Hijab Row; ಹಿಜಾಬ್‌ ಅರ್ಜಿ ತುರ್ತು ವಿಚಾರಣೆ ಸಾಧ್ಯವಿಲ್ಲ; ಸುಪ್ರೀಂಕೋರ್ಟ್

ಬೆಂಗಳೂರು, ಮಾರ್ಚ್ 16; ಹಿಜಾಬ್ ಧರಿಸುವುದು ಅಗತ್ಯ ಧಾರ್ಮಿಕ ಆಚರಣೆ ಅಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಮಂಗಳವಾರ ತೀರ್ಪು ನೀಡಿದೆ. ಈ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಕೆ ಮಾಡಲಾಗಿದೆ. ಅರ್ಜಿಯ ತುರ್ತು ವಿಚಾರಣೆಗೆ ಕೋರ್ಟ್‌ ನಿರಾಕರಿಸಿದೆ.

ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಉಡುಪಿಯ ವಿದ್ಯಾರ್ಥಿಗಳ ಅರ್ಜಿ ಮತ್ತು ಇದೇ ವಿಚಾರದಲ್ಲಿ ಸಲ್ಲಿಕೆಯಾಗಿರುವ ಎಲ್ಲಾ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ವಜಾಗೊಳಿಸಿತ್ತು.

ಕರ್ನಾಟಕ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿಯನ್ನು ಮಂಗಳವಾರ ಸಂಜೆ ಸಲ್ಲಿಸಲಾಗಿತ್ತು. ಅರ್ಜಿಯ ತುರ್ತು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಲಾಗಿತ್ತು.

Supreme Court Refuses Urgent Hearing of Appeal Against Karnataka High Court Verdict in Hijab Row

ಬುಧವಾರ ಅರ್ಜಿಯ ತುರ್ತು ವಿಚಾರಣೆ ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‌ ಹೇಳಿದೆ. ಮಾರ್ಚ್ 21ರ ಬಳಿಕ ಅರ್ಜಿಯ ವಿಚಾರಣೆ ನಡೆಸುವುದಾಗಿ ಕೋರ್ಟ್‌ ಹೇಳಿದೆ. ಗುರುವಾರದಿಂದ ಸುಪ್ರೀಂಕೋರ್ಟ್‌ಗೆ ರಜೆ ಇದ್ದು, ಹೋಳಿ ಹಬ್ಬದ ಬಳಿಕ ಅರ್ಜಿ ವಿಚಾರಣೆ ನಡೆಯಲಿದೆ.

ಬುಧವಾರ ಅರ್ಜಿ ಮುಖ್ಯ ನ್ಯಾಯಮೂರ್ತಿ ಎನ್. ವಿ. ರಮಣ ಪೀಠದ ಮುಂದೆ ಬಂದಿತು. ಆಗ ತುರ್ತಾಗಿ ಅರ್ಜಿ ವಿಚಾರಣೆ ನಡೆಸುವ ಅಗತ್ಯವಿದೆಯೇ? ಎಂದು ಅವರು ಪ್ರಶ್ನಿಸಿದರು. ಮುಂದಿನ ವಾರ ವಿಚಾರಣೆ ನಡೆಸಬಹುದೇ? ಎಂದು ಕೇಳಿದರು.

ವಕೀಲ ಸಂಜಯ ಹೆಗಡೆ ಅರ್ಜಿಯ ತುರ್ತು ವಿಚಾರಣೆಗಾಗಿ ಮನವಿ ಮಾಡಿದ್ದರು. ಹೋಳಿ ರಜೆಯ ಬಳಿಕ ಅರ್ಜಿಯನ್ನು ವಿಚಾರಣೆಗೆ ಲಿಸ್ಟ್ ಮಾಡಲಾಗುತ್ತದೆ ಎಂದು ಕೋರ್ಟ್ ಹೇಳಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+