ಇಂಜಿನಿಯರಿಂಗ್ ಪ್ರವೇಶಕ್ಕೆ ಮಾತ್ರ ಕಾಮೆಡ್-ಕೆ ಪರೀಕ್ಷೆ

Posted By:
Subscribe to Oneindia Kannada

ಬೆಂಗಳೂರು, ಮೇ 07 : ಈ ಬಾರಿ ಇಂಜಿನಿಯರಿಂಗ್ ಪ್ರವೇಶಕ್ಕೆ ಮಾತ್ರ ಕಾಮೆಡ್-ಕೆ ಪರೀಕ್ಷೆ ನಡೆಯಲಿದೆ. ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶ ಪರೀಕ್ಷೆಯನ್ನು ಕಾಮೆಡ್‌-ಕೆ ರದ್ದುಪಡಿಸಿದೆ.

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಗೆ (ಎನ್‌ಇಇಟಿ) ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಖಾಸಗಿ ಕಾಲೇಜುಗಳು ಮತ್ತು ಒಕ್ಕೂಟಗಳು ಪ್ರತ್ಯೇಕ ಪ್ರವೇಶ ಪರೀಕ್ಷೆ ನಡೆಸಬಾರದು ಎಂದು ಸೂಚನೆ ನೀಡಿದೆ. [ಸಿಇಟಿ ಪರೀಕ್ಷೆ: ಸರ್ಕಾರ ಮೊದಲ ಶ್ರೇಣಿಯಲ್ಲಿ ಪಾಸ್]

comedk

ಶುಕ್ರವಾರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎ.ಆರ್‌.ದವೆ, ಶಿವಕೀರ್ತಿ ಸಿಂಗ್‌ ಮತ್ತು ಆದರ್ಶ್‌ ಕುಮಾರ್‌ ಗೋಯಲ್‌ ಅವರಿದ್ದ ಪೀಠ ಈ ಸೂಚನೆ ನೀಡಿದೆ. ಇದರಿಂದಾಗಿ ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶ ಪರೀಕ್ಷೆಯನ್ನು ರದ್ದುಪಡಿಸಲಾಗಿದೆ. ಆದರೆ, ಮೇ 8ರಂದು ಇಂಜಿನಿಯರಿಂಗ್ ಪ್ರವೇಶಕ್ಕೆ ಪರೀಕ್ಷೆ ನಡೆಯಲಿದೆ. [ಕಾಮೆಡ್ ಕೆ ಆನ್ಲೈನ್ ಟೆಸ್ಟ್ ಟಿಕೆಟ್ ಇಲ್ಲಿ ಪಡೆಯಿರಿ]

ಶುಕ್ರವಾರ ಅರ್ಜಿಯ ವಿಚಾರಣೆ ಸಮಯದಲ್ಲಿ ಕೇಂದ್ರ ಸರ್ಕಾರ ಒಪ್ಪಿದರೆ 2016-17ರ ಶೈಕ್ಷಣಿಕ ವರ್ಷದಲ್ಲಿ ಆಯಾ ರಾಜ್ಯ ಸರ್ಕಾರಗಳು ತಮ್ಮದೇ ಆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಲು ಆಕ್ಷೇಪ ಇಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಈ ಬಗ್ಗೆ ಅಭಿಪ್ರಾಯ ತಿಳಿಸುವಂತೆ ಸೂಚನೆ ನೀಡಿ ವಿಚಾರಣೆಯನ್ನು ಮೇ 9ಕ್ಕೆ ಮುಂದೂಡಿದೆ. [ಸಿಇಟಿ ಬರೆದು ಬಂದ ವಿದ್ಯಾರ್ಥಿಗಳು ಏನಂದ್ರು?]

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಗೆ ಸಂಬಂಧಿಸಿದ ವಿವಾದ ಬಗೆಹರಿಸಲು ಕೇಂದ್ರ ಸರ್ಕಾರ ವಿವಿಧ ರಾಜ್ಯಗಳ ಸಚಿವರ ಜತೆ ಸಭೆ ನಡೆಸಲಿದೆ. ಸಭೆಯಲ್ಲಿ ಕೈಗೊಂಡ ನಿರ್ಧಾರವನ್ನು ಸುಪ್ರೀಂಕೋರ್ಟ್‌ಗೆ ತಿಳಿಸಲಾಗುತ್ತದೆ.

ಮತ್ತೊಂದು ಕಡೆ ರಾಜ್ಯ ಸರ್ಕಾರ ನಡೆಸುವ ಸಿಇಟಿ ಪರೀಕ್ಷೆಗೆ ಮಾನ್ಯತೆ ನೀಡಬೇಕೆ? ಬೇಡವೆ ಎಂಬ ಬಗ್ಗೆ ಸೋಮವಾರ ಸುಪ್ರೀಂಕೋರ್ಟ್ ತೀರ್ಪು ನೀಡಲಿದೆ. ಅಂದು ಕೇಂದ್ರ ಸರ್ಕಾರ ಅಲ್ಲಿಸುವ ಹೇಳಿಕೆಯನ್ನು ಪರಿಗಣಿಸಿದ ಬಳಿಕ ಕೋರ್ಟ್ ತೀರ್ಪು ಪ್ರಕಟಿಸಲಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Supreme Court on Friday makes it clear that private associations cannot hold any exam. So, there will be no COMEDK exam for admissions to private medical and dental colleges. However, entrance exam for admission to private engineering colleges will be held as per the scheduled on May 8, 2016.
Please Wait while comments are loading...