ಲಕ್ಷ್ಮಿ ಹೆಬ್ಬಾಳ್ಕರ್ ಪರ ಪಂಚಮಸಾಲಿ ಸ್ವಾಮೀಜಿಗಳ ಬ್ಯಾಟಿಂಗ್: ಮತ್ತೆ ಸೋಲಿನ ಸುಳಿಯಲ್ಲಿ ಜಗದೀಶ್ ಶೆಟ್ಟರ್?
ಬೆಳಗಾವಿ, ಏಪ್ರಿಲ್ 11: ಲೋಕಸಭಾ ಚುನಾವಣಾ ದಿನಾಂಕ ಘೋಷಣೆಯಾಗಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಆಡಳಿತರೂಢ ಕಾಂಗ್ರೆಸ್ ಗೆ ಠಕ್ಕರ್ ಕೊಡುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿದೆ. ಇತ್ತ ಮರಳಿ ಬಿಜೆಪಿ ಸೇರ್ಪಡೆಯಾಗಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಮತ್ತೊಂದು ಅಗ್ನಿ ಪರೀಕ್ಷೆ ಎದುರಾಗಿದೆ.
ಹೌದು, ಬೆಳಗಾವಿ ಲೋಕಸಭಾ ಕ್ಷೇತ್ರದ ಹಾಲಿ ಸಂಸದರಾದ ಮಂಗಳ ಅಂಗಡಿ ಅವರಿಗೆ ಟಿಕೆಟ್ ಕೈ ತಪ್ಪಿದ್ದು, ಬೆಳಗಾವಿಯಿಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಿದೆ. ಇತ್ತ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಕಣದಲ್ಲಿದ್ದಾರೆ. ಇತ್ತ ಪುತ್ರನ ರಾಜಕೀಯ ಭವಿಷ್ಯ ಸಚವ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ರೆ, ಅತ್ತ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಗೆ ಅಸ್ತಿತ್ವದ ಪ್ರಶ್ನೆಯಾಗಿದೆ.

ಕುಂದ ನಗರಿ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿರುವ ಪುತ್ರ ಮೃಣಾಲ್‌ರನ್ನು ಗೆಲ್ಲಿಸಲು ಲಕ್ಷ್ಮೀ ಹೆಬ್ಬಾಳ್ಕರ್ ಹಲವು ತಂತ್ರಗಾರಿಕೆಯೊಂದಿಗೆ ಅಬ್ಬರದ ಪ್ರಚಾರ ನಡೆಸಿದ್ದು, ಲಕ್ಷ್ಮೀ ಹೆಬ್ಬಾಳ್ಕರ್ ಪಂಚಮಸಾಲಿ ಕಾರ್ಡ್ ಪ್ಲೇ ಮಾಡಿದ್ದಾರೆ. ನನ್ನ ಮೈಯಲ್ಲಿ ಹರಿಯುತ್ತಿರುವುದು ಚೆನ್ನಮ್ಮನ ರಕ್ತ, ನನ್ನ ಪುತ್ರನ ಮೈಯಲ್ಲಿ ಹರಿಯುತ್ತಿರುವುದು ಪಂಚಮಸಾಲಿ ರಕ್ತ ಎಂದು ಹೇಳುವ ಮೂಲಕ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ವಿರುದ್ಧ ಜಾತಿ ಅಸ್ತ್ರವನ್ನು ಪ್ರಯೋಗಿಸಿದ್ದಾರೆ.
ಪುತ್ರನ ಮೈಯಲ್ಲಿ ಹರಿಯುತ್ತಿರುವುದು ಪಂಚಮಸಾಲಿ ರಕ್ತ ಎಂದು ಹೇಳುವ ಮೂಲಕ ಪಂಚಮಸಾಲಿ ಸ್ವಾಮೀಜಿಗಳು ಲಕ್ಷ್ಮೀ ಹೆಬ್ಬಾಳ್ಕರ್ ಪರವಾಗಿ ಬ್ಯಾಟೀಂಗ್ ಬಿಸಿದ್ದಾರೆ. ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠಾಧಿಪತಿ ವಚನಾನಂದ ಸ್ವಾಮೀಜಿ ಅವರು ಲಕ್ಷ್ಮೀ ಹೆಬ್ಬಾಳ್ಕರ್ ಪರವಾಗಿ ಬ್ಯಾಟೀಂಗ್ ಬೀಸಿದ್ರು, ಇದೀಗ ಕೂಡಲಸಂಗಮದ ಪಂಚಮಸಾಲಿ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ಸಹ ಕೈ ಜೋಡಿಸಿರುವುದು, ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಚುನಾವಣೆಯಲ್ಲಿ ಸೋಲು ಅನುಭವಿಸಿದ್ರು, ಅಲ್ಲದೇ ಲೋಕಸಭಾ ಚುನಾವಣೆ ಹಿನ್ನೆಲೆ ಮರಳಿ ಬಿಜೆಪಿ ಸೇರ್ಪಡೆಯಾಗ ಜಗದೀಶ್ ಶೆಟ್ಟರ್ ಸದ್ಯ ಬೆಳಗಾವಿ ಲೋಕಸಭಾ ಕಣದಲ್ಲಿದ್ದು, ಲಕ್ಷ್ಮೀ ಹೆಬ್ಬಾಳ್ಕರ್ ಪಂಚಮಸಾಲಿ ಕಾರ್ಡ್ ಪ್ಲೇ ಮಾಡಿದ್ದು, ಬೆಳಗಾವಿಯಲ್ಲಿ ಪಂಚಮದಾಲಿ ಮತಗಳು ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಕೈ ಹಿಡಿಯಲಿದ್ದು, ಮತ್ತೆ ಸೋಲಿನ ಸುಳಿಯಲ್ಲಿ ಜಗದೀಶ್ ಶೆಟ್ಟರ್ ಸಿಲುಕುತ್ತಾರಾ ಎನ್ನುವ ಪ್ರಶ್ನೆ ಉದ್ಭವಿಸಿದೆ.
ಬೆಳಗಾವಿ ಲೋಕಸಭಾ ಕುರುಕ್ಷೇತ್ರದಲ್ಲಿ ಪಂಚಮಸಾಲಿ ಸಮರ ತಾರಕಕ್ಕೇರಿದೆ. ಪಂಚಮಸಾಲಿ ಎನ್ನುವ ವಿಚಾರವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಮಾಜಿ ಸಚಿವ ಮುರುಗೇಶ್ ನಿರಾಣಿ ನಡುವೆ ವಾಕ್ಸಮರ ನಡೆಯುತ್ತಿದ್ದು, ಈ ವಿಚಾರಕ್ಕೆ ಕೂಡಲಸಂಗಮದ ಪಂಚಮಸಾಲಿ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ಮಧ್ಯಪ್ರವೇಶಿದ್ದು, ಮೀಸಲಾತಿ ಹೋರಾಟಕ್ಕೆ ಸಹಕಾರ ನೀಡಿದವರೆಲ್ಲರೂ ನಮ್ಮ ಸಮಾಜದವರೇ ಎನ್ನುವ ಮೂಲಕ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಕ್ಕೆ ನಿಂತಿದ್ದಾರೆ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಂಚಮಸಾಲಿ ಕಾರ್ಡ್ ಪ್ಲೇ ಬೆನ್ನಲ್ಲೇ ಬಿಜೆಪಿ ಅಲರ್ಟ್ ಆಗಿದ್ದು, ಬೆಳಗಾವಿಯಲ್ಲಿ ದಿಢೀರ್ ಸುದ್ದಿಗೋಷ್ಠಿ ನಡೆಸಿದ ಮುರಗೇಶ ನಿರಾಣಿ, ಲಕ್ಷ್ಮಿ ಹೆಬ್ಬಾಳ್ಕರ್ ಪಂಚಮಸಾಲಿ ಅಲ್ಲ, ಬಣಜಿಗ ಸಮಾಜಕ್ಕೆ ಸೇರಿದ್ದಾರೆ. ಲಕ್ಷ್ಮಿ ವಿವಾಹಪೂರ್ವ ಲಕ್ಷ್ಮಿ ಹಟ್ಟಿಹೊಳಿ ಆಗಿದ್ದರು, ಮದುವೆ ನಂತರ ಲಕ್ಷ್ಮಿ ಹೆಬ್ಬಾಳ್ಕರ್ ಆಗಿದ್ದಾರೆ. ಲಕ್ಷ್ಮಿ ತವರು ಮನೆ ಸದಸ್ಯರು ಪಂಚಮಸಾಲಿ ಸಮಾಜಕ್ಕೆ ಸೇರಿದವರು, ಆದರೆ ಲಕ್ಷ್ಮಿ ಪತಿ ರವೀಂದ್ರ ಹೆಬ್ಬಾಳ್ಕರ್ ಬಣಜಿಗ ಸಮಾಜಕ್ಕೆ ಸೇರಿದ್ದಾರೆ ಎಂದು ಮುರುಗೇಶ್ ನಿರಾಣೀ ಹೇಳಿದ್ದಾರೆ.
ಮದುವೆ ನಂತರ ಲಕ್ಷ್ಮಿನೂ ಬಣಜಿಗ, ಅವರ ಪುತ್ರ ಮೃಣಾಲ್ ಕೂಡ ಬಣಜಿಗ ಸಮಾಜಕ್ಕೆ ಸೇರಿದ್ದಾರೆ. ಸಮಾಜದ ಮತ ಸೆಳೆಯಲು ಸಚಿವೆ ಹೆಬ್ಬಾಳ್ಕರ್ ತಾನು ಪಂಚಮಸಾಲಿ ಎನ್ನುತ್ತಿದ್ದಾರೆ ಎಂದು ನಿರಾಣೀ ಆರೋಪಿಸಿದರು. ಇನ್ನು, ಮಾಜಿ ಸಚಿವ ಮುರಗೇಶ ನಿರಾಣಿ ಆರೋಪದ ಬೆನ್ನಲ್ಲೇ ಕೂಡಲಸಂಗಮ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದು, ಮೀಸಲಾತಿ ಹೋರಾಟಕ್ಕೆ ಸಹಕಾರ ನೀಡಿದವರೆಲ್ಲರೂ ನಮ್ಮ ಸಮಾಜದವರೇ, ಹೆಬ್ಬಾಳ್ಕರ್ ನಮ್ಮ ಸಮಾಜದವರಾಗಿದ್ದಕ್ಕೆ ಹೋರಾಟಕ್ಕೆ ಸಹಕಾರ ನೀಡಿದ್ದಾರೆ. ಮಹಿಳೆಯನ್ನು ಅವಮಾನಿಸುವ ಕೆಲಸವನ್ನು ಮುರಗೇಶ ನಿರಾಣಿ ಮಾಡಬಾರದು ಎಂದು ಹೇಳುವ ಮೂಲಕ ಲಕ್ಷ್ಮೀ ಹೆಬ್ಬಾಳ್ಕರ್ ಪರ ಬೆಂಬಲಕ್ಕೆ ನಿಂತಿದ್ದಾರೆ.












Click it and Unblock the Notifications