗಳ ಮುಂದೆ ಸತ್ಯ ಹೇಳಿ. ಈ ಸಮಸ್ಯೆ ಸೃಷ್ಟಿ ಆಗಿರುವುದು, ನೀವುಗಳು ಸಮಸ್ಯೆಯಲ್ಲಿ ಇರುವುದು ಕೇಂದ್ರ ಸರ್ಕಾರದ ಕಾರಣದಿಂದ ಎನ್ನುವ ಹೇಳಿಕೆ ನೀಡಿ, ಕೇಂದ್ರಕ್ಕೆ ಪತ್ರ ಬರೆಯಿರಿ ಎಂದು ಹೇಳಿದರು. ಈ ವೇಳೆ ಮಧ್ಯ ಪ್ರವೇಶಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಹಾರಾಷ್ಟ್ರದ ಮುಖ್ಯಮಂತ್ರಿ ಫಡ್ನವೀಸ್ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು, "MSP ದರ ಹೆಚ್ಚಿಸುವಂತೆ ಒತ್ತಾಯಿಸಿದ" ಪತ್ರ ಪ್ರದರ್ಶಿಸಿದ ಮುಖ್ಯಮಂತ್ರಿಗಳು, ಈ ಪತ್ರದಂತೆ ಪ್ರಧಾನಿಯವರು MSP ಹೆಚ್ಚಿಸಲು ಒತ್ತಾಯಿಸೋಣ ಎಂದರು.

ಕೇಂದ್ರ ಸರ್ಕಾರ FRP ದರಕ್ಕೆ ಪೂರಕವಾಗಿ MSP ದರ ಏರಿಸುತ್ತಿಲ್ಲ. 2019 ರಿಂದ ಕೇಂದ್ರ MSP ದರ ಏರಿಸಿಲ್ಲ. ಎಥೆನಾಲ್ ದರವನ್ನೂ ಏರಿಸಿಲ್ಲ. ನಮ್ಮ ಈ ಸಮಸ್ಯೆ ಬಗ್ಗೆಯೂ ರಾಜ್ಯ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದು ಒತ್ತಾಯಿಸಬೇಕು ಎಂದು ಕಾರ್ಖಾನೆ ಮಾಲೀಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು MSP ದರ ಹೆಚ್ಚಿಸುವಂತೆ ಬಹಳ ಹಿಂದೆಯೇ ಕೇಂದ್ರಕ್ಕೆ, ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದಿದ್ದೇನೆ. ಇಲ್ಲಿಯವರೆಗೂ ಕೇಂದ್ರ ಸರ್ಕಾರ MSP ಹೆಚ್ಚಿಸಿಲ್ಲ. ರಾಜ್ಯ ಪ್ರತಿ‌ನಿಧಿಸುವ ಕೇಂದ್ರ ಮಂತ್ರಿಗಳೂ ಕಬ್ಬು ಬೆಳೆಗಾರರಿಗೆ MSP ದರ ಹೆಚ್ಚಿಸುವುದಕ್ಕೆ ಸಹಕರಿಸಲಿಲ್ಲ, ಪ್ರಧಾನಿ ಅವರ ಜೊತೆ ಮಾತಾಡುತ್ತಿಲ್ಲ. ಏನು ಮಾಡೋದು ? ಎಂದು ಪ್ರಶ್ನಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+