ವೈಷ್ಣೋದೇವಿ ದರ್ಶನಕ್ಕೆ ಒಂದೇ ರೈಲು
ಬೆಂಗಳೂರು, ಜ. 30: ರಾಜ್ಯದ ಪ್ರವಾಸಿಗರು ಇನ್ನು ನೇರವಾಗಿ ಜಮ್ಮುವಿನ ವೈಷ್ಣೋದೇವಿ ದರ್ಶನಕ್ಕೆ ರೈಲಿನಲ್ಲಿ ತೆರಳಬಹುದು. ವೈಷ್ಣೋದೇವಿ ಕ್ಷೇತ್ರದ ಸಮೀಪದಲ್ಲಿರುವ ಕಟ್ರಾ ರೈಲ್ವೆ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಯಶವಂತಪುರ-ಕಟ್ರಾ ರೈಲು ಸೇವೆಗೆ ಚಾಲನೆ ದೊರೆತಿದ್ದು ಅಧಿಕೃತವಾಗಿ ಫೆಬ್ರವರಿ 7 ರಿಂದ ಸಂಚಾರ ಆರಂಭವಾಗಲಿದೆ.
ಬೆಂಗಳೂರಿನಲ್ಲಿ ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ವಿವಿಧ ರೈಲು ಸೇವೆಗೆ ಚಾಲನೆ ನೀಡಿದರು. ಯಶವಂತಪುರ - ಕಟ್ರಾ ಸೂಪರ್ಫಾಸ್ಟ್ ಪ್ರಿಮಿಯಂ ಸಾಪ್ತಾಹಿಕ ಎಕ್ಸ್ಪ್ರೆಸ್ ರೈಲು ಪ್ರತಿ ಶನಿವಾರ ಬೆಳಿಗ್ಗೆ 11.30ಕ್ಕೆ ಯಶವಂತಪುರದಿಂದ ಹೊರಟು ಸೋಮವಾರ ಸಂಜೆ 7.45ಕ್ಕೆ ಕಟ್ರಾ ತಲುಪಲಿದೆ. ಅದೇ ರೀತಿ ಪ್ರತಿ ಮಂಗಳವಾರ ಬೆಳಿಗ್ಗೆ 6.30ಕ್ಕೆ ಹೊರಡುವ ರೈಲು ಗುರುವಾರ ಮಧ್ಯಾಹ್ನ 3 ಗಂಟೆಗೆ ಯಶವಂತಪುರ ತಲುಪಲಿದೆ.[ಬೆಂಗಳೂರು : 4 ನೂತನ ರೈಲುಗಳ ವೇಳಾಪಟ್ಟಿ]

ಬಳ್ಳಾರಿ, ಸಿಕಂದರಬಾದ್, ನಾಗಪುರ, ಝಾನ್ಸಿ ಮತ್ತು ನವದೆಹಲಿಯಲ್ಲಿ ಮಾತ್ರ ನಿಲುಗಡೆ ಕಲ್ಪಿಸಲಾಗಿದೆ. ಒಟ್ಟು 3,241 ಕಿ.ಮೀ ದೂರವನ್ನು 56 ಗಂಟೆಗಳಲ್ಲಿ ಕ್ರಮಿಸುವ ರೈಲು ರಾಜ್ಯಕ್ಕೆ ಸಂಬಂಧಿಸಿ ಹೇಳುವುದಾದರೆ 2 ನೇ ದೂರ ಅಂತರದ ರೈಲಾಗಿದೆ.
ವೇಳಾಪಟ್ಟಿ
* ಪ್ರತಿ ಶನಿವಾರ ಬೆಳಿಗ್ಗೆ 11.30ಕ್ಕೆ ಯಶವಂತಪುರದಿಂದ ನಿರ್ಗಮನ
* ಸೋಮವಾರ ಸಂಜೆ 7.45ಕ್ಕೆ ಕಟ್ರಾ ರೈಲು ನಿಲ್ದಾಣ
* ಪ್ರತಿ ಮಂಗಳವಾರ ಬೆಳಿಗ್ಗೆ 6.30ಕ್ಕೆ ಕಟ್ರಾದಿಂದ ನಿರ್ಗಮನ
* ಪ್ರತಿ ಗುರುವಾರ ಮಧ್ಯಾಹ್ನ 3 ಗಂಟೆಗೆ ಯಶವಂತಪುರಕ್ಕೆ ಆಗಮನ
* ಬಳ್ಳಾರಿ, ಸಿಕಂದರಬಾದ್, ನಾಗಪುರ, ಝಾನ್ಸಿ ಮತ್ತು ನವದೆಹಲಿಯಲ್ಲಿ ಮಾತ್ರ ನಿಲುಗಡೆ
* ಫೆಬ್ರವರಿ 7 ರಿಂದ ರೈಲು ಸಂಚಾರ ಆರಂಭ[30 ಸೆಕೆಂಡ್ ನಲ್ಲಿ ತತ್ಕಾಲ್ ಟಿಕೆಟ್ ಬುಕ್ಕಿಂಗ್ ಹೇಗೆ?]
ಟಿಕೆಟ್ ದರ ಪಟ್ಟಿ
* 2 ಟೈರ್ ಎಸಿ - 4,990 ರೂ.
* 3 ಟೈರ್ ಎಸಿ - 3,775 ರೂ.
* ಸ್ಲೀಪರ್ ಕ್ಲಾಸ್ - 1,705 ರೂ.
ಐಆರ್ ಸಿಟಿಸಿಯಲ್ಲಿ ಜನವರಿ 31 ರಿಂದ ಟಿಕೆಟ್ ಬುಕಿಂಗ್ ಆರಂಭವಾಗಲಿದೆ.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ












Click it and Unblock the Notifications