• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಚಿವ ಡಾ.ಕೆ.ಸುಧಾಕರ್‌ ವಿರುದ್ಧ ಸಮನ್ಸ್‌ ಜಾರಿಗೆ ಕೋರ್ಟ್‌ ಆದೇಶ

|
Google Oneindia Kannada News

ಬೆಂಗಳೂರು, ನವೆಂಬರ್‌ 25: ಆರೋಗ್ಯ ಸಚಿವ ಡಾ.ಕೆ ಸುಧಾಕರ್‌ ಅವರಿಗೆ ಸಮನ್ಸ್‌ ಜಾರಿ ಮಾಡುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.

ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್. ಆಂಜನೇಯ ರೆಡ್ಡಿ , ಸಚಿವ ಸುಧಾಕರ್ ವಿರುದ್ಧ ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಕೋರ್ಟ್, ಸಚಿವರಿಗೆ ಸಮನ್ಸ್ ಜಾರಿ ಮಾಡುವಂತೆ ಆದೇಶ ಹೊರಡಿಸಿದೆ.

ಮಂಗಳೂರು ಆಟೋ ಸ್ಫೋಟ ಪ್ರಕರಣ: ಉಗ್ರ ಸಂಘಟನೆಗಳೊಂದಿಗಿನ ಸಂಬಂಧದ ಬಗ್ಗೆ ತನಿಖೆ- ಸುಧಾಕರ್ ಮಂಗಳೂರು ಆಟೋ ಸ್ಫೋಟ ಪ್ರಕರಣ: ಉಗ್ರ ಸಂಘಟನೆಗಳೊಂದಿಗಿನ ಸಂಬಂಧದ ಬಗ್ಗೆ ತನಿಖೆ- ಸುಧಾಕರ್

ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್. ಆಂಜನೇಯ ರೆಡ್ಡಿ ದಾಖಲಿಸಿರುವ ಖಾಸಗಿ ದೂರಿನ ವಿಚಾರಣೆ ನಡೆಸಿದ, ಶಾಸಕರು ಹಾಗೂ ಸಂಸದರ ವಿರುದ್ಧದ ಕ್ರಮಿನಲ್‌ ಪ್ರಕರಣಗಳ ವಿಚಾರಣೆಗೆಯ ವಿಶೇಷ ನ್ಯಾಯಾಲಯದ ನ್ಯಾಯಧೀಶರು ಜೆ.ಪ್ರೀತ್‌ ಅವರು, ಆರೋಗ್ಯ ಸಚಿವ ಸುಧಾಕರ್‌ ಸೇರಿದಂತೆ ಪ್ರಕರಣದ ಮೂವರು ಆರೋಪಿಗಳ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸುವಂತೆ ಸೂಚಿಸಿ ಸಮನ್ಸ್‌ ಜಾರಿಗೊಳಿಸಲು ಆದೇಶ ನೀಡಿದ್ದಾರೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದ ಆಡಳಿತದ ಸಂದರ್ಭದಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಕೆ. ಸುಧಾಕರ್ ಅವರನ್ನು ನೇಮಕ ಮಾಡಲಾಗಿತ್ತು. ಈ ವೇಳೆ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್. ಆಂಜನೇಯ ರೆಡ್ಡಿ ಅದನ್ನು ಪ್ರಶ್ನೆ ಮಾಡಿದ್ದರು. ಸುಧಾಕರ್ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಲು ಅರ್ಹತೆ ಹೊಂದಿಲ್ಲ ಎಂದು ಆಕ್ಷೇಪಿಸಿದ್ದರು. ಅಲ್ಲದೇ ಹೈಕೋರ್ಟ್‌ನ ಸಾರ್ವಜನಿಕಾ ಹಿತಾಸಕ್ತಿಯಲ್ಲಿ ಅರ್ಜಿ ಸಲ್ಲಿಸಿದ್ದರು.

ಆರ್. ಆಂಜನೇಯ ರೆಡ್ಡಿ ಆಕ್ಷೇಪ ಮತ್ತು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿರುವ ಬಗ್ಗೆ ಹೇಳಿಕೆ ನೀಡಿದ್ದ ಸುಧಾಕರ್, ಆಂಜನೇಯ ರೆಡ್ಡಿ, ಡೋಂಗಿ ಹೋರಾಟಗಾರ, ರೈತರಿಗೆ ಬಟ್ಟಿ ಸಾರಾಯಿ ಕುಡಿಸಿ ಜೈಲು ಸೇರಿದ್ದ ವ್ಯಕ್ತಿ ನನ್ನ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಎಂದು ಬಹಿರಂಗವಾಗಿ ಸುಧಾಕರ್‌ ಹೇಳಿಕೆ ನೀಡಿದ್ದರು.

ಸುಧಾಕರ್ ಆರೋಪವನ್ನು ಗಂಭೀರವಾಗಿ ತೆಗೆದುಕೊಂಡ ಆಂಜನೇಯ ರೆಡ್ಡಿ, ಧಾಕರ್ ವಿರುದ್ಧ ವಿಶೇಷ ಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದರು. ಮಾನನಷ್ಟ ಪ್ರಕರಣವನ್ನು ಕ್ರಿಮಿನಲ್ ಪ್ರಕರಣ ಎನ್ನುವ ಆದೇಶದ ಆಧಾರದಲ್ಲಿ ಆಂಜನೇಯ ರೆಡ್ಡಿ ಅವರು ಸುಧಾಕರ್ ಡಾ. ಕೆ. ಸುಧಾಕರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು.

ಡಾ. ಕೆ. ಸುಧಾಕರ್
Know all about
ಡಾ. ಕೆ. ಸುಧಾಕರ್
English summary
Court orders registration of case against Karnataka Health Minister Dr.K Sudhakar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X