ಸುಹಾಸ್ ಶೆಟ್ಟಿ ಹತ್ಯೆ ಕೇಸ್: "ಯಾರು ಕೂಡ ಕೊಲೆ ಆಗಬೇಕು ಎಂದು ಬಯಸುವುದಿಲ್ಲ" ಜಿ.ಪರಮೇಶ್ವರ್ ಹೇಳಿದ್ದೇನು ?
ಮಂಗಳೂರಿನಲ್ಲಿ ನಡೆದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳು ಯಾರೇ ಆಗಿದ್ದರೂ ಬಿಡುವುದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಹೇಳಿದ್ದಾರೆ. ಮಂಗಳೂರು ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಕ್ರಮ ತೆಗೆದುಕೊಳ್ಳಲಾಗಿದೆ. ಯಾರು ಕೃತ್ಯ ಎಸಗಿದ್ದಾರೆ, ಅವರನ್ನು ಯಾವುದೇ ಕಾರಣಕ್ಕು ಬಿಡುವುದಿಲ್ಲ ಎಂದರು.
ಮಂಗಳೂರು ಶಾಂತಿಗೆ ಬರುತ್ತಿತ್ತು. ಕಳೆದ ನಾಲ್ಕೈದು ದಿನದಿಂದ ಆದ ಘಟನೆ ಮತ್ತು ನಿನ್ನೆ ನಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದೆ. ನಾವು ಇದನ್ನು ಹೀಗೆ ಮುಂದುವರಿಯಲು ಯಾವುದೇ ಕಾರಣಕ್ಕು ಬಿಡುವುದಿಲ್ಲ. ಆರೋಪಿಗಳ ಪತ್ತೆಗಾಗಿ ಈಗಾಗಲೇ ನಾಲ್ಕು ತಂಡಗಳನ್ನು ರಚನೆ ಮಾಡಲಾಗಿದ್ದು, ಶೋಧ ನಡೆಸಿದ್ದಾರೆ. ಇನ್ನು ಮುಂದೆಯೂ ಇಂತಹ ಘಟನೆ ಆಗಲು ಬಿಡುವುದಿಲ್ಲ ಎಂದು ಹೇಳಿದರು.

ಶಾಂತಿಯನ್ನು ಕಾಪಾಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ಮನವಿ ಮಾಡುತ್ತೇನೆ. ಸರ್ಕಾರ ಮತ್ತು ಪೊಲೀಸ್ ಇಲಾಖೆ ನಿಮ್ಮ ಜೊತೆಯಲ್ಲಿದೆ. ಶಾಂತಿ ಕಾಪಾಡಲು ಎಲ್ಲ ರೀತಿಯ ಪ್ರಯತ್ನವನ್ನು ನಾವು ಮಾಡುತ್ತೇವೆ. ಈಗಾಗಲೇ ಕಾನೂನು ಸುವ್ಯವಸ್ಥೆ ಎಡಿಜಿಪಿ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ಜರುಗಬಾರದು ಎಂಬ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ.
ನಿನ್ನೆಯ ಘಟನೆಯ ಕುರಿತು ಸಂಪೂರ್ಣ ವರದಿ ಕೇಳಿದ್ದೇನೆ. ತನಿಖೆ ಆರಂಭಿಸಲಾಗಿದ್ದು ಆರೋಪಿಗಳನ್ನು ಬಿಡುವುದಿಲ್ಲ. ಇದನ್ನು ಹತ್ತಿಕ್ಕಲು ಎಲ್ಲ ರೀತಿಯ ಪ್ರಯತ್ನ, ಕ್ರಮ ಕೈಗೊಂಡಿದ್ದು, ಬೆಳೆಯಲು ಬಿಡುವುದಿಲ್ಲ. ಯಾವುದೇ ಪಕ್ಷ, ಸಂಘಟನೆಯವರು ಅಥವಾ ಬೇರೆ ಯಾರೇ ಆಗಿದ್ದರೂ ಬಿಡುವುದಿಲ್ಲ ಎಂದು ಎಚ್ಚರಿಸಿದರು.
ಬಿಜೆಪಿ ಮುಖಂಡರ ಆರೋಪಗಳ ಕುರಿತು ಪ್ರತಿಕ್ರಿಯಿಸಿ, ಯಾರು ಕೂಡ ಕೊಲೆ ಆಗಬೇಕು ಎಂದು ಬಯಸುವುದಿಲ್ಲ. ಜವಾಬ್ಧಾರಿಯುತ ಸರ್ಕಾರವಾಗಿ ಶಾಂತಿ ಸುವ್ಯವಸ್ಥೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಜವಾಬ್ಧಾರಿ. ಈ ಜವಾಬ್ಧಾರಿಯಿಂದ ನಾವು ನುಣುಚಿಕೊಳ್ಳುವುದಿಲ್ಲ. ಈಗಾಗಲೇ ಅನೇಕ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಇಂತಹ ಘಟನೆಗಳಾದಾಗ ಕಾನೂನು ಪ್ರಕಾರ ಏನೆಲ್ಲ ಕ್ರಮ ತೆಗೆದುಕೊಳ್ಳಬೇಕು ಅದೆಲ್ಲವನ್ನು ಮಾಡಿದ್ದೇವೆ. ಇದನ್ನು ಬಿಡುವುದಿಲ್ಲ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಿನಿಂದ ಹಿಂದು ಕಾರ್ಯಕರ್ತರಿಗೆ ಜೀವಭಯವಿದೆ, ಉಳಿಗಾಲವಿಲ್ಲ ಎಂದಿರುವ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿ, ಕಾಂಗ್ರೆಸ್‌ನಲ್ಲಿ ಬೇರೆಯವರಿದ್ದಾರ? ಹಿಂದುಗಳಿಲ್ಲವೇ? ನಾವೆಲ್ಲ ಹಿಂದುಗಳಲ್ಲವ? ನಾವು ಬೇರೆಯವರ? ಆ ರೀತಿ ವಿಶ್ಲೇಷಣೆ ಮಾಡುವುದು ಸರಿಯಲ್ಲ. ಕೊಲೆಯಾಗಿದೆ ಆರೋಪಿಗಳನ್ನು ಹಿಡಿದು ಹಾಕುತ್ತೇವೆ. ಘಟನೆಗೆ ಬೇರೆಬೇರೆ ಬಣ್ಣಕಟ್ಟುವುದು ಬೇಡ. ನಾವು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಸಿದರು.
ಜಾತಿಜನಗಣತಿ: ಕೇಂದ್ರ ಸರ್ಕಾರ ಜಾತಿಗಣತಿ ಸಮೀಕ್ಷೆ ನಡೆಸುವ ತೀರ್ಮಾನದ ಕುರಿತ ಪ್ರತಿಕ್ರಿಯಿಸಿ, 1931ರಲ್ಲಿ ಜಾತಿ ಜನಗಣತಿ ನಡೆದಿದೆ. ಆದಾದ ಮೇಲೆ ನಮ್ಮ ಪೂರ್ವಜರು ಏನು ಯೋಚನೆ ಮಾಡಿದ್ದರೋ ಗೊತ್ತಿಲ್ಲ. ಜಾತಿ ಹೋಗಬೇಕು ಎಂಬ ಕಲ್ಪನೆಯಲ್ಲಿ ಜಾತಿಗಣತಿ ಮಾಡುವುದನ್ನು ಬಿಟ್ಟಿದ್ದರು ಎಂದು ಕಾಣುತ್ತದೆ. ಮತ್ತೆ ಜಾತಿಜನಗಣತಿಯನ್ನು ಕರ್ನಾಟಕದಲ್ಲಿ ಪ್ರಾರಂಭಿಸಿದೆವು.
ಯಾರು ಹಿಂದೆ ಉಳಿದಿದ್ದಾರೆ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂಬುದು ಜನಗಣತಿಯ ಉದ್ದೇಶವಾಗಿತ್ತು. ಟರ್ಮ್ಸ್ ಆಫ್ ರೆಫರೆನ್ಸ್ ಕೊಡುವಾಗ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳನ್ನು ಅಧ್ಯಯನ ಮಾಡಬೇಕು. ಅದನ್ನು ಮಾಡುವಾಗ ಯಾವ ಸಮುದಾಯದವರು, ಎಷ್ಟು ಜನಸಂಖ್ಯೆ ಇದೆ ಎಂಬುದನ್ನು ತಿಳಿಯುವ ಅಗತ್ಯತೆಯಿಂದ ಜಾತಿಗಣತಿ ಮಾಡಲಾಗಿದೆ. ಈಗ ಇಡೀ ದೇಶದಲ್ಲಿ ಜಾತಿಗಣತಿ ಮಾಡುತ್ತಿರುವುದು ಸ್ವಾಗತಾರ್ಹ ಎಂದು ಹೇಳಿದರು.
ಜಾತಿಜನಗಣತಿ ದೇಶದಾದ್ಯಂತ ನಡೆಯಬೇಕು ಎಂದು ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಬಹಳ ದಿನಗಳಿಂದ ಒತ್ತಾಯಿಸುತ್ತಿದ್ದರು. ಕರ್ನಾಟಕದ ಬಗ್ಗೆ ಮಾತನಾಡುವಾಗ ರಾಷ್ಟ್ರದಲ್ಲಿ ಆಗಬೇಕು ಎಂದು ಅನೇಕ ಸಂದರ್ಭಗಳಲ್ಲಿ ಹೇಳಿದ್ದಾರೆ. ಜಾತಿಗಣತಿ ನಡೆಸುವ ಅಗತ್ಯತೆ ಇದೆ ಎಂಬುದು ಕೇಂದ್ರ ಸರ್ಕಾರಕ್ಕೆ ಅರ್ಥವಾಗಿದೆ ಎಂದು ಅಭಿಪ್ರಾಯಪಟ್ಟರು.
ಹಿಂದೆ ಮುಸ್ಲಿಮರು ಅವರ ಸ್ಥಿತಿಗತಿಗಳನ್ನು ಅಧ್ಯಯನ ಮಾಡಬೇಕು ಎಂದು ರಾಜೇಂದ್ರ ಸಹಚಾರ್ ನೇತೃತ್ವದಲ್ಲಿ ನಿರ್ಧರಿಸಿದ್ದರು. ಆಗ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದರು. ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗಳನ್ನ ಅಧ್ಯಯನ ನಡೆಸಿ ಕಾರ್ಯಕ್ರಮಗಳನ್ನು ಕೊಡಬೇಕು ಎಂದು ಮಾಡಲಾಗಿತ್ತು. ಮುಂದಿನ ಆಯವ್ಯಯದಲ್ಲಿ ಜಾತಿಗಣತಿಯನ್ನು ಆಧಾರವಾಗಿಟ್ಟುಕೊಂಡು ಕಾರ್ಯಕ್ರಮ ರೂಪಿಸುತ್ತೇವೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ












Click it and Unblock the Notifications