ವಿಧಾನಸೌಧದಲ್ಲಿ ಆತ್ಮಹತ್ಯೆ ಯತ್ನ : ರೇವಣ್ಣ ಕುಮಾರ್ ಡೆತ್ ನೋಟ್
ಬೆಂಗಳೂರು, ಜೂನ್ 24 : 'ನನ್ನ ಸಾವು ಆತ್ಮಹತ್ಯೆ ಅಲ್ಲ. ಸರ್ಕಾರಕ್ಕೆ ನೀಡುತ್ತಿರುವ ಬಲಿದಾನ. ಮಾನ್ಯ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಅವರು ಅನ್ಯತಾ ಭಾವಿಸಬಾರದು' ಎಂದು ರೇವಣ್ಣ ಕುಮಾರ್ ಡೆತ್ ಬರೆದಿಟ್ಟಿದ್ದಾರೆ.
ಸೋಮವಾರ ಮಧ್ಯಾಹ್ನ ವಿಧಾನಸೌಧದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಚಿಕ್ಕಬಳ್ಳಾಪುರ ಮೂಲದ ರೇವಣ್ಣ ಕುಮಾರ್ (45) ಡೆತ್ ನೋಟ್ ಪತ್ತೆಯಾಗಿದೆ. ಬೌರಿಂಗ್ ಆಸ್ಪತ್ರೆಯಲ್ಲಿ ರೇವಣ್ಣ ಅವರು ಚೇತರಿಸಿಕೊಳ್ಳುತ್ತಿದ್ದಾರೆ.
ರೇವಣ್ಣ ಕುಮಾರ್ ಚಿಂತಾಮಣಿ ತಾಲೂಕಿನ ಅನೂರು ಗ್ರಾಮ ಪಂಚಾಯತ್‌ನಲ್ಲಿ ತಾತ್ಕಾಲಿಕ ಸಹಾಯಕ ಗ್ರಂಥಪಾಲಕರಾಗಿ ಕೆಲಸ ಮಾಡುತ್ತಿದ್ದರು. ಆದರೆ, ಅವರ ಉದ್ಯೋಗ ಖಾಯಂ ಆಗದ ಕಾರಣ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಡಿಪಿಸಿ ದೇವರಾಜು ಅವರು, 'ರೇವಣ್ಣ ಕುಮಾರ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಘಟನೆಯಿಂದ ಕೈ ಕುತ್ತಿಗೆ ಮೇಲೆ ಗಾಯವಾಗಿದ್ದು, ಯಾವುದೇ ಪ್ರಾಣಾಪಾಯವಿಲ್ಲ' ಎಂದು ಹೇಳಿದರು.
ಡೆತ್ ನೋಟ್‌ನಲ್ಲಿ ಏನಿದೆ? : ದಯವಿಟ್ಟು ನನ್ನ ಬಗ್ಗೆ ತಪ್ಪು ತಿಳಿಯಬೇಡಿ. 6 ಸಾವಿರ ನೌಕರರ ಪ್ರತೀಕವಾಗಿ ಈ ನಿರ್ಧಾರಕ್ಕೆ ಬಂದಿದ್ದೇನೆ. ನನ್ನ ಸಾವು ಆತ್ಮಹತ್ಯೆ ಅಲ್ಲ. ಸರ್ಕಾರಕ್ಕೆ ನೀಡುತ್ತಿರುವ ಬಲಿದಾನ. ಮಾನ್ಯ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಅವರು ಅನ್ಯತಾ ಭಾವಿಸಬಾರದು. ನಾವು ಎಷ್ಟೇ ಹೋರಾಟ ಮಾಡಿದರೂ ನಮಗೆ ನ್ಯಾಯ ಸಿಗುತ್ತಿಲ್ಲ. ನೀವಾದರೂ ನ್ಯಾಯ ಕೊಡಿಸಿ. ಇದು ಸಾವಲ್ಲ ಬಲಿದಾನ ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆ.











Click it and Unblock the Notifications