17 ಅನರ್ಹ ಶಾಸಕರಿಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ

ಬೆಂಗಳೂರು, ಆಗಸ್ಟ್ 13 : ಕಾಂಗ್ರೆಸ್ ಮತ್ತು ಜೆಡಿಎಸ್‌ನ ಅನರ್ಹ ಶಾಸಕರಿಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ ಉಂಟಾಗಿದೆ. ಶಾಸಕರು ಸಲ್ಲಿಸಿದ್ದ ಅರ್ಜಿಗಳನ್ನು ತುರ್ತಾಗಿ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಸ್ಪೀಕರ್ ರಮೇಶ್ ಕುಮಾರ್ 14 ಕಾಂಗ್ರೆಸ್ ಮತ್ತು 3 ಜೆಡಿಎಸ್ ಶಾಸಕರನ್ನು ಅನರ್ಹಗೊಳಿಸಿದ್ದರು. ಈ ಆದೇಶವನ್ನು ಶಾಸಕರು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನೆ ಮಾಡಿದ್ದರು. ತುರ್ತಾಗಿ ಅರ್ಜಿಯ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದ್ದರು.

Supreme Court Denies Emergency Hearing Of Disqualified MLAs Petition

ಮಂಗಳವಾರ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗಾಯ್ ತುರ್ತಾಗಿ ಅರ್ಜಿ ವಿಚಾರಣೆ ನಡೆಸಲು ಸಾಧ್ಯವಿಲ್ಲ. ರಿಜಿಸ್ಟ್ರಾರ್ ಅರ್ಜಿಯನ್ನು ಪರಿಗಣಿಸುತ್ತಾರೆ ಎಂದು ಹೇಳಿದರು.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈಗೆ ಹೋಗಿದ್ದ ಕಾಂಗ್ರೆಸ್‌ನ 14 ಮತ್ತು ಜೆಡಿಎಸ್‌ನ 3 ಶಾಸಕರ ವಿರುದ್ಧ ಪಕ್ಷದಿಂದ ಸ್ಪೀಕರ್ ರಮೇಶ್ ಕುಮಾರ್‌ಗೆ ದೂರು ನೀಡಲಾಗಿತ್ತು. ಸ್ಪೀಕರ್ ಎಲ್ಲಾ ಶಾಸಕರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದ್ದರು.

ಸ್ಪೀಕರ್ ಆದೇಶವನ್ನು ಸುಪ್ರೀಂಕೋರ್ಟ್‌ನಲ್ಲಿ ಶಾಸಕರು ಪ್ರಶ್ನೆ ಮಾಡಿದ್ದಾರೆ. ತುರ್ತಾಗಿ ತಮ್ಮ ಅರ್ಜಿಯ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಆದರೆ, ನ್ಯಾಯಾಲಯ ತುರ್ತಾಗಿ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ಹೇಳಿದೆ.

ಅನರ್ಹಗೊಂಡ ಶಾಸಕರು : 1.ರಮೇಶ್ ಜಾರಕಿಹೊಳಿ, ಮಹೇಶ್ ಕುಟಳ್ಳಿ, ಬೈರತಿ ಬಸವರಾಜು, ಎಸ್. ಟಿ. ಸೋಮಶೇಖರ್, ಮುನಿರತ್ನ, ಎಂ. ಟಿ. ಬಿ. ನಾಗರಾಜ್, ರೋಷನ್ ಬೇಗ್, ಪ್ರತಾಪ್ ಗೌಡ ಪಾಟೀಲ್, ಶ್ರೀಮಂತ ಪಾಟೀಲ್, ಆನಂದ್ ಸಿಂಗ್, ಡಾ. ಕೆ. ಸುಧಾಕರ್, ಬಿ. ಸಿ. ಪಾಟೀಲ್, ಶಿವರಾಂ ಹೆಬ್ಬಾರ್, ಆರ್. ಶಂಕರ್, ಎಚ್. ವಿಶ್ವನಾಥ್, ಕೆ. ಗೋಪಾಲಯ್ಯ, ನಾರಾಯಣ ಗೌಡ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+