ರೋಹಿಣಿ ಸಿಂಧೂರಿ & ಡಿ.ರೂಪಾಗೆ ಸುಪ್ರಿಂ ಕೋರ್ಟ್‌ ಮಹತ್ವದ ಸಲಹೆ

ಬೆಂಗಳೂರು, ಮೇ, 09: ಇತ್ತೀಚೆಗಷ್ಟೇ ಡಿ.ರೂಪಾ ಅವರು ರೋಹಿಣಿ ಸಿಂಧೂರಿ ಅವರ ಕೆಲ ವೈಯಕ್ತಿಕ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡದ್ದು, ಬಳಿಕ ಭ್ರಷ್ಚಾಚಾರದ ಆರೋಪ ಹಿನ್ನೆಲೆ ಇಬ್ಬರೂ ಮಹಿಳಾ ಅಧಿಕಾರಿಗಳು ಸಾರ್ವಜನಿಕವಾಗಿ ವಾಗ್ವಾದಕ್ಕೆ ಇಳಿದಿದ್ದರು. ನಂತರ ರೂಪಾ ವಿರುದ್ಧ ರೋಹಿಣಿ ಸಿಂಧೂರಿ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಇದೀಗ ಈ ವಿಚಾರದಲ್ಲಿ ಸುಪ್ರಿಂಕೋರ್ಟ್‌ ಮಹತ್ವದ ಸಲಹೆಯೊಂದನ್ನು ನೀಡಿದೆ. ಹಾಗಾದರೆ ಆ ಸಲಹೆ ಏನು ಎಂದು ಇಲ್ಲಿ ತಿಳಿಯಿರಿ.

ಪರಸ್ಪರ ಆರೋಪ-ಪ್ರತ್ಯಾರೋಪ ಬಿಟ್ಟು ಸಂಧಾನದ ಮೂಲಕ ವಿವಾದವನ್ನು ನೀವೇ ಪರಿಹರಿಸಿಕೊಳ್ಳಿ ಎಂದು ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್‌ ಅಧಿಕಾರಿ ಡಿ.ರೂಪಾ ಮೌದ್ಗಿಲ್‌ ಅವರಿಗೆ ಸುಪ್ರೀಂ ಕೋರ್ಟ್‌ ಸಲಹೆ ನೀಡಿದೆ.

Supreme Court important advice to Rohini Sindhuri amp amp D Roopa

ನಿಮ್ಮಬ್ಬಿರ ನಡುವಿನ ಜಗಳ ಹೀಗೆಯೇ ಮುಂದುವರಿದರೆ ನಿಮ್ಮ ವೃತ್ತಿ ಮೇಲೆ ಕೆಟ್ಟ ಪರಿಣಾಮ ಬೀರಲಿದೆ. ಸಾರ್ವಜನಿಕ ಜೀವನದಲ್ಲಿರುವ ನೀವು ಇಂತಹ ನಡವಳಿಕೆ ಮುಂದುವರೆಸಬಾರದು ಎಂದು ನ್ಯಾ.ಅಭಯ್‌ ಎಸ್‌.ಓಕಾ ಹಾಗೂ ಪಂಕಜ್‌ ಮಿತ್ತಲ್‌ ಅವರಿದ್ದ ಪೀಠವು ಅಭಿಪ್ರಾಯಪಟ್ಟು, ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿದೆ ಎಂದು ತಿಳಿದುಬಂದಿದೆ.

ಇನ್ನು ಒಂದು ವೇಳೆ ಇಬ್ಬರೂ ತಮ್ಮ ಆರೋಪ-ಪ್ರತ್ಯಾರೋಪಗಳನ್ನು ಕೈಬಿಡಲು ಮುಂದಾದರೆ, ಇಲಾಖೆಯ ಕ್ರಮ ಕೈಗೊಳ್ಳದಂತೆ ರಾಜ್ಯಕ್ಕೆ ಸೂಚನೆ ನೀಡುವುದಾಗಿ ಸುಪ್ರೀಂ ಕೋರ್ಟ್‌ ವಿಚಾರಣೆ ವೇಳೆ ಸೂಚಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+