ಬಿರು ಬೇಸಿಗೆ : ಸರ್ಕಾರಿ ಕಚೇರಿ ವೇಳಾಪಟ್ಟಿ ಬದಲಾವಣೆ

Posted By:
Subscribe to Oneindia Kannada

ಬೆಂಗಳೂರು, ಏಪ್ರಿಲ್ 01 : ಬಿರು ಬೇಸಿಗೆಯಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಿರುವ ಕಾರಣ ಕಲಬುರಗಿ ವಿಭಾಗದ 6 ಜಿಲ್ಲೆಗಳು ಹಾಗೂ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣೆಯನ್ನು ಸಮಯವನ್ನು ಬದಲಾವಣೆ ಮಾಡಲಾಗಿದೆ.

ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಉಪ ಕಾರ್ಯದರ್ಶಿ ಆರ್.ಶಿವಲಿಂಗಯ್ಯ ಅವರು ಏ.1ರ ಶುಕ್ರವಾರ ಈ ಕುರಿತು ಆದೇಶ ಹೊರಡಿಸಿದ್ದಾರೆ. ಇಂದಿನಿಂದಲೇ ಈ ಆದೇಶ ಜಾರಿಗೆ ಬಂದಿದ್ದು, ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಈ ಆದೇಶ ಜಾರಿಯಲ್ಲಿರುತ್ತದೆ. [ಸುಡುತ್ತಿದೆ ಕರ್ನಾಟಕ, ಬಾ ಮಳೆಯೇ ಬೇಗ ಬಾ]

summer

ಕಚೇರಿ ವೇಳಾಪಟ್ಟಿ : ಶುಕ್ರವಾರ ಹೊರಡಿಸಿರುವ ಆದೇಶದಂತೆ ರಾಜ್ಯ ಸರ್ಕಾರಿ ಕಚೇರಿಗಳು ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1.30ರ ತನಕ ಕಾರ್ಯನಿರ್ವಹಿಸಲಿವೆ. ಸಮಯ ಬದಲಾವಣೆಯಾದ ಜಿಲ್ಲೆಗಳಲ್ಲಿ ಸರ್ಕಾರಿ ನೌಕರರು ಎಂದಿನಂತೆ ಲೋಪ/ಅಡೆ-ತಡೆಗಳಿಲ್ಲದೆ ಹಾಗೂ ಸಾರ್ವಜನಿಕರಿಗೆ ತೊಂದರೆ ಆಗದಂತೆ ಕಾರ್ಯನಿರ್ವಹಿಸಬೇಕಾಗಿದೆ. [ಎರಡೇ ಎರಡು ಬಕೆಟ್ ನೀರುಳಿಸಲು ಸಾಧ್ಯವೆ? ಪ್ರಯತ್ನಿಸಿ]

ಸರ್ಕಾರದ ತುರ್ತು ಕೆಲಸವಿದ್ದಾಗ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸರ್ಕಾರಿ ಕೆಲಸ ನಿರ್ವಹಿಸಲು ಆದೇಶ ಮಾಡಿದಲ್ಲಿ ಅಂತಹ ಆದೇಶಗಳನ್ನು ತಪ್ಪದೇ ಪಾಲಿಸಿ, ಸರ್ಕಾರಿ ಕೆಲಸದ ಸಮಯ ಮೀರಿದ್ದರೂ ಕೆಲಸಕ್ಕೆ ಹಾಜರಾಗತಕ್ಕದ್ದು ಎಂಬ ಷರತ್ತಿಗೊಳಪಟ್ಟು ಈ ಆದೇಶ ಹೊರಡಿಸಲಾಗಿದೆ.[ಜಲಾಶಯಗಳ ನೀರು ಕುಡಿಯುವ ನೀರಿಗಾಗಿ ಮಾತ್ರ]

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
The Karnataka government issued an order to change office hours in 8 districts of north Karnataka from the existing 10 am to 5.30 pm schedule to 8 am to 1.30 pm for April and May month of 2016 owing to the oppressive summer heat.
Please Wait while comments are loading...