ಎಚ್ಡಿಕೆ Vs ಸುಮಲತಾ: ದಳಪತಿಗಳಿಂದ ಹಿಂದಿನ ವಿಡಿಯೋ ಬಿಡುಗಡೆ
ಬೆಂಗಳೂರು, ಜುಲೈ 10: ಕೃಷ್ಣರಾಜಸಾಗರ ಅಣೆಕಟ್ಟಿನ ವಿಚಾರದಲ್ಲಿ ಆರಂಭವಾದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಸಂಸದೆ ಸುಮಲತಾ ನಡುವಿನ ವಾಕ್ಸಮರ ಬೇರೆ ಬೇರೆ ಆಯಾಮಗಳನ್ನು ಪಡೆದುಕೊಳ್ಳುತ್ತಿದೆ.
Recommended Video
"ನಾವು ಹೋರಾಟ ಮಾಡಬೇಕಾದ ವಿಚಾರ ಬಹಳಷ್ಟಿವೆ. ಕನ್ನಡ, ಕನ್ನಡಿಗ, ಕರ್ನಾಟಕಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನಮಗೆ ಬಹುದೊಡ್ಡ ನ್ಯಾಯ ಸಿಗಬೇಕಿದೆ. ನನ್ನ ಹೋರಾಟವನ್ನು ಈಗಾಗಲೇ ಅತ್ತ ಕೇಂದ್ರೀಕರಿಸಿದ್ದೇನೆ"ಎಂದು ಕುಮಾರಸ್ವಾಮಿಯವರು ಟ್ವೀಟ್ ಮಾಡುವ ಮೂಲಕ ಈ ವಿಚಾರವನ್ನು ಬೆಳೆಸಲು ಇಷ್ಟವಿಲ್ಲ ಎಂದು ಸಾರಿದ್ದಾರೆ.
ಆದರೆ, ದಳಪತಿಗಳು ಮತ್ತೆಮತ್ತೆ ಹೇಳಿಕೆಯನ್ನು ನೀಡುತ್ತಿದ್ದು, ಸುಮಲತಾ ಬೆನ್ನಿಗೆ ನಿಂತಿರುವ ರಾಕ್ಲೈನ್ ವೆಂಕಟೇಶ್ ಅವರ ನಿವಾಸದ ಮುಂದೆ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿದ್ದಾರೆ.
ಇವೆಲ್ಲದರ ನಡುವೆ, ಅಂಬರೀಶ್ ಅಂತಿಮ ಸಂಸ್ಕಾರದ ವೇಳೆ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿಯವರು ಸರಿಯಾಗಿ ಸ್ಪಂದಿಸಿಲ್ಲ ಎನ್ನುವ ಸುಮಲತಾ ಹೇಳಿಕೆಗೆ ಸಂಬಂಧಿಸಿದಂತೆ, ಜೆಡಿಎಸ್ ಮುಖಂಡರು ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದಾರೆ.

ಸುಮಲತಾ ಅವರು ನೀಡಿದ್ದ ಹೇಳಿಕೆಯನ್ನು ಜನತೆ ನಂಬಬಾರದು
ಅಂಬರೀಶ್ ಅವರ ಅಂತಿಮ ಸಂಸ್ಕಾರದ ನಂತರ ಸುಮಲತಾ ಅವರು ಕುಮಾರಸ್ವಾಮಿಯವರಿಗೆ ಧನ್ಯವಾದ ಹೇಳುವ ವಿಡಿಯೋವನ್ನು ಜೆಡಿಎಸ್ ಮುಖಂಡ ಟಿ.ಎ.ಶರವಣ ಬಿಡುಗಡೆ ಮಾಡಿದ್ದಾರೆ. ಸುಮಲತಾ ಅವರು ನೀಡಿದ್ದ ಹೇಳಿಕೆಯನ್ನು ಜನತೆ ನಂಬಬಾರದು ಎನ್ನುವ ಕಾರಣಕ್ಕಾಗಿ ಈ ವಿಡಿಯೋ ಬಿಡುಗಡೆ ಮಾಡುತ್ತಿರುವುದಾಗಿ ಅವರು ಹೇಳಿದ್ದಾರೆ.

ನಮ್ಮ ಕುಮಾರಣ್ಣನಿಗೆ ನಾನು ಕೈಜೋಡಿಸಿ ನಮಸ್ಕಾರ ಹೇಳುತ್ತೇನೆ
ಆ ವಿಡಿಯೋದಲ್ಲಿ, "ಅಂಬರೀಶ್ ಅವರ ಅಂತಿಮ ಪಯಣ ಏನಿತ್ತೋ, ಅವರನ್ನು ಅರಸನನ್ನಾಗಿ ಕಳುಹಿಸಿಕೊಟ್ಟಿದ್ದೀರಾ. ಅದಕ್ಕೆ ಮುಖ್ಯವಾಗಿ ನಮ್ಮ ಕುಮಾರಣ್ಣನಿಗೆ ನಾನು ಕೈಜೋಡಿಸಿ ನಮಸ್ಕಾರ ಹೇಳುತ್ತೇನೆ. ಅಂಬರೀಶ್ ರಾಜನಾಗಿಯೇ ಬಾಳಿದರು, ರಾಜನಾಗಿಯೇ ಹೋದರು"ಎಂದು ಸುಮಲತಾ ಹೇಳಿದ್ದರು.

ಅಂಬರೀಶ್ ಅವರ ಅಭಿಮಾನಿಗಳ ಪರವಾಗಿ ನಿಮಗೆ ಕೃತಜ್ಞತೆ ಹೇಳುತ್ತೇನೆ
"ರಾಜಕಾರಣದಲ್ಲಿರಬಹುದು, ಸಿನಿಮಾ ರಂಗದಲ್ಲಿರಬಹುದು ಅಂಬರೀಶ್ ಅವರಿಗೆ ಬೆಂಬಲ ಕೊಟ್ಟ ಎಲ್ಲರಿಗೂ ನನ್ನ ಧನ್ಯವಾದಗಳು. ಸರಿಯಾದ ಸಮಯಕ್ಕೆ ಸರಿಯಾದ ನಿರ್ಧಾರ ತೆಗೆದುಕೊಂಡು ಕುಮಾರಣ್ಣನವರು ಅಂತಿಮ ವಿಧಿವಿಧಾನಗಳನ್ನು ನಡೆಸಿಕೊಟ್ಟಂತಹ ರೀತಿಗಾಗಿ ಸಮಸ್ತ ಅಂಬರೀಶ್ ಅವರ ಅಭಿಮಾನಿಗಳ ಪರವಾಗಿ ನಿಮಗೆ ಕೃತಜ್ಞತೆ ಹೇಳುತ್ತೇನೆ"ಎಂದು ಸುಮಲತಾ ಹೇಳಿದ್ದರು.

ನಾಡಿನ ಜನತೆಗೆ ಸತ್ಯ ಗೊತ್ತಾಗಲಿ ಎನ್ನುವ ಕಾರಣಕ್ಕಾಗಿ ವಿಡಿಯೋ ಬಿಡುಗಡೆ
"ಅಂದು ಕುಮಾರಣ್ಣನವರ ಬಗ್ಗೆ ಗೌರವದ ಮಾತಾನ್ನಾಡಿದ್ದ ಸುಮಲತಾ ಅವರು, ಇಂದು ಅಂತಿಮ ಸಂಸ್ಕಾರಕ್ಕೆ ವ್ಯವಸ್ಥೆಯನ್ನು ನಾವೇ ಮಾಡಿಕೊಂಡಿದ್ದು ಎಂದು ಹೇಳುತ್ತಾರೆ. ಅಂಬರೀಶ್ ಅವರ ಅಭಿಮಾನಿಯಾಗಿ ಕುಮಾರಣ್ಣ ಅಂದು ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದರು. ನಾಡಿನ ಜನತೆಗೆ ಕುಮಾರಣ್ಣನವರಿಂದ ಏನೂ ತಪ್ಪಾಗಿಲ್ಲ ಎನ್ನುವುದು ಗೊತ್ತಾಗಲಿ ಎನ್ನುವ ಕಾರಣಕ್ಕಾಗಿ ಈ ವಿಡಿಯೋ ಬಿಡುಗಡೆ ಮಾಡುತ್ತಿದ್ದೇವೆ"ಎಂದು ಶರವಣ ಅವರು ಹೇಳಿದ್ದಾರೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ












Click it and Unblock the Notifications