ಕರ್ನಾಟಕ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದ ಗೋವಾಕ್ಕೆ ಹಿನ್ನಡೆ

ನವದೆಹಲಿ, ಜನವರಿ 08: 'ಮಹದಾಯಿ ನ್ಯಾಯಾಧೀಕರಣ ನೀಡಿರುವ ಮಧ್ಯಂತರ ಆದೇಶವನ್ನು ಕರ್ನಾಟಕ ಪಾಲಿಸುತ್ತಿಲ್ಲ' ಎಂದು ಆರೋಪಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಗೋವಾಕ್ಕೆ ಹಿನ್ನಡೆಯುಂಟಾಗಿದೆ. ಗೋವಾ ಸರ್ಕಾರಕ್ಕೆ ನೋಟಿಸ್ ನೀಡಲಾಗಿದ್ದು, 6 ವಾರದೊಳಗೆ ಉತ್ತರಿಸುವಂತೆ ಸೂಚಿಸಲಾಗಿದೆ.

ನ್ಯಾಯಾಧಿಕರಣ ಮತ್ತು ಸುಪ್ರೀಂಕೋರ್ಟ್ ನೀಡಿದ ಯಾವುದೇ ಸೂಚನೆಗಳನ್ನು ಉಲ್ಲಂಘನೆ ಮಾಡಿಲ್ಲ ಎಂದು ಕರ್ನಾಟಕ ಸರ್ಕಾರದ ಪರ ವಾದಿಸಿದ ಅಡ್ವೋಕೇಟ್ ಜನರಲ್ ಉದಯ್ ಹೊಳ್ಳ ಸ್ಪಷ್ಟನೆ ನೀಡಿದ್ದಾರೆ.

SC notice to Goa on plea challenging Mahadayi award

ಮಹದಾಯಿ ನ್ಯಾಯಾಧಿಕರಣದ ಮುಂದೆ ಕರ್ನಾಟಕ 36.55 ಟಿಎಂಸಿ ನೀರಿಗಾಗಿ ಬೇಡಿಕೆ ಇಟ್ಟಿತ್ತು. ನ್ಯಾಯಾಧಿಕರಣ 13.42 ಟಿಎಂಸಿ ನೀರನ್ನು ಹಂಚಿಕೆ ಮಾಡಿದೆ.

ಈ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿರುವ ಕರ್ನಾಟಕ ಹಾಗೂ ಮಹಾರಾಷ್ಟ್ರ ಸಲ್ಲಿರುವ ಪ್ರತ್ಯೇಕ ಅರ್ಜಿಯನ್ನು ಪರಿಗಣಿಸಲಾಗಿದೆ ಎಂದು ಜಸ್ಟೀಸ್ ಡಿ ವೈ ಚಂದ್ರಚೂಡ್ ಹಾಗೂ ಹೇಮಂತ್ ಗುಪ್ತಾ ಅವರಿದ್ದ ನ್ಯಾಯಪೀಠ ಹೇಳಿದೆ.

ನ್ಯಾಯಾಧೀಕರಣದ ತೀರ್ಪಿನ ಅನ್ವಯ ಗೋವಾಕ್ಕೆ 33.395 ಟಿಎಂಸಿ ಅಡಿ ನೀರು, ಮಹಾರಾಷ್ಟ್ರಕ್ಕೆ 1.33 ಟಿಎಂಸಿ ಆಡಿ ನೀರು ಹಂಚಿಕೆಯಾಗಿದೆ. ಆದರೆ, 147.935 ಟಿಎಂಸಿ ಅಡಿ ನೀರು ವ್ಯರ್ಥವಾಗಿ ಸಮುದ್ರ ಸೇರುತ್ತಿದೆ ಎಂದು ಕರ್ನಾಟಕ ತನ್ನ ವಾದದಲ್ಲಿ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+