ಪ್ರಥಮ ಬಾರಿ ನಾಲ್ಕು ಬೆಳೆಗೆ ಬೆಂಬಲ ಬೆಲೆ
ಬೆಂಗಳೂರು, ಸೆಪ್ಟೆಂಬರ್ 06: ಎಪಿಎಂಸಿ ಕಾಯ್ದೆ ಮರುಸ್ಥಾಪನೆಯಿಂದ ರೈತರಿಗೆ ಹೆಚ್ಚು ಅನುಕೂಲವಾಗಿದ್ದು, ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಏಕಕಾಲದಲ್ಲಿ ನಾಲ್ಕು ಬೆಳೆಗಳನ್ನು ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಖರೀದಿ ಮಾಡಲಾಗುತ್ತಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಸರುಕಾಳು, ಸೂರ್ಯಕಾಂತಿ, ಸೋಯಾಬಿನ್ ಮತ್ತು ಉದ್ದಿನಕಾಳನ್ನು ಬೆಂಬಲ ಬೆಲೆ ಯೋಜನೆ ಅಡಿ ಖರೀದಿ ಮಾಡಲಾಗುತ್ತಿದೆ. ಸೋಯಾಬಿನ್ ಮತ್ತು ಉದ್ದಿನಕಾಳು ಖರೀದಿ ಪ್ರಕ್ರಿಯೆ ಆರಂಭಿಸಲು ಗುರುವಾರ (5.9.2024) ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದರು.

ಈಗಾಗಲೇ ಹೆಸರುಕಾಳು ಮತ್ತು ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡಲು ರಾಜ್ಯ ಸರ್ಕಾರ ಖರೀದಿ ಏಜನ್ಸಿಗಳನ್ನು ನೇಮಕ ಮಾಡಿದೆ. ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಲ್ ಸೂರ್ಯಕಾಂತಿ ಮತ್ತು 10 ಕ್ವಿಂಟಲ್ ಹೆಸರುಕಾಳು ಖರೀದಿ ಮಾಡಲಿದೆ. ಎಫ್.ಎ.ಕ್ಯೂ ಗುಣಮಟ್ಟದ ಸೋಯಾಬಿನ್ಗೆ ಕ್ವಿಂಟಲ್ ಗೆ ರೂ 4,892 ಹಾಗೂ ಉದ್ದಿನ ಕಾಳಿಗೆ ಕ್ವಿಂಟಲ್ ಗೆ ರೂ 7,400 ಬೆಲೆ ನಿಗದಿಪಡಿಸಲಾಗಿದೆ. ಬೆಂಬಲ ಬೆಲೆಯಲ್ಲಿ ಸುಮಾರು 10 ಲಕ್ಷ ಕ್ವಿಂಟಲ್ ಸೋಯಾಬಿನ್ ಮತ್ತು 2 ಲಕ್ಷ ಕ್ವಿಂಟಲ್ ಉದ್ದಿನಕಾಳು ಖರೀದಿ ಮಾಡಲಾಗುವುದು. 2024-25ನೇ ಸಾಲಿನಲ್ಲಿ 4.10 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 4.72 ಲಕ್ಷ ಮೆಟ್ರಿಕ್ ಟನ್ ಸೋಯಾಬಿನ್ ಹಾಗೂ 0.77 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 0.40 ಲಕ್ಷ ಮೆಟ್ರಿಕ್ ಟನ್ ಉದ್ದಿನಕಾಳು ಇಳುವರಿ ನಿರೀಕ್ಷೆ ಮಾಡಲಾಗಿತ್ತು ಎಂದು ತಿಳಿಸಿದರು.
ಎಫ್.ಎ.ಕ್ಯೂ ಗುಣಮಟ್ಟದ ಹೆಸರುಕಾಳಿಗೆ ಪ್ರತಿ ಕ್ವಿಂಟಲ್ ಗೆ ರೂ 8,682 ರೂ. ಹಾಗೂ ಸೂರ್ಯಕಾಂತಿಗೆ ರೂ 7,280 ನಿಗದಿಪಡಿಸಲಾಗಿದೆ. ಹೆಸರುಕಾಳು ಖರೀದಿಗೆ 172 ಖರೀದಿ ಕೇಂದ್ರ ಗುರುತಿಸಲಾಗಿದ್ದು, 1982 ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ. ಸೂರ್ಯಕಾಂತಿ ಖರೀದಿಗೆ 19 ಖರೀದಿ ಕೇಂದ್ರ ಗುರುತಿಸಲಾಗಿದ್ದು, 461 ರೈತರು ನೋಂದಣಿ ಮಾಡಿಕೊಂಡಿದ್ದಾರೆ. ಕೊಬ್ಬರಿ ಖರೀದಿಯಲ್ಲೂ ಈ ಬಾರಿ ಪ್ರಮುಖ ಪಾತ್ರ ವಹಿಸಲಾಗಿದ್ದು, ಇದೇ ಮೊದಲ ಬಾರಿಗೆ ಮಿಲ್ಲಿಂಗ್ ಕೊಬ್ಬರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡಲಾಗಿದೆ ಎಂದು ತಿಳಿಸಿದರು.
ಎಪಿಎಂಸಿ ಯಾರ್ಡ್ ಗಳಲ್ಲಿ 150 ಕೋಟಿ ರೂ. ವೆಚ್ಚದಲ್ಲಿ 14ರಿಂದ 15 ಶೀಥಲ ಗೃಹಗಳನ್ನು ಎಪಿಎಂಸಿಗಳಲ್ಲಿ ನಿರ್ಮಾಣ ಮಾಡಲಾಗುವುದು. ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ವಿಭಾಗಾವಾರು ವಿಜಿಲೆನ್ಸ್ ಸೆಲ್ಗಳನ್ನು ರಚಿಸಲಾಗಿದೆ. ವಿಜಿಲೆನ್ಸ್ ರಚನೆ ಪರಿಣಾಮ ಎಪಿಎಂಸಿ ಆದಾಯ ಕೂಡ ಹೆಚ್ಚಾಗಿದೆ, ಈ ವರ್ಷ ರೂ 380ರಿಂದ ರೂ 400 ಕೋಟಿ ಆದಾಯ ನಿರೀಕ್ಷೆ ಮಾಡಲಾಗಿದ್ದು, ಆರ್ಥಿಕ ವರ್ಷದ 5 ತಿಂಗಳಲ್ಲಿ ರೂ 133.15 ಕೋಟಿ ಆದಾಯ ಸಂಗ್ರಹವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ರೂ 77.42 ಕೋಟಿ. ಆದಾಯ ಸಂಗ್ರಹವಾಗಿತ್ತು.
ಪವರ್ ಲೂಮ್ ವಿದ್ಯುತ್ ಸಬ್ಸಿಡಿ ಮಿತಿ ರದ್ದು
ರಾಜ್ಯ ಸರ್ಕಾರ ವಿದ್ಯುತ್ ಮಗ್ಗ ಮತ್ತು ಮಗ್ಗಪೂರ್ವ ಘಟಕಗಳ ವಿದ್ಯುತ್ ಸಬ್ಸಿಡಿ ಮಿತಿ ರದ್ದುಪಡಿಸಿದೆ. ಇದರಿಂದ ಪ್ರತಿ ನೇಕಾರರಿಗೆ ವಾರ್ಷೀಕ ಕನಿಷ್ಟ ರೂ 40,000 ಉಳಿತಾಯವಾಗಲಿದೆ ಎಂದು ಜವಳಿ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. 10.1 HPಯಿಂದ 20 HPವರೆಗಿನ ವಿದ್ಯುತ್ ಮಗ್ಗ ಮತ್ತು ಮಗ್ಗಪೂರ್ವ ಘಟಕಗಳು ಬಳಕೆ ಮಾಡುವ ಪೂರ್ಣ ವಿದ್ಯುತ್ಗೆ ಸಬ್ಸಿಡಿ ನೀಡಲಿದ್ದು, ನೇಕಾರರು ಪ್ರತಿ ಯೂನಿಟ್ ಗೆ ರೂ 1.25 ಮಾತ್ರ ಪಾವತಿ ಮಾಡಬೇಕು. ಸರ್ಕಾರದ ಈ ಕ್ರಮದಿಂದ 4000 ಘಟಕಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಇದುವರೆಗೆ ಮಾಸಿಕ 500 ಯೂನಿಟ್ ಗೆ ಮಾತ್ರ ಸಬ್ಸಿಡಿ ನೀಡಲಾಗುತ್ತಿತ್ತು. ಹೆಚ್ಚುವರಿ ಬಳಕೆಯ ವಿದ್ಯುತ್ಗೆ ನೇಕಾರರು ವಿದ್ಯುತ್ ಕಂಪನಿಗಳು ನಿಗದಿಪಡಿಸಿರುವ ದರದಲ್ಲಿ ವಿದ್ಯುತ್ ಶುಲ್ಕ ಪಾವತಿಸಬೇಕಿತ್ತು. ಸರ್ಕಾರ ಸಬ್ಸಿಡಿ ಮಿತಿ ರದ್ದುಪಡಿಸಿರುವುದರಿಂದ ಮಾಸಿಕ ಎಷ್ಟೇ ಯೂನಿಟ್ ವಿದ್ಯುತ್ ಬಳಕೆ ಮಾಡಿದರೂ ರೂ 1.25 ದರ ವಿಧಿಸಲಾಗುವುದು ಎಂದು ವಿವರಿಸಿದರು.
ನಮ್ಮ ಸರ್ಕಾರ ಅಧಿಕಾರ ವಹಿಸಿಕೊಂಡ ಕೂಡಲೇ ಚುನಾವಣೆ ಸಮಯದಲ್ಲಿ ಕೊಟ್ಟ ಮಾತಿನಂತೆ 10 HPವರೆಗಿನ ಎಲ್ಲ ವಿದ್ಯುತ್ಮಗ್ಗ ಮತ್ತು ಮಗ್ಗಪೂರ್ವ ಘಟಕಗಳಿಗೆ ಶೂನ್ಯದರದಲ್ಲಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ.
10.1 ರಿಂದ 20 HPವರೆಗೆ ಸಬ್ಸಿಡಿ ದರದಲ್ಲಿ 500 ಯೂನಿಟ್ ಪೂರೈಕೆ ಮಾಡಲಾಗುತ್ತಿತ್ತು. ನೇಕಾರರು 500 ಯೂನಿಟ್ ಮಿತಿ ರದ್ದುಪಡಿಸಿ ಪೂರ್ಣ ಪ್ರಮಾಣದಲ್ಲಿ ಸಬ್ಸಿಡಿ ದರದಲ್ಲಿವಿದ್ಯುತ್ ಪೂರೈಕೆ ಮಾಡಬೇಕು ಎಂಬ ಬೇಡಿಕೆ ಇಟ್ಟಿದ್ದರು. ಸರ್ಕಾರ ನೇಕಾರರ ಬೇಡಿಕೆಗೆ ಸ್ಪಂದಿಸಿ 500 ಯೂನಿಟ್ ಮಿತಿ ರದ್ದುಪಡಿಸಿದೆ . ಈ ಕ್ರಮದಿಂದ ಸರ್ಕಾರಕ್ಕೆ ವಾರ್ಷೀಕ 17 ಕೋಟಿ ರೂ. ಹೊರೆಯಾಗಲಿದೆ ಎಂದು ತಿಳಿಸಿದರು.
-
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ನಾಸೀರ್ ಅಹ್ಮದ್ ವಜಾ; ಪಕ್ಷದಲ್ಲಿ ಶಿಸ್ತಿಲ್ಲದಿದ್ದರೆ ಕ್ರಮ ಎಂದ ಡಿಕೆ ಶಿವಕುಮಾರ್ -
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್ -
Vijay: ಪ್ರಚಾರದ ವೇಳೆ ಹೂವಿನ ಚೆಂಡು ಎಸೆದ ಅಭಿಮಾನಿ; ಸೈಕಲ್ನಿಂದ ಇಳಿದು ಗಾಡಿ ಹತ್ತಿದ ದಳಪತಿ ವಿಜಯ್, ವಿಡಿಯೋ ವೈರಲ್ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್












Click it and Unblock the Notifications