Summer Holiday: ಹೈಕೋರ್ಟ್‌ಗೆ ಬೇಸಿಗೆ ರಜೆ ಘೋಷಣೆ
Summer Holiday: ಈಗಾಗಲೇ ರಾಜ್ಯದಲ್ಲಿನ ಶಾಲೆಗಳ ಎಲ್ಲಾ ತರಗತಿಗಳ ಪರೀಕ್ಷೆಗಳು ಮುಗಿದ್ದಿದ್ದು, ಬೇಸಿಗೆ ರಜೆಯನ್ನು ಸಹ ನೀಡಲಾಗಿದೆ. ಹಾಗೆಯೇ ಇದೀಗ ಹೈಕೋರ್ಟ್‌ಗೆ ನಾಳೆಯಿಂದ ಅಂದರೆ ಮೇ 5ರಿಂದ ಜಾರಿ ಆಗುವಂತೆ ಬೇಸಿಗೆ ರಜೆ ಘೋಷಣೆ ಮಾಡಲಾಗಿದೆ. ಹಾಗಾದ್ರೆ ಎಲ್ಲಿಯವರೆಗೆ ಹಾಗೂ ವಿಚಾರಣೆಗಳು ಎಲ್ಲಿ ನಡೆಯುತ್ತವೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಹೈಕೋರ್ಟ್‌ಗೆ ಮೇ 5ರ ನಾಳೆಯಿಂದ ಮೇ 31, 2025ರ ವರೆಗೆ ಬೇಸಿಗೆ ರಜೆ ಇರಲಿದ್ದು, ಕೋರ್ಟ್ ವಿಚಾರಣೆಗಳು ಜೂನ್ 2ರಿಂದ ಪುನರಾರಂಭ ಆಗಲಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.

ರಜೆ ಅವಧಿಯಲ್ಲಿ ತುರ್ತು ಅರ್ಜಿಗಳ ವಿಚಾರಣೆಗೆ ಬೆಂಗಳೂರಿನ ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರಗಿಯಲ್ಲಿ ಕಾರ್ಯನಿರ್ವಹಿಸಲಿವೆ. ಮೇ 6, 8, 13, 15, 20, 22, 27 ಮತ್ತು 29ರಂದು ರಜಾ ಕಾಲದ ವಿಚಾರಣೆಗಳನ್ನು ಮಾಡಲಿವೆ. ರಜೆ ವೇಳೆ ಬೆಂಗಳೂರು ಮತ್ತು ಧಾರವಾಡದಲ್ಲಿ ವಿಚಾರಣೆ ಬೆಳಗ್ಗೆ 10:30ರಿಂದ ಆರಂಭಿಸಿದರೆ, ಕಲಬುರಗಿ ಪೀಠ ಬೆಳಗ್ಗೆ 8ಕ್ಕೆ ಕಾರ್ಯಾರಂಭಗೊಳ್ಳಲಿದೆ.
ಈ ಅವಧಿಯಲ್ಲಿ ಕಾರ್ಯ ನಿರ್ವಹಿಸುವ ರಜಾ ಪೀಠಗಳಿಗೆ ನ್ಯಾಯಮೂರ್ತಿಗಳನ್ನು ನಿಯೋಜಿಸಿ ಸಿಜೆ ಸೂಚನೆ ಮೇರೆಗೆ ರಿಜಿಸ್ಟ್ರಾರ್ ಜನರಲ್ ಆದೇಶ ಹೊರಡಿಸಿದ್ದಾರೆ. ರಜೆ ಅವಧಿಯಲ್ಲಿ ಯಾವುದೇ ಮೇಲ್ಮನವಿ ಹಾಗೂ ಹಳೇ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಳ್ಳುವುದಿಲ್ಲ. ಕೇವಲ ತುರ್ತು ಅರ್ಜಿಗಳನ್ನು ಮಾತ್ರ ವಿಚಾರಣೆಗೆ ಪರಿಗಣಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ರಜೆ ಕುರಿತು ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ: ರಾಜ್ಯದಲ್ಲಿ ಈಗಾಗಲೇ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಮುಕ್ತಾಯವಾಗಿದ್ದು, ರಜೆಯನ್ನು ಸಹ ನೀಡಲಾಗಿದೆ. ಈ ನಡುವೆಯೇ ಪದವಿ ಕಾಲೇಜಿನ ರಜೆ ಕುರಿತು ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಇದನ್ನು ಪ್ರಾಂಶುಪಾಲರು ಗಮನಿಲೇಬೇಕು.
ರಾಜ್ಯದಲ್ಲಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಪರೀಕ್ಷೆ ಮುಗಿದು ರಜೆಯನ್ನು ಸಹ ಘೋಷಣೆ ಮಾಡಲಾಗಿದೆ. ಈ ನಡುವೆಯೇ ಶಿಕ್ಷಣ ಇಲಾಖೆ ರಜೆ ಕುರಿತು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಸರ್ಕಾರಿ, ಅನುದಾನಿತ ಪದವಿ ಕಾಲೇಜಿನಲ್ಲಿ ಶೈಕ್ಷಣಿಕ ಕಾರ್ಯಾಗಾರದ ಹೆಸರಿನಲ್ಲಿ ಪಡೆಯುತ್ತಿದ್ದ ಅನ್ಯ ಕಾರ್ಯ ನಿಮಿತ್ತದ ರಜೆಯನ್ನು ಒಂದು ಸೆಮಿಸ್ಟರ್‌ನಲ್ಲಿ ನಾಲ್ಕು ರಜೆಗೆ ಮಿತಿಗೊಳಿಸಿ ಕಾಲೇಜು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಈ ರಜೆಯನ್ನು ಮೊದಲು ಆಯಾ ಕಾಲೇಜಿನ ಪ್ರಾಂಶುಪಾಲರು ಮಂಜೂರು ಮಾಡುತ್ತಿದ್ದರು. ಆದರೆ, ಇದೀಗ ಬದಲಾವಣೆ ಮಾಡಲಾಗಿದ್ದು, ಹೊಸ ಆದೇಶದ ಪ್ರಕಾರ ಈ ಜವಾಬ್ದಾರಿಯನ್ನು ಪ್ರಾಂಶುಪಾಲರಿಂದ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕರಿಗೆ ವರ್ಗಾವಣೆ ಮಾಡಲಾಗಿದೆ.
ಈ ಹಿಂದೆ ರಜೆ ತೆಗೆದುಕೊಳ್ಳಬೇಕು ಅಂದ್ರೆ ಯಾವುದೇ ನಿಯಮಗಳು ಇರಲಿಲ್ಲ. ಯಾವಾಗ ಬೇಕಾದರೂ ರಜೆ ತೆಗೆದುಕೊಳ್ಳಬಹುದಾಗಿತ್ತು. ಪ್ರಾಂಶುಪಾಲರ ಮಟ್ಟದಲ್ಲೇ ರಜೆ ನಿರ್ಧಾರ ಆಗುತ್ತಿತ್ತು. ಆದ್ದರಿಂದ ಹೆಚ್ಚು ರಜೆ ತೆಗೆದುಕೊಳ್ಳಲಾಗಿತ್ತು. ಇದರಿಂದ ತರಗತಿಗಳಿಗೆ ತುಂಬಾ ಸಮಸ್ಯೆ ಆಗುತ್ತಿತ್ತು. ಈ ಹಿನ್ನೆಲೆ ಹಳೆಯ ಪದ್ಧತಿಯನ್ನು ಬದಲಾಯಿಸಿ ಈ ನಿರ್ಧಾರವನ್ನು ಶಿಕ್ಷಣ ಇಲಾಖೆ ತೆಗೆದುಕೊಂಡಿದೆ.
ರಾಜ್ಯದಲ್ಲಿ ಮೊದಲು 1-9ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆಗಳು ಬಳಿಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮುಕ್ತಾಯ ಆಗಿದ್ದು, ಬೇಸಿಗೆ ರಜೆಯನ್ನು ಸಹ ನೀಡಲಾಗಿದೆ. ಬೇಸಿಗೆ ರಜೆಗೂ ಮುನ್ನ ವಿವಿಧ ಕಾರಣಗಳಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಾಲು ರಜೆಗಳನ್ನೇ ನೀಡಲಾಗಿದೆ. ಈ ವರ್ಷದ ಆರಂಭದಿಂದಲೂ ಹಲವು ಜಿಲ್ಲೆಗಳಲ್ಲಿ ಸರ್ಕಾರಿ ರಜೆಗಳನ್ನು ಹೊರತುಪಡಿಸಿ ಪ್ರತಿಭಟನೆ, ವಿಶೇಷ ಕಾರ್ಯಕ್ರಮಗಳ ವೇಳೆ ರಜೆ ನೀಡಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ರಜೆಗಳ ಹಬ್ಬದೂಟವೇ ಸಿಕ್ಕಂತಾಗಿದೆ.
ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ: ರಾಜ್ಯದಲ್ಲಿ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶೈಕ್ಷಣಿಕ ಅವಧಿಗಳು ಮತ್ತು ರಜಾ ಅವಧಿಗಳನ್ನು ನಿಗದಿಪಡಿಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
2024-25ನೇ ಸಾಲಿನ ಚಟುವಟಿಕೆಗಳು ಮುಕ್ತಾಯ ಆಗುತ್ತಲಿದ್ದು, ಮುಂದಿನ 2025-26ನೇ ಸಾಲಿನ ಶೈಕ್ಷಣಿಕ ಸಾಲಿನ ಚಟುವಟಿಕೆಗಳನ್ನು ಪ್ರಾರಂಭಿಸಲು ಸದರಿ ಸಾಲಿನಲ್ಲಿ ಎಂದಿನಂತೆ ಅಗತ್ಯ ಪೂರ್ವಸಿದ್ದತೆಗಾಗಿ 2025ರ ಮೇ 29ರಿಂದ ಶಾಲೆ ಪ್ರಾರಂಭಿಸಲು ಸೂಚಿಸಲಾಗಿದೆ. ಅದರಂತೆಯೇ ವಾರ್ಷಿಕ ಶೈಕ್ಷಣಿಕ ಕ್ರಿಯಾ ಯೋಜನೆಯ ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ.
ರಾಜ್ಯದ ಎಲ್ಲಾ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ, ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಸಹಾಯವಾಗುವಂತೆ ನಿರ್ಧಾರ ಕಥಗೊಳ್ಳಲಾಗಿದೆ. ಒಟ್ಟು ವಾರ್ಷಿಕ ದಿನಗಳಲ್ಲಿ ಲಭ್ಯವಾಗುವ ಶೈಕ್ಷಣಿಕ ಚಟುವಟಿಕೆ ಅವಧಿಗಳು ಕರ್ತವ್ಯದ ದಿನಗಳು ಮತ್ತು ರಜಾ ದಿನಗಳನ್ನಾಧರಿಸಿ ವಾರ್ಷಿಕ ಕಾರ್ಯಸೂಚಿಯನ್ನು ಈ ಕೆಳಕಂಡಂತೆ ನಿಗದಿಪಡಿಸಲಾಗಿದೆ. ಇದನ್ನು ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ ಅನುಷ್ಠಾನಗೊಳಿಸಿ ಮತ್ತು ಪಾಲನೆ ಮಾಡಲು ತಿಳಿಸಿದೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ












Click it and Unblock the Notifications