ಯಡಿಯೂರಪ್ಪಗೆ ರಿಲೀಫ್, 5 ಕೇಸು ವಜಾಗೊಳಿಸಿದ ಸುಪ್ರೀಂಕೋರ್ಟ್‌

Recommended Video

      ಯಡಿಯೂರಪ್ಪಗೆ ರಿಲೀಫ್, 5 ಕೇಸು ವಜಾಗೊಳಿಸಿದ ಸುಪ್ರೀಂಕೋರ್ಟ್‌ | Oneindia Kannada

      ಬೆಂಗಳೂರು, ಡಿಸೆಂಬರ್ 04 : ವಕೀಲ ಸಿರಾಜಿನ್ ಪಾಷ ಮತ್ತು ಬಿ.ಎಸ್.ಯಡಿಯೂರಪ್ಪ ನಡುವಿನ ಕಾನೂನು ಹೋರಾಟಕ್ಕೆ ತೆರೆ ಬಿದ್ದಿದೆ. ಯಡಿಯೂರಪ್ಪ ವಿರುದ್ಧದ 5 ಕೇಸುಗಳನ್ನು ವಜಾಗೊಳಿಸಿ ಸುಪ್ರೀಂಕೋರ್ಟ್ ಆದೇಶ ನೀಡಿದೆ.

      ಮಂಗಳವಾರ ಸುಪ್ರೀಂಕೋರ್ಟ್ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ 5 ಪ್ರಕರಣಗಳನ್ನು ವಜಾಗೊಳಿಸಿದೆ. ಇದರಿಂದಾಗಿ ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.

      ಯಡಿಯೂರಪ್ಪ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಶಿವಮೊಗ್ಗ ಮೂಲದ ವಕೀಲ ಸಿರಾಜಿನ್ ಪಾಷಾ 5 ಕೇಸುಗಳನ್ನು ದಾಖಲಿಸಿದ್ದರು. ಈ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಯಡಿಯೂರಪ್ಪ ಕಾನೂನು ಹೋರಾಟ ನಡೆಸುತ್ತಿದ್ದರು.

      Supreme Court dismisses the 5 cases against BS Yeddyurappa

      ಯಡಿಯೂರಪ್ಪ ಹಾಗೂ ಕುಟುಂಬ ಸದಸ್ಯರ ವಿರುದ್ಧ ಡಿನೋಟಿಫಿಕೇಷನ್ ಸೇರಿದಂತೆ ವಿವಿಧ ಪ್ರಕರಣಗಳು ಬಾಕಿ ಇದ್ದವು. ಹಲವಾರು ವರ್ಷಗಳಿಂದ ಈ ಪ್ರಕರಣಗಳ ವಿಚಾರಣೆ ನಡೆಯುತ್ತಿತ್ತು. ಇಂದು ಪ್ರಕರಣಗಳನ್ನು ವಜಾಗೊಳಿಸಿ ಕೋರ್ಟ್ ಆದೇಶ ನೀಡಿದೆ.

      ಕರ್ನಾಟಕ ಬಿಜೆಪಿ ಟ್ವೀಟ್ : ಯಡಿಯೂರಪ್ಪ ವಿರುದ್ಧದ 5 ಪ್ರಕರಣ ವಜಾಗೊಂಡಿರುವುದಕ್ಕೆ ಕರ್ನಾಟಕ ಬಿಜೆಪಿ ಸಂತಸ ವ್ಯಕ್ತಪಡಿಸಿದೆ. 'ಸತ್ಯಮೇವ ಜಯತೆ' ಎಂದು ಟ್ವೀಟ್ ಮಾಡಲಾಗಿದೆ.

      'ಸತ್ಯಕ್ಕೆ ಸಾವಿಲ್ಲ-ಸುಳ್ಳಿಗೆ ಉಳಿಗಾಲವಿಲ್ಲ ಎಂಬಂತೆ ಶ್ರೀ ಯಡಿಯೂರಪ್ಪನವರ ಹಾಗೂ ಕುಟುಂಬದವರ ವಿರುದ್ಧ ಸಿರಾಜಿನ್ ಬಾಷಾ ಹಾಕಿದ್ದ ಸುಳ್ಳಿನ, ರಾಜಕೀಯ ಷಡ್ಯಂತರದಿಂದ ಕೂಡಿದ ದೂರುಗಳನ್ನು ಇಂದು ಸುಪ್ರೀಂ ಕೋರ್ಟ್ ವಜಾಗೊಳಿಸಿ ಇತಿಶ್ರೀ ಹಾಡಿದೆ. ಯಡಿಯೂರಪ್ಪನವರ ಸತ್ಯದ ಹಾದಿಗೆ ಸಂದ ಜಯ ಇದು' ಎಂದು ಕರ್ನಾಟಕ ಬಿಜೆಪಿ ಟ್ವೀಟ್ ಮೂಲಕ ಸಂತಸ ವ್ಯಕ್ತಪಡಿಸಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+