Supreme Court Big Shock: ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ 'ಕಂಬಿ' ಎಣಿಕೆ ಫಿಕ್ಸ್
Prajwal Revanna: ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಇಡೀ ರಾಜ್ಯ ಅಷ್ಟೇ ಅಲ್ಲದೆ, ದೇಶಾದ್ಯಂತ ಸದ್ದು ಮಾಡಿತ್ತು. ಇನ್ನು ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಂದು (ನವೆಂಬರ್ 11) ಸುಪ್ರೀಂಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ. ಈ ಅವರಿಗೆ ಇನ್ಮುಂದೆ ಜೈಲೂಟ ಫಿಕ್ಸ್ ಆದಂತಾಗಿದೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇನ್ನು ಇಂದು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟ್ ಬಿಗ್ ಶಾಕ್ ನೀಡಿದೆ.

ಅತ್ಯಾಚಾರ ಪ್ರಕರಣ ಸೇರಿದಂತೆ ಒಟ್ಟು ಮೂರು ಪ್ರಕರಣಗಳು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿತ್ತು. ಈಗಾಗಲೇ ಈ ಮೂರು ಪ್ರಕರಣಗಳ ವಿಚಾರಣೆ ನಡೆಸಿದ್ದ ಹೈಕೋರ್ಟ್ ಜಾಮೀನು ಅರ್ಜಿ ಹಾಗೂ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿತ್ತು. ಇದೀಗ ಸುಪ್ರೀಂಕೋರ್ಟ್ ಕೂಡ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಶಾಕ್ ನೀಡಿದೆ.
ಈ ಪ್ರಕರಣಗಳಲ್ಲಿ ಕೇಸ್ ದಾಖಲು?: ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿದ್ದರೆ, ಸಿಐಡಿ ಸೈಬರ್ ಸೆಲ್‌ನಲ್ಲಿ ದಾಖಲಾಗಿದ್ದ ಮತ್ತೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು.
ಮುಂದಿನ 6 ತಿಂಗಳು ಬಿಟ್ಟು ಮತ್ತೆ ಸುಪ್ರೀಂಕೋರ್ಟ್ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ಸಲ್ಲಿಕೆ ಮಾಡಬಹುದು. ಇಲ್ಲಿನ ಎಸ್‌ಐಟಿ ತನಿಖೆಗಳು ಪೂರ್ಣಗೊಂಡು ಜನಪ್ರತಿನಿಗಳ ನ್ಯಾಯಾಲಯವು ತೀರ್ಪು ನೀಡುವವರೆಗೂ ಜೈಲು ವಾಸದಲ್ಲಿಯೇ ಇರಬೇಕಾಗುತ್ತದೆ.
ಹಾಸನ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರನ್ನು ಮೇ 31ರಂದು ಪೊಲೀಸರು ಬಂಧಿಸಿದರು. ಜನಪ್ರತಿನಿಧಿಗಳ ನ್ಯಾಯಾಲಯ, ಹೈಕೋರ್ಟ್‌ನಲ್ಲಿ ಹಲವು ಬಾರಿ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರೂ ಕೂಡ ಯಾವುದೇ ಪ್ರಯೋಜನ ಆಗಿಲ್ಲ. ಇದೀಗ 160 ದಿನಗಳು ಕಳೆದಿದ್ದು, ಪ್ರಜ್ವಲ್ ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ಕಂಬಿ ಎಣಿಸುವಂತಾಗಿದೆ. ಇದೀಗ ಸುಪ್ರೀಂ ಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸುವ ಮೂಲಕ ಬಿಗ್ ಶಾಕ್ ನೀಡಿದೆ.












Click it and Unblock the Notifications