ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿ ಆತ್ಮಹತ್ಯೆ ಯತ್ನ

ಬೆಂಗಳೂರು, ನವೆಂಬರ್ 27 : ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸದಾಶಿವನಗರ ಪೊಲೀಸರು ಭೇಟಿ ನೀಡಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿ ಎನ್. ಆರ್. ಸಂತೋಷ್ ಶುಕ್ರವಾರ ರಾತ್ರಿ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನ ನಡೆಸಿದ್ದಾರೆ. ಎಂ.ಎಸ್. ರಾಮಯ್ಯ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Suicide Attempt By Yediyurappa Political Secretary NR Santosh

ನಿದ್ರೆ ಮಾತ್ರೆಯನ್ನು ಸೇವಿಸಿರುವ ಎನ್. ಆರ್. ಸಂತೋಷ್ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ಎಂ. ಎಸ್. ರಾಮಯ್ಯ ಆಸ್ಪತ್ರೆಯ ವೈದ್ಯರು ಚಿಕಿತ್ಸೆಯನ್ನು ಮುಂದುವರೆಸಿದ್ದಾರೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಆಸ್ಪತ್ರೆಗೆ ಆಗಮಿಸಿದ್ದಾರೆ.

ಎನ್. ಆರ್. ಸಂತೋಷ್ ಹಲವು ವರ್ಷಗಳಿಂದ ಯಡಿಯೂರಪ್ಪ ಆಪ್ತ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. 2020ರ ಮೇ 28ರಂದು ಅವರನ್ನು ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು.

ಶುಕ್ರವಾರ ಸಂಜೆ 7.30ರ ಸುಮಾರಿಗೆ ಡಾಲರ್ಸ್ ಕಾಲೋನಿಯ ಮನೆಯಲ್ಲಿ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮೊದಲ ಮಹಡಿಯಲ್ಲಿರುವ ಕೊಠಡಿಯಲ್ಲಿ ಅವರು ಪುಸ್ತಕ ಓದುತ್ತಿದ್ದರು. ಅಲ್ಲಿಯೇ ಆತ್ಮಹತ್ಯೆಗೆ ಪ್ರಯತ್ನ ನಡೆಸಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

8 ಗಂಟೆ ಸುಮಾರಿಗೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದಾಶಿವ ನಗರ ಪೊಲೀಸರು ಮನೆಗೆ ಸಹ ಭೇಟಿ ನೀಡಿದ್ದು, ಡೆತ್ ನೋಟ್ ಬರೆದಿದ್ದಾರೆಯೇ? ಎಂದು ಪರಿಶೀಲನೆ ನಡೆಸುತ್ತಿದ್ದಾರೆ.

nr santosh

ಘಟನೆಗೆ ಕಾರಣ ತಿಳಿದಿಲ್ಲ; "ನಿನ್ನೆ ಮದುವೆ ಮನೆಯಲ್ಲಿ ಚೆನ್ನಾಗಿದ್ದ. ಘಟನೆಗೆ ಕಾರಣ ತಿಳಿದಿಲ್ಲ. ಸಂತೋಷ್ ಆರಾಮಾಗಿ ಇದ್ದಾನೆ, ಚಿಕಿತ್ಸೆ ಸಿಗುತ್ತಿದೆ" ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+