DK Shivakumar: ಡಿಕೆಶಿ ಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್ ಆದೇಶ
ನವದೆಹಲಿ, ಜುಲೈ 31: ಭ್ರಷ್ಟಚಾರ ಪ್ರಕರಣದ ತನಿಖೆ ವಿಚಾರದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಸದ್ಯ ಮತ್ತೊಮ್ಮೆ ರಿಲೀಫ್ ಸಿಕ್ಕಿದೆ. ರಾಜ್ಯ ಹೈಕೋರ್ಟ್ ನೀಡಿದ್ದ ಮಧ್ಯಂತರ ತಡೆ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಈ ಹಿಂದೆ ಕರ್ನಾಟಕ ರಾಜ್ಯ ಹೈಕೋರ್ಟ್ ಮಧ್ಯಂತರ ತಡೆ ನೀಡಿತ್ತು. ತಡೆಯಾಜ್ಞೆ ತೆರವು ಮಾಡುವಂತೆ ಸಿಬಿಐ ತನಿಖಾಧಿಕಾರಿಗಳು ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ಸಿಬಿಐ ತನಿಖೆಗೆ ಹೈಕೋರ್ಟ್ ನೀಡಿದ್ದ ಮಧ್ಯಂತರ ಆದೇಶವನ್ನು ರದ್ದು ಮಾಡಲು ನಿರಾಕರಿಸುವ ಮೂಲಕ ಸುಪ್ರೀಂ ಕೊರ್ಟ್ ಡಿಕೆ ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ನೀಡಿದೆ. ಇದರಿಂದ ತನಿಖಾಧಿಕಾರಿಗಳಿಗೆ ನಿರಾಶೆಯಾಗಿದೆ. ಅಷ್ಟೇ ಅಲ್ಲದೇ ಸಿಬಿಐ ಅಧಿಕಾರಿಗಳ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿ ಸುಪ್ರೀಂ ಕೋರ್ಟ್ ವಜಾಗೊಳಿಸಿ ಆದೇಶಿಸಿದೆ.
ಕಳೆದ 2013ರಿಂದ 2018ರವರೆಗಿನ ಡಿಕೆ ಶಿವಕುಮಾರ್ ಅವರ ಆದಾಯ ಗಳಿಕೆ ಬಗ್ಗೆ ಸಿಬಿಐ ತನಿಖೆ ನಡೆಸಲಾಗುತ್ತಿತ್ತು. ಇದಕ್ಕೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿ ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ಅದರ ವಿಚಾರಣೆ ಇಂದು ನಡೆಯಿತು.
Supreme Court refuses to interfere with Karnataka High Court's interim order staying a corruption case against Karnataka Deputy CM DK Shivakumar pic.twitter.com/5eOOwsEZjD
— ANI (@ANI) July 31, 2023
ಆದಾಯ ಮೀತಿ ಆಸ್ತಿ ಗಳಿಸಿದ ಆರೋಪ ಹಿನ್ನೆಲೆಯಲ್ಲಿ ಸಿಬಿಐ ತನಿಖೆ ನಡೆಸಲು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಸರ್ಕಾರ ಈ ನಿರ್ಧಾರ ಪ್ರಶ್ನಿಸಿ ಡಿಕೆ ಶಿವಕುಮಾರ್ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದನ್ನು ಹೈಕೋರ್ಟ್ ವಜಾಗೊಳಿಸಿತ್ತು. ಅದನ್ನು ಪ್ರಶ್ನಿಸಿ ಅವರು ಮತ್ತೆ ಮೇಲ್ಮನವಿ ಸಲ್ಲಿಸಿದ್ದರು. ಆಗ ಅರ್ಜಿ ಪುರಸ್ಕರಿಸಿದ ಹೈಕೋರ್ಟ್ ನ್ಯಾಯಪೀಠ ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸುವ ಮೂಲಕ ರಿಲೀಫ್ ನೀಡಿತ್ತು. ಇದೀಗ ಸುಪ್ರೀಂ ಕೋರ್ಟ್ ನಿರ್ಧಾರದಿಂದ ಬಳಿಕ ಡಿಕೆ ಶಿವಕುಮಾರ್ ಮತ್ತೊಮ್ಮೆ ನಿರಾಳರಾಗಿದ್ದಾರೆ.












Click it and Unblock the Notifications