ಎಂಟು ಜಿಲ್ಲೆಗಳ ಸರ್ಕಾರಿ ಕಚೇರಿ ವೇಳಾಪಟ್ಟಿ ಬದಲಾವಣೆ
ಕಲಬುರಗಿ, ಮಾರ್ಚ್ 31 : ಬೇಸಿಗೆಯಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಕಲಬುರಗಿ ವಿಭಾಗದ 6 ಜಿಲ್ಲೆಗಳು ಹಾಗೂ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರಿ ಕಚೇರಿಗಳ ಸಮಯವನ್ನು ಬದಲಾವಣೆ ಮಾಡಲಾಗಿದೆ. ಏ.1ರಿಂದ ಇದು ಜಾರಿಗೆ ಬರಲಿದೆ.
ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಸಿ.ಎ.ಗಾಯತ್ರಿ ಅವರು ಈ ಕುರಿತು ಪ್ರಕಟಣೆ ಹೊರಡಿಸಿದ್ದಾರೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸಲಿವೆ. [ಬೆಂಗಳೂರು ಸುತ್ತಲಿನ ಹಳ್ಳಿಗಳಲ್ಲಿ ನೀರಿನ ಕ್ರಾಂತಿ]

ಒಂದು ವೇಳೆ ಈ ಅವಧಿಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗಳು ಘೋಷಣೆಯಾದಲ್ಲಿ ರಾಜ್ಯ ಸರ್ಕಾರಿ ಕಚೇರಿಗಳು ಎಂದಿನಂತೆ ಬೆಳಗ್ಗೆ 10 ರಿಂದ ಸಂಜೆ 5.30ರವರೆಗೆ ಕಾರ್ಯನಿರ್ವಹಿಸಲಿವೆ ಎಂದು ಸರ್ಕಾರದ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. [ಬೆಂಗಳೂರು ಬಿಟ್ಟು ಬೇರೆ ಜಿಲ್ಲೆಯವರು ಈ ಸುದ್ದಿ ಓದಿ]
ಎಂಟು ಜಿಲ್ಲೆಗಳಲ್ಲಿ ಬೇಸಿಗೆಯಲ್ಲಿ ಕೆಲಸದ ವೇಳೆಯನ್ನು ಬೆಳಗ್ಗೆ 8 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ನಿಗದಿಪಡಿಸುವಂತೆ ಕಲಬುರಗಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಹಾಗೂ ಕಲಬುರಗಿ ಮತ್ತು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ಸಲ್ಲಿಸಿದ ಪ್ರಸ್ತಾವನೆಯನ್ನು ಪರಿಗಣಿಸಿ ಈ ಆದೇಶ ಹೊರಡಿಸಲಾಗಿದೆ.












Click it and Unblock the Notifications