ಬಾನು ಮುಷ್ತಾಕ್ ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂಕೋರ್ಟ್‌ನಲ್ಲೂ ವಜಾ!
ಈ ಬಾರಿಯ ಮೈಸೂರು ದಸರಾ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರು ಆಯ್ಕೆಯಾಗಿರುವ ವಿಚಾರದಲ್ಲಿ ಸುಪ್ರೀಂಕೋರ್ಟ್‌ನಲ್ಲೂ ಜಯ ಸಿಕ್ಕಿದೆ. ಬಾನು ಅವರನ್ನು ದಸರಾ ಉದ್ಘಾಟಕರಾಗಿ ರಾಜ್ಯ ಸರ್ಕಾರ ಆಯ್ಕೆ ಮಾಡಿರುವುದನ್ನು ಬಿಜೆಪಿ ನಾಯಕರು ಸೇರಿದಂತೆ ಹಲವರು ವಿರೋಧಿಸಿದ್ದರು. ಈ ಆಯ್ಕೆ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಕೂಡ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಕೋರ್ಟ್ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.
ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠವು ಈ ಅರ್ಜಿ ವಿಚಾರಣೆ ನಡೆಸಿ ವಜಾಗೊಳಿಸಿದೆ. ಹಿಂದೂಗಳ ಹಬ್ಬವಾದ ಮೈಸೂರು ದಸರಾ ಉತ್ಸವದ ಉದ್ಘಾಟಕರಾಗಿ ಹಿಂದೂಯೇತರ ಸಮುದಾಯದವರಾದ ಬಾನು ಅವರನ್ನು ಆಯ್ಕೆ ಮಾಡಲಾಗಿದೆ ಎಂಬ ವಿರೋಧದ ಕೂಗು ಎದ್ದಿತ್ತು. ಈ ಸಂಬಂಧ ಬೆಂಗಳೂರು ನಿವಾಸಿ ಹೆಚ್.ಎಸ್.ಗೌರವ್ ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ.

ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಕೂಡ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟಕರಾಗಿ ಆಯ್ಕೆ ಮಾಡಿದ್ದನ್ನ ಪ್ರಶ್ನಿಸಿ, ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. ದಸರಾ ಉದ್ಘಾಟನೆ ವಿಚಾರದಲ್ಲಿ ಯಾವುದೇ ಹಕ್ಕು ಉಲ್ಲಂಘನೆಯಾಗಿಲ್ಲ ಎಂದು ಹೈಕೋರ್ಟ್ ಕೂಡ ಅರ್ಜಿ ತಿರಸ್ಕರಿಸಿತ್ತು.
ಪ್ರತಿಷ್ಠಿತ ಬೂಕರ್ ಪ್ರಶಸ್ತಿಗೆ ಭಾಜನರಾಗಿರುವ ಲೇಖಕಿ ಬಾನು ಮುಷ್ತಾಕ್ ಅವರನ್ನು ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಕರಾಗಿ ರಾಜ್ಯ ಸರ್ಕಾರವು ಆಯ್ಕೆ ಮಾಡಿತ್ತು. ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲು ಹೈಕೋರ್ಟ್ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. ಬಾನು ಅವರನ್ನು ವಿರೋಧಿಸಿದ್ದವರಿಗೆ ಭಾರೀ ಮುಖಭಂಗವಾಗಿದೆ.
ನಾಡ ಹಬ್ಬ ದಸರಾವನ್ನು ಎಲ್ಲರೂ ಆಚರಿಸುತ್ತಾರೆ. ಹಾಗಾಗಿ ಇದನ್ನು ಸಾಹಿತಿ ಬಾನು ಮುಷ್ತಾಕ್ ಅವರು ಉದ್ಘಾಟನೆ ಮಾಡುವುದು ಸೂಕ್ತ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಮೈಸೂರು ದಸರಾ ಉದ್ಘಾಟಕರ ಆಯ್ಕೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿಯಲ್ಲಿ ನನಗೆ ಅಧಿಕಾರ ನೀಡಲಾಗಿತ್ತು. ಅದರಂತೆ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರಿಗೆ ಅವಕಾಶ ನೀಡಲು ತೀರ್ಮಾನಿಸಲಾಯಿತು. ಈ ಹಿಂದೆ ಕವಿ ನಿಸಾರ್ ಅಹಮದ್ ಅವರಿಂದಲೂ ದಸರಾ ಉದ್ಘಾಟನೆ ನಡೆದಿತ್ತು ಎಂದಿದ್ದರು.
ಆದರೆ ಬಾನು ಮುಷ್ತಾಕ್ ಅವರು ತಾಯಿ ಭುವನೇಶ್ವರಿ ಅವರ ಬಗ್ಗೆ ಮಾತನಾಡಿದ್ದ ಹಳೆಯ ವಿಡಿಯೋ ವೈರಲ್ ಆಗಿತ್ತು. ಪ್ರತಾಪ್ ಸಿಂಹ, ಯದುವೀರ್ ಒಡೆಯರ್, ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಬಿಜೆಪಿಯ ಹಲವರು ಈ ಬಾನು ಅವರ ಆಯ್ಕೆ ವಿರೋಧಿಸಿದ್ದರು. ಚಾಮುಂಡೇಶ್ವರಿಯ ವಿಚಾರದಲ್ಲಿ ಬಾನು ಅವರ ನಿಲುವು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದರು. ಬಳಿಕ ಈ ಬಗ್ಗೆ ಬಾನು ಅವರು ಪ್ರತಿಕ್ರಿಯಿಸಿದ್ದರು.
-
School Property: ಸರ್ಕಾರಿ ಶಾಲೆ 12 ವರ್ಷಗಳಿಂದ ಒಂದೇ ಭೂಮಿಯಲ್ಲಿದ್ದರೆ ಅದು ರಾಜ್ಯ ಸರ್ಕಾರದ ಆಸ್ತಿ: ಏನಿದು ಹೊಸ ಕಾನೂನು? -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್












Click it and Unblock the Notifications