ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಸ್ಕಾಂಗಳನ್ನು ಖಾಸಗಿಕರಣ ಮಾಡುವುದೇ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ಅಂತಿಮ ಗುರಿ‌: ಸುನೀಲ್ ಕುಮಾರ್

|
Google Oneindia Kannada News

ಬೆಂಗಳೂರು ಜನವರಿ13: ಎಸ್ಕಾಂಗಳನ್ನು ಖಾಸಗಿಕರಣ ಮಾಡುವುದೇ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ಅಂತಿಮ ಗುರಿ‌ ಎಂದು ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.

ಮಕರ ಸಂಕ್ರಾಂತಿ ವಿಶೇಷ ಪುಟ

ಈ ಕುರಿತು ಟ್ವೀಟ್ ಮಾಡಿರುವ ಅವರು, ಅಧಿಕಾರದಲ್ಲಿದ್ದಾಗ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಸಂಪರ್ಕ ನೀಡದೇ ಸತಾಯಿಸಿದವರು ಈಗ 200 ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡುತ್ತೇವೆ ಎಂದು ಡಂಗುರ ಸಾರುತ್ತಿರುವುದು ಈ ಶತಮಾನದ ಅತಿದೊಡ್ಡ ಸುಳ್ಳಾಗಬಹುದು ಎಂದು ವ್ಯಂಗ್ಯವಾಡಿದ್ದಾರೆ.

ತಾವು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಎಲ್ಲ ಎಸ್ಕಾಂಗಳನ್ನು ದಿವಾಳಿ ಅಂಚಿಗೆ ತಳ್ಳಿದ್ದ ಮಹಾನ್ ಆರ್ಥಿಕ ತಜ್ಞರೊಬ್ಬರು ಈಗ 200 ಯುನಿಟ್ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿದ್ದಾರೆ. ಇದು ಜನಹಿತದ ಹೇಳಿಕೆಯಲ್ಲ. ಎಸ್ಕಾಂಗಳನ್ನು ಖಾಸಗಿಕರಣಗೊಳಿಸುವುದೇ ಈ ಸುಳ್ಳು ಭರವಸೆಯ ಹಿಂದಿರುವ ಉದ್ದೇಶ ಎಂದು ಆರೋಪಿಸಿದ್ದಾರೆ.

Sunil Kumar Slams Congress Leader Over 200 Units Free Electricity Announcement

ಎಸ್ಕಾಂಗಳನ್ನು ಖಾಸಗಿಕರಣ ಮಾಡುವುದೇ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ಅಂತಿಮ ಗುರಿ‌ಯಾಗಿದೆ. ಉಚಿತ ವಿದ್ಯುತ್ ನಿಂದ ಎಸ್ಕಾಂಗಳ ಮೇಲೆ ಇನ್ನಷ್ಟು ಹೊರೆಯಾಗುತ್ತದೆ. ಆಗ ನಷ್ಟದಲ್ಲಿರುವ ಎಸ್ಕಾಂಗಳನ್ನು ಖಾಸಗಿಕರಣ ಮಾಡುವ ಸಂಚು ಈ ಘೋಷಣೆಯ ಹಿಂದೆ ಇದೆ. ತಾವು ಮುಖ್ಯಮಂತ್ರಿಯಾಗಿದ್ದಾಗ ಕತ್ತಲೆಯಲ್ಲಿ ಬಜೆಟ್ ಓದಿದ್ದನ್ನು ಸಿದ್ದರಾಮಯ್ಯ ಮರೆತಿರಬೇಕು. ನೀವು ಅಧಿಕಾರದಲ್ಲಿದ್ದಾಗ ಎಸ್ಕಾಂಗಳನ್ನು ನಷ್ಟಕ್ಕೆ ದೂಡಿದ್ದಿರಿ. ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ 9000 ಕೋಟಿ ರೂ.ನ್ನು ಎಸ್ಕಾಂಗಳಿಗೆ ನೀಡಿ ನೀವು ಮಾಡಿದ್ದ ಆಡಳಿತ ವೈಫಲ್ಯ ಸರಿಪಡಿಸಿದ್ದೇವೆ. ಮತಕ್ಕಾಗಿ ಇಂಧನ ಇಲಾಖೆ ಮಾರಾಟ ಮಾಡಬೇಡಿ ಎಂದು ಸಚಿವ ಸುನೀಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಕೃಷಿ ಪಂಪ್ ಸೆಟ್ ಗಳಿಗೆ ಹೊಸ ಸಂಪರ್ಕ ನೀಡಿರಲಿಲ್ಲ. ಇದರಿಂದ ರೈತರು ಹಾಗೂ ಕೃಷಿ ವಿಸ್ತರಣೆ ಚಟುವಟಿಕೆಗೆ ತೀವ್ರ ಸಮಸ್ಯೆಯಾಗಿತ್ತು. 2016-2017 ರಿಂದ ಕೃಷಿ ಪಂಪ್ ಸೆಟ್ ಗಳಿಗೆ ನೀಡುತ್ತಿದ್ದ ಸಬ್ಸಿಡಿ ಹಣವನ್ನು ವಿದ್ಯುತ್ ಸರಬರಾಜು ಕಂಪನಿಗಳಿಗೆ ನೀಡದೇ ಸತಾಯಿಸಿದರು. ಇದರಿಂದ ರೈತರು ಮಾತ್ರವಲ್ಲ ಉದ್ಯಮಕ್ಕೂ ತೊಂದರೆಯಾಯ್ತು.

Sunil Kumar Slams Congress Leader Over 200 Units Free Electricity Announcement

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ 2016 ರಿಂದ ಇಲ್ಲಿಯವರೆಗಿನ ಹಿಂಬಾಕಿಯೂ ಸೇರಿ 18 ಸಾವಿರ ಕೋಟಿ ರೂ. ಸಬ್ಸಿಡಿ ಹಣವನ್ನು ಎಸ್ಕಾಂಗಳಿಗೆ ನೀಡಿದ್ದೇವೆ. ಇಲಾಖೆಯನ್ನು‌ ಇಷ್ಟು ದೊಡ್ಡ ಪ್ರಮಾಣದಲ್ಲಿ ಹಳ್ಳ ಹಿಡಿಸಿದ್ದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಜೋಡಿ ಈಗ ಉಚಿತ ವಿದ್ಯುತ್ ಎಂಬ ಸುಳ್ಳು ಭರವಸೆ ನೀಡುತ್ತಿದ್ದಾರೆ. ದುರಾಡಳಿತ ಹಗರಣದ ಮೂಲಕ ಇಂಧನ ಇಲಾಖೆಯನ್ನು ನಷ್ಟಕ್ಕೆ‌ ದೂಡಿದ್ದೇ ನಿಮ್ಮ ಸರ್ಕಾರದ ಮಹತ್ವ ಸಾಧನೆ ಎಂದು ಟೀಕಿಸಿದ್ದಾರೆ.

English summary
Siddaramaiah, DK Shivakumar's ultimate goal to privatize Escoms Sunil Kumar said,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X