Heat wave; ಜನರ ಆರೋಗ್ಯ ಕಾಪಾಡಿಕೊಳ್ಳಲು ಸಲಹೆಗಳು

ಬೆಂಗಳೂರು, ಏಪ್ರಿಲ್ 26; ಈ ಬಾರಿಯ ಬೇಸಿಗೆಗೆ ಜನರು ಕಂಗೆಟ್ಟು ಹೋಗಿದ್ದಾರೆ. ಉಷ್ಣಾಂಶ 35 ಡಿಗ್ರಿ ದಾಟಿದ್ದು, ಜನರು ಮಳೆಗಾಲ ಆರಂಭವಾದರೆ ಸಾಕು ಎಂದು ಆಕಾಶವನ್ನು ನೋಡುವಂತಾಗಿದೆ. ಬೇಸಿಗೆಯ ಬಿಸಿಲಿನ ಝಳದ ನಡುವೆ ಬಿಸಿಗಾಳಿಯು ಜನರ ಮೇಲೆ ಪ್ರತಿಕೂಲ ಪರಿಣಾಮವನ್ನು ಉಂಟು ಮಾಡುತ್ತಿದೆ. ಆದ್ದರಿಂದ ಬಿಸಿಗಾಳಿ ಪರಿಣಾಮ ಕಡಿಮೆ ಮಾಡಲು ಸಲಹೆ/ ಸೂಚನೆಗಳನ್ನು ನೀಡಲಾಗಿದೆ.

ಭಾರತೀಯ ಹವಾಮಾನ ಇಲಾಖೆ ಈ ವರ್ಷದಲ್ಲಿ ಬಿಸಿಗಾಳಿ ಕುರಿತು ಹೊರಡಿಸಿದ್ದ ಮುನ್ಸೂಚನೆ ಅನ್ವಯ ದೇಶದ ಹೆಚ್ಚಿನ ಭಾಗಗಳಲ್ಲಿ ತಾಪಮಾನ ಸಾಮಾನ್ಯಕ್ಕಿಂತಲೂ ಅಧಿಕವಾಗಿದೆ. ಗರಿಷ್ಠ ತಾಪಮಾನ ವಾಡಿಕೆಗಿಂತಲೂ ಅಧಿಕವಾಗಿದೆ. ಏಪ್ರಿಲ್ ತಿಂಗಳಿನಲ್ಲಿಯೇ ವಿಪರೀತ ಬಿಸಿಲು ಇದ್ದು, ಮೇ ತಿಂಗಳು ಕಳೆಯುವುದು ಹೇಗೆ? ಎಂಬ ಚಿಂತೆ ಜನರನ್ನು ಕಾಡುತ್ತಿದೆ.

Summer And Heat Wave Effect Suggestions For People

ಪ್ರಸ್ತುತ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶದ ಕೆಲವು ಭಾಗಗಳಲ್ಲಿ ಸಾಮಾನ್ಯ ತಾಪಮಾನಕ್ಕಿಂತ 2 ರಿಂದ 3 ಡಿಗ್ರಿಗಳಷ್ಟು ಅಧಿಕ ತಾಪಮಾನ ದಾಖಲಾಗುತ್ತಿದ್ದು, ಇದು ಮಾನವ ಹಾಗೂ ಪ್ರಾಣಿಗಳ ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಬಿಸಿಗಾಳಿಯಿಂದಾಗುವ ಅಪಾಯಗಳನ್ನು ತಗ್ಗಿಸಲು ಸಲಹೆಯನ್ನು ನೀಡಿದೆ.

ರಾಜ್ಯವು 2023ರ ಬಿಸಿಗಾಳಿ ಕ್ರಿಯಾ ಯೋಜನೆಯನ್ನು ರೂಪಿಸಿದೆ, ಇದು ಬಿಸಿಗಾಳಿ ಅಲೆಯ ಪ್ರತಿಕೂಲ ಪರಿಣಾಮವನ್ನು ತಡೆಗಟ್ಟಲು/ ತಗ್ಗಿಸಲು ಇಲಾಖೆವಾರು ನಿರ್ದಿಷ್ಟ ಕ್ರಮಗಳನ್ನು ವಿವರಿಸಿದೆ. ಬಿಸಿಗಾಳಿ ಪರಿಸ್ಥಿತಿಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಬಹುದು ಹಾಗೂ ಜೀವಹಾನಿಗೆ ಕಾರಣವಾಗುವ ಗಂಭೀರ ಪರಿಸ್ಥಿತಿ ತಲುಪುವ ಸಂಭವವಿರುತ್ತದೆ. ಆದ್ದರಿಂದ ಬಿಸಿಗಾಳಿ ಪ್ರತಿಕೂಲ ಪರಿಣಾಮವನ್ನು ತಡೆಗಟ್ಟಲು ಮತ್ತು ತಗ್ಗಿಸಲು ಈ ಸಲಹೆಗಳನ್ನು ನೀಡಲಾಗಿದೆ.

ಅನಾರೋಗ್ಯವನ್ನು ತಡೆಗಟ್ಟಲು ಸಾಮಾನ್ಯ ಸೂಚನೆಗಳು

* ಸಾಧ್ಯವಾದಷ್ಟು ಮಟ್ಟಿಗೆ ವಿಶೇಷವಾಗಿ ಗರಿಷ್ಠ ತಾಪಮಾನದ ಅವಧಿಯಲ್ಲಿ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸುವುದು (ಮಧ್ಯಾಹ್ನ 12 ರಿಂದ 3 ಗಂಟೆಯ ರವರೆಗೆ).

Summer And Heat Wave Effect Suggestions For People

* ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯುವುದು. ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ಹತ್ತಿ ಬಟ್ಟೆಗಳನ್ನು ಧರಿಸುವುದು.

* ಬಿಸಿಲಿನಲ್ಲಿ ಹೋಗುವಾಗ ರಕ್ಷಣೆಗಾಗಿ ಕನ್ನಡಕ, ಛತ್ರಿ/ ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸುವುದು. ಪ್ರಯಾಣ ಮಾಡುವಾಗ, ನೀರನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗುವುದು.

* ಹೊರಗಿನ ಉಷ್ಣತೆಯು ಅಧಿಕವಾಗಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸುವುದು (ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಹೊರಗೆ ಕೆಲಸ ಮಾಡುವುದನ್ನು)

* ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಕಾರ್ಬೊನೇಟೆಡ್ ತಂಪು ಪಾನೀಯ, ಚಹಾ, ಕಾಫಿ ಸೇವನೆ ತಪ್ಪಿಸುವುದು. ಸಾಧ್ಯವಾದಷ್ಟು ಬಿಸಿ ಆಹಾರವನ್ನು ಸೇವಿಸುವುದು.

* ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕು ಪ್ರಾಣಿಗಳನ್ನು ಬಿಡದಿರುವುದು. ಮೂರ್ಛೆ ಅಥವಾ ಅನಾರೋಗ್ಯ ಅನಿಸಿದರೆ, ತಕ್ಷಣ ವೈದ್ಯರನ್ನು ಭೇಟಿ ಮಾಡುವುದು.

* ನಿಂಬೆ ನೀರು, ಮಜ್ಜಿಗೆ ಮುಂತಾದ ಮನೆಯಲ್ಲಿ ತಯಾರಿಸಿದ ಪಾನೀಯಗಳು ಮತ್ತು ORSಯನ್ನು ಬಳಸುವುದು.

* ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ಒದಗಿಸುವುದು.

* ಮನೆಯನ್ನು ತಂಪಾಗಿರಿಸಲು ಪರದೆಗಳು, ಶಟರ್‌ಗಳು ಅಥವಾ ಸನ್‌ಶೇಡ್‌ಗಳನ್ನು ಬಳಸುವುದು.

* ಹೊರಗೆ ಹೋಗುವಾಗ ನೀರಿನ ಬಾಟಲಿ, ಛತ್ರಿ/ ಟೋಪಿ ಅಥವಾ ಕ್ಯಾಪ್/ ಹೆಡ್ ಕವರ್, ಹ್ಯಾಂಡ್ ಟವೆಲ್, ಹ್ಯಾಂಡ್ ಫ್ಯಾನ್, ಎಲೆಕ್ಟೋಲೈಟ್/ ಕೋಸ್/ ಮೌಖಿಕ ರೀಹೈಡ್ರೇಶನ್ ಪೌಡರ್‌ ಒಳಗೊಂಡಿರುವ ಬಿಸಿಗಾಳಿಯನ್ನು ತಡೆಗಟ್ಟುವ ಕಿಟ್ ಅನ್ನು ಒಯ್ಯಲು ನಾಗರಿಕರನ್ನು ಪ್ರೋತ್ಸಾಹಿಸುವುದು.

ಪರಿಣಾಮಗಳು ಹಾಗೂ ಗುರುತಿಸುವಿಕೆ; ಬಿಸಿಗಾಳಿಯಿಂದ ಸಾಮಾನ್ಯವಾಗಿ ನಿರ್ಜಲೀಕರಣ, ಶಾಖ ಸೆಳೆತ, ಶಾಖದ ಬಳಲಿಕೆ ಅಥವಾ ಶಾಖದ ಅಘಾತದಂತಹ (Sun stroke) ಉಂಟಾಗಿ ಆರೋಗ್ಯದ ದುಷ್ಪರಿಣಾಮಗಳು ಉಂಟಾಗುವ ಸಾಧ್ಯತೆ ಇದೆ.

ಶಾಖ ಸೆಳೆತಗಳು (Heat cramps) ಊತ ಮತ್ತು ಮೂರ್ಛ ಸಾಮಾನ್ಯವಾಗಿ 39 ಡಿಗ್ರಿ ಸೆಲ್ಸಿಯಸ್ ಅಂದರೆ 102 * Fಗಿಂತ ಕಡಿಮೆ ಜ್ವರದಿಂದ ಕೂಡಿರುತ್ತದೆ. ಶಾಖದ ಬಳಲಿಕೆ ಆಯಾಸ, ದೌರ್ಬಲ್ಯ, ತಲೆತಿರುಗುವಿಕೆ, ತಲೆನೋವು, ವಾಕರಿಕೆ, ವಾಂತಿ, ಸ್ನಾಯು ಸೆಳೆತ ಮತ್ತು ಬೆವರುವುದು. ಹೀಟ್ ಸ್ಟೋಕ್ ಎಂದರೆ ದೇಹದ ಉಷ್ಣತೆಯು 40 C ಅಂದರೆ 104 ° F ಅಥವಾ ಅದಕ್ಕಿಂತ ಹೆಚ್ಚಾಗುವುದು ಹಾಗೂ ಉಸಿರಾಟದಲ್ಲಿ ವ್ಯತ್ಯಯ ಮತ್ತು ಪ್ರಜ್ಞೆ ತಪ್ಪುವುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+