ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಕ್ಸಿಜನ್ ಪೂರೈಕೆ; ಸುಪ್ರೀಂಕೋರ್ಟ್‌ನಲ್ಲಿ ಕರ್ನಾಟಕಕ್ಕೆ ಜಯ

|
Google Oneindia Kannada News

ಬೆಂಗಳೂರು, ಮೇ 07; ರಾಜ್ಯಕ್ಕೆ ಪ್ರತಿ ದಿನಕ್ಕೆ 1,200 ಮೆಟ್ರಿಕ್ ಟನ್‌ ಆಕ್ಸಿಜನ್ ಪೂರೈಕೆ ಮಾಡುವಂತೆ ಕರ್ನಾಟಕ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿತ್ತು. ಈ ಆದೇಶಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್‌ ನಿರಾಕರಿಸಿದೆ.

Recommended Video

Oxygen ವಿಚಾರದಲ್ಲಿ; ಸುಪ್ರೀಂಕೋರ್ಟ್‌ನಲ್ಲಿ ಕರ್ನಾಟಕಕ್ಕೆ ಜಯ | Oneindia Kannada

ಕರ್ನಾಟಕ ರಾಜ್ಯದ ಆಕ್ಸಿಜನ್ ಪಾಲನ್ನು ಪ್ರತಿದಿನದ 965 ಮೆಟ್ರಿಕ್ ಟನ್‌ಗಳಿಂದ 1,200 ಮೆಟ್ರಿಕ್ ಟನ್‌ಗಳಿಗೆ ಹೆಚ್ಚಿಸಲು ಹೈಕೋರ್ಟ್ ಆದೇಶ ನೀಡಿತ್ತು. ಈ ಆದೇಶಕ್ಕೆ ತಡೆ ನೀಡಿ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.

ಕರ್ನಾಟಕ; 40 ಆಸ್ಪತ್ರೆಯಲ್ಲಿ ಆಕ್ಸಿಜನ್ ಘಟಕ ನಿರ್ಮಾಣಕ್ಕೆ ಒಪ್ಪಿಗೆ ಕರ್ನಾಟಕ; 40 ಆಸ್ಪತ್ರೆಯಲ್ಲಿ ಆಕ್ಸಿಜನ್ ಘಟಕ ನಿರ್ಮಾಣಕ್ಕೆ ಒಪ್ಪಿಗೆ

ಕೋವಿಡ್‌ ನಿರ್ವಹಣೆಗೆ ಸಂಬಂಧಿಸಿದಂತೆ ವಿವಿಧ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಕರ್ನಾಟಕ ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಎ. ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿತ್ತು.

ಆಕ್ಸಿಜನ್ ಎಕ್ಸ್‌ಪ್ರೆಸ್ ಮೂಲಕ 2511 ಮೆಟ್ರಿಕ್ ಟನ್ ಆಮ್ಲಜನಕ ಸರಬರಾಜು ಆಕ್ಸಿಜನ್ ಎಕ್ಸ್‌ಪ್ರೆಸ್ ಮೂಲಕ 2511 ಮೆಟ್ರಿಕ್ ಟನ್ ಆಮ್ಲಜನಕ ಸರಬರಾಜು

Supreme Court Upholds Karnataka High Court Order Directing Centre To Release 1200MT Oxygen To Karnataka

ಆಮ್ಲಜನಕ ಬಫರ್ ಸ್ಟಾಕ್ ಮಾಡುವಂತೆ ಸುಪ್ರೀಂಕೋರ್ಟ್ ಏಪ್ರಿಲ್ 20ರಂದು ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿತ್ತು. ಆದರೆ ಈ ತನಕ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅರ್ಜಿಯ ವಿಚಾರಣೆ ವೇಳೆ ಹೇಳಿತ್ತು.

ಕರ್ನಾಟಕ; 9 ಜಿಲ್ಲೆಯಲ್ಲಿ ಆಕ್ಸಿಜನ್ ಉತ್ಪಾದನಾ ಪ್ಲಾಂಟ್‌ಗಳೇ ಇಲ್ಲ! ಕರ್ನಾಟಕ; 9 ಜಿಲ್ಲೆಯಲ್ಲಿ ಆಕ್ಸಿಜನ್ ಉತ್ಪಾದನಾ ಪ್ಲಾಂಟ್‌ಗಳೇ ಇಲ್ಲ!

ಕರ್ನಾಟಕದಲ್ಲಿ ದಾಖಲಾಗುತ್ತಿರುವ ಕೋವಿಡ್ ಪ್ರಕರಣಗಳ ಏರಿಕೆಯ ಆಧಾರದಲ್ಲಿ ಆಕ್ಸಿಜನ್ ಪೂರೈಕೆ ಬಗ್ಗೆ ಹೆಚ್ಚುವರಿ ಬೇಡಿಕೆ ಪರಿಶೀಲಿಸಿ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿತು. 4 ದಿನಗಳ ಬಳಿಕ ಈ ಅರ್ಜಿ ವಿಚಾರಣೆ ನಡೆಯಲಿದೆ.

ರಾಜ್ಯದಲ್ಲಿ ಆಕ್ಸಿಜನ್ ಬಫರ್ ಸ್ಟಾಕ್ ಲಭ್ಯವಿದ್ದರೆ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳು ಸಾವನ್ನಪ್ಪುವಂತಹ ಪ್ರಕರಣ ನಡೆಯುತ್ತಿರಲಿಲ್ಲ ಎಂದು ಹೈಕೋರ್ಟ್ ವಿಚಾರಣೆ ವೇಳೆ ಅಭಿಪ್ರಾಯಪಟ್ಟಿತು.

ಕರ್ನಾಟಕಕ್ಕೆ ಪ್ರತಿದಿನ 1,200 ಮೆಟ್ರಿಕ್ ಟನ್‌ ಆಕ್ಸಿಜನ್ ಪೂರೈಕೆ ಅಸಾಧ್ಯ. ಹೈಕೋರ್ಟ್‌ ಆದೇಶಕ್ಕೆ ತಡೆ ನೀಡಬೇಕು ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.

English summary
Supreme Court refuses to stay Karnataka high court order asking the union govt to supply 1200 metric tonnes of oxygen to Karnataka every day. Centre sought a direction from court for a stay of high court order.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X