ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸುಮಲತಾ ಸ್ಪರ್ಧೆ? ಬಿಜೆಪಿ ಲೆಕ್ಕಾಚಾರವೇನು?
ಬೆಂಗಳೂರು, ಜನವರಿ 31: ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲುಕಂಡ ಬಿಜೆಪಿ ಹಾಗೂ ಜೆಡಿಎಸ್ ಲೋಕಸಭಾ ಚುನಾವಣೆಗೆ ಮೈತ್ರಿಯಾಗಿದೆ. ಇತ್ತ ಲೋಕಸಭಾ ಚುನಾವಣೆಗಾಗಿ ಕ್ಷೇತ್ರ ಹಂಚಿಕೆ ವಿಚಾರವಾಗಿ ಈಗಾಗಲೇ ಬಿಜೆಪಿ ಹೈಕಮಾಂಡ್ ನಾಯಕರ ಜೊತೆಗೆ ಚರ್ಚೆಯಾಗಿದ್ದು, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಸುಮಲತಾ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದೆ.
ಹೌದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಅವರ ಜೊತೆಗೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಈಗಾಗಲೇ ಮೂರ್ನಾಲ್ಕು ಬಾರೀ ಸಭೆ ನಡೆಸಿದ್ದು, 28 ಕ್ಷೇತ್ರಗಳ ಪೈಕಿ ಒಂದೇ ಒಂದು ಕ್ಷೇತ್ರವೇ ಹೈಕಮಾಂಡ್ ನಾಯಕರಿಗೆ ದೊಡ್ಡ ತಲೆನೋವಾಗಿದೆ. ಹಳೇ ಮೈಸೂರು ಭಾಗದಲ್ಲಿ ದಿನೇ ದಿನೇ ಜೆಡಿಎಸ್ ಪ್ರಾಬಲ್ಯ ಕುಗ್ಗುತ್ತಿದ್ದು, ತಮ್ಮ ಪ್ರಾಬಲ್ಯವನ್ನ ಹೆಚ್ಚಿಸಿಕೊಳ್ಳಲು ದಳಪತಿಗಳು ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಬೇಡಿಕೆ ಇಟ್ಟಿದ್ದಾರೆ.

ಈಗಾಗಲೇ ಕ್ಷೇತ್ರ ಹಂಚಿಕೆ ವಿಚಾರವೂ ಫೈನಲ್ ಆಗಿದ್ದು, ಬಿಜೆಪಿ ಗೆ ಬೆಂಬಲ ಸೂಚಿರುವ ಸುಮಲತಾ ಅವರು ಮಂಡ್ಯ ಕ್ಷೇತ್ರವನ್ನ ಬಿಟ್ಟು ಕೊಡದಿರಲು ಪಟ್ಟು ಹಿಡಿದು ಮಂಡ್ಯದಿಂದಲೇ ಸ್ಪರ್ಧೆ ಮಾಡುವುದಾಗಿ ಹೇಳಿದ್ರು. ಹೀಗಾಗಿ ಹೈಕಮಾಂಡ್ ನಾಯಕರು ಸುಮಲತಾ ಅವರ ಜೊತೆಗೆ ಚರ್ಚೆ ನಡೆಸಿ, ಮಂಡ್ಯ ಕ್ಷೇತ್ರವನ್ನ ಜೆಡಿಎಸ್ ಗೆ ಬಿಟ್ಟುಕೊಟ್ಟು, ಜೆಡಿಎಸ್ ಪ್ರಾಬಲ್ಯವಿರುವ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಅವರನ್ನ ಕಣಕ್ಕಿಳಿಸುವ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಮಂಡ್ಯ ಕ್ಷೇತ್ರದಿಂದ ಈ ಬಾರೀ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಸ್ಪರ್ಧೆ ನಡೆಸುವ ಮೂಲಕ ಕಳೆದುಕೊಂಡ ಪ್ರಾಬಲ್ಯವನ್ನ ಮರಳಿ ಪಡೆಯುವ ನಿಟ್ಟಿನಲ್ಲಿ ತಂತ್ರಗಾರಿಕೆ ನಡೆಸಿದ್ದಾರೆ. ಹೀಗಾಗಿ ಬಿಜೆಪಿ ಹೈಕಮಾಂಡ್ ನಾಯಕರ ಜೊತೆಗೆ ಮಂಡ್ಯ ಲೋಕಸಭಾ ಕ್ಷೇತ್ರವನ್ನ ಬಿಟ್ಟು ಕೊಡುವ ನಿಟ್ಟಿನಲ್ಲಿ ಬೇಡಿಕೆ ಇಟ್ಟಿದ್ದು, ಅದರಂತೆ ಬಿಜೆಪಿ ಹೈಕಮಾಂಡ್ ಮಂಡ್ಯ ಕ್ಷೇತ್ರವನ್ನ ಜೆಡಿಎಸ್ ಗೆ ಬಿಟ್ಟು ಕೊಟ್ಟು ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನ ಸುಮಲತಾ ಅವರನ್ನ ಕಣಕ್ಕಿಳಿಸಿ, ಡಿ ಕೆ ಶಿವಕುಮಾರ್ ಅವರಿಗೆ ಠಕ್ಕರ್ ಕೊಡುವ ತಂತ್ರಗಾರಿಕೆಯನ್ನ ಬಿಜೆಪಿ ಹೈಕಮಾಂಡ್ ಹಾಕಿಕೊಂಡಿದೆ.
ಸದ್ಯ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಹಾಲಿ ಸಂಸದರಾದ ಡಿ ಕೆ ಸುರೇಶ್ ಅವರು ಈ ಬಾರೀ ಈ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ಅನುಮಾನ. ಹೀಗಾಗಿ ಈ ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಹೊಸ ಅಭ್ಯರ್ಥಿಲೆಕ್ಕಾಚಾರವನ್ನ ಕಾಂಗ್ರೆಸ್ ಹಾಕಿಕೊಂಡಿದೆ. 2019 ರಲ್ಲಿ ಕೇವಲ ಒಂದು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದ ಕಾಂಗ್ರೆಸ್ ಗೆ ಈ ಬಾರೀ ಗೆಲ್ಲುವು ಕಷ್ಟಕರವಾಗಲಿದೆ ಎನ್ನುವ ಮಾತುಗಳು ಕೇಳಿ ಬಂದಿದೆ. ಇತ್ತ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸುಮಲತಾ ಅವರನ್ನ ಕಣಕ್ಕಿಳಿಸಿ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ಲೆಕ್ಕಾಚಾರವನ್ನ ಬಿಜೆಪಿ ಹೈಕಮಾಂಡ್ ಹಾಕಿಕೊಂಡಿದೆ.
ಇತ್ತ ಜೆಡಿಎಸ್ ನಾಯಕರ ಜೊತೆಗೆ ಉತ್ತಮ ಸಂಬಂಧ ಹೊಂದಿರುವ ಬಿಜೆಪಿ ಹೈಕಮಾಂಡ್, ಜೆಡಿಎಸ್ ನಾಯಕರು ಕೇಳಿರುವ ಮಂಡ್ಯ ಕ್ಷೇತ್ರವನ್ನ ಬಿಟ್ಟು ಕೊಟ್ಟು, ಮಂಡ್ಯದ ಹಾಲಿ ಸಂಸದೆಯಾಗಿರುವ ಸುಮಲತಾ ಅವರನ್ನ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕಿಳಿಸಿ ಡಿ ಕೆ ಬ್ರದರ್ಸ್ ಠಕ್ಕರ್ ಕೊಡುವ ತಂತ್ರಗಾರಿಕೆಯನ್ನ ನಡೆಸಿದ್ದಾರೆ ಎನ್ನಲಾಗಿದೆ.












Click it and Unblock the Notifications