Get Updates
Get notified of breaking news, exclusive insights, and must-see stories!

ಎಂಜಿನಿಯರಿಂಗ್ ಕೋರ್ಸುಗಳ ಪ್ರವೇಶಾತಿ: ನ.30 ಕೊನೆ ದಿನ

ಬೆಂಗಳೂರು, ಅ.18: ಎಂಜಿನಿಯರಿಂಗ್ ಕೋರ್ಸುಗಳಿಗೆ ಪ್ರವೇಶಾವಕಾಶದ ಕೊನೆಯ ದಿನಾಂಕವನ್ನು ಸುಪ್ರೀಂ ಕೋರ್ಟ್ ನವೆಂಬರ್ 30ರವರೆಗೆ ವಿಸ್ತರಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಈ ಮುನ್ನ ಎಐಸಿಟಿಇ ನಿಗದಿ ಮಾಡಿದ್ದ ಪ್ರಕಾರ ಎಂಜಿನಿಯರಿಂಗ್ ಕೋರ್ಸ್ ಗಳಿಗೆ ಅಕ್ಟೋಬರ್ 25 ಕೊನೆಯ ದಿನವಾಗಿತ್ತು. ಆದರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಈ ದಿನಾಂಕವನ್ನು ವಿಸ್ತರಿಸಬೇಕೆಂದು ಕೋರಿ ಸುಪ್ರೀಂಕೋರ್ಟಿನ ಮೊರೆ ಹೋಗಿತ್ತು. ಈ ಮನವಿಯನ್ನು ನ್ಯಾಯಾಲಯವು ಪುರಸ್ಕರಿಸಿದೆ ಎಂದು ಅವರು ಹೇಳಿದ್ದಾರೆ.

ಹೀಗಾಗಿ ನಮಗೆ ಒಂದು ತಿಂಗಳಿಗಿಂತ ಹೆಚ್ಚು ಕಾಲಾವಕಾಶ ಸಿಕ್ಕಿದೆ. ಇಷ್ಟರಲ್ಲಿ ನಾವು ಸುಗಮ ಕೌನ್ಸೆಲಿಂಗ್ ಸೇರಿದಂತೆ ಪ್ರವೇಶ ಪ್ರಕ್ರಿಯೆ ಮುಗಿಸಲಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Supreme court extends Engineering Admission time to till Nov 30

ಕಳೆದ ವರ್ಷ ಪಿಯುಸಿ ಪಾಸಾದ 24 ಸಾವಿರ ಅಭ್ಯರ್ಥಿಗಳು ಈ ವರ್ಷ ಸಿಇಟಿ ಬರೆದು, ರ್ಯಾಂಕಿಂಗ್ ನೀಡುವ ವಿಚಾರದಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದರಿಂದ ಸ್ವಲ್ಪ ಅಡಚಣೆ ಎದುರಾಯಿತು. ಹೀಗಾಗಿ ಅಂತಿಮ ದಿನಾಂಕ ವಿಸ್ತರಿಸುವಂತೆ ಸರ್ವೋಚ್ಚ ನ್ಯಾಯಾಲಯಕ್ಕೆ ಕೇಳಿಕೊಂಡಿದ್ದೆವು ಎಂದು ಅವರು ವಿವರಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+