Get Updates
Get notified of breaking news, exclusive insights, and must-see stories!

Fali S Nariman: ಸುಪ್ರೀಂ ಕೋರ್ಟ್ ಹಿರಿಯ ನ್ಯಾಯವಾದಿ ಫಾಲಿ ಎಸ್ ನಾರಿಮನ್ ನಿಧನ: ಗಣ್ಯರ ಸಂತಾಪ

ಬೆಂಗಳೂರು, ಫೆಬ್ರವರಿ 21: ಸುಪ್ರೀಂ ಕೋರ್ಟ್ ನ ಹಿರಿಯ ನ್ಯಾಯವಾದಿ ಹಾಗೂ ಕರ್ನಾಟಕದ ನೀರಾವರಿ ಯೋಜನೆ ಕುರಿತು ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯದ ಪರ ವಾದ ಮಾಡಿ ರಾಜ್ಯಕ್ಕೆ ನ್ಯಾಯ ಕೊಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ 'ಫಾಲಿ ಎಸ್. ನಾರಿಮನ್' (Fali Sam Nariman) ಅವರು ಬುಧವಾರ (ಫೆಬ್ರವರಿ 21) ನಿಧನರಾದರು.

ಸುಮಾರು ಎಪ್ಪತ್ತು ವರ್ಷಗಳ ಕಾಲ ನ್ಯಾಯವಾದಿಯಾಗಿ ಸೇವೆ ಸಲ್ಲಿಸಿರುವ ಅವರು ದೇಶದ ಪ್ರಮುಖ ವಕೀಲರಲ್ಲಿ ಒಬ್ಬರಾಗಿದ್ದರು. ಪ್ರಸಿದ್ಧ ನ್ಯಾಯಶಾಸ್ತ್ರಜ್ಞರು ಆಗಿದ್ದ ನಾರಿಮನ್ ಅವರು ಭಾರತೀಯ ಕಾನೂನು ಇತಿಹಾಸದಲ್ಲಿ ವಿಶಿಷ್ಟ ವ್ಯಕ್ತಿಯಾಗಿ ನಿಂತವರು. ಅವರು ತಮ್ಮ 95ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದರು. ಅವರಿಗೆ 1991 ರಲ್ಲಿ ಪದ್ಮಭೂಷಣ ಮತ್ತು 2007 ರಲ್ಲಿ ಪದ್ಮವಿಭೂಷಣ ಪ್ರಶಸ್ತಿಗಳನ್ನು ಅವರಿಗೆ ನೀಡಿ ಗೌರವಿಸಲಾಗಿದೆ.

Supreme Court Senior Advocate Fali Sam Nariman Passes Away at 95 Years

ಮೃತ ನಿಧನಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಸೇರಿದಂತೆ ರಾಜಕೀಯ ಗಣ್ಯರು, ಮತ್ತಿರರು ದುಃಖ ವ್ಯಕ್ತಪಡಿಸಿದ್ದಾರೆ. ಸಂತಾಪ ಸೂಚಿಸಿದ್ದಾರೆ.

1929 ರಲ್ಲಿ ಜನಿಸಿದ ಫಾಲಿ ಎಸ್. ನಾರಿಮನ್ ಅವರು ಸಾಂವಿಧಾನಿಕ ವಕೀಲರಾಗಿ ಮತ್ತು ಭಾರತದ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರಾಗಿ ವೃತ್ತಿ ನಿರ್ವಹಿಸಿದರು. ಕಾನೂನು ವೃತ್ತಿಯಲ್ಲಿ ತಮ್ಮ ರೀತಿಯಲ್ಲಿ ಛಾಪು ಮೂಡಿಸಿದರು. ಕಾನೂನು ಪದವಿ ಪಡೆದ ನಂತರ ಕಾನೂನು ಕ್ಷೇತ್ರದಲ್ಲಿ ಅವರ ಪ್ರಯಾಣ ಪ್ರಾರಂಭವಾಯಿತು. ವಿಶೇಷವಾಗಿ ಸಾಂವಿಧಾನಿಕ ಕಾನೂನು ಮತ್ತು ಅಂತರರಾಷ್ಟ್ರೀಯ ಅವರ ಪರಿಣತಿಗಾಗಿ ಸಾಕಷ್ಟು ಗೌರವಗಳು ಅವರನ್ನು ಹುಡುಕಿ ಬಂದವು.

ಮೃತರು ಭಾರತದ ಸುಪ್ರೀಂ ಕೋರ್ಟ್‌ನಿಂದ 1971 ರಲ್ಲಿ ಹಿರಿಯ ವಕೀಲರಾಗಿ ನೇಮಕಗೊಂಡರು. ಇಲ್ಲಿಂದ ಅವರ ವೃತ್ತಿಜೀವನವು ಗಮನಾರ್ಹ ಪ್ರಗತಿಯತ್ತ ವಾಲಿತು. ಬಿಫೋರ್ ಮೆಮೊರಿ ಫೇಡ್ಸ್ ಎಂಬುದು ಫಾಲಿ ಎಸ್ ನಾರಿಮನ್ ಅವರ ಆತ್ಮಚರಿತ್ರೆ ಆಗಿದೆ.

Supreme Court Senior Advocate Fali Sam Nariman Passes Away at 95 Years

ಫಾಲಿ ಎಸ್ ನಾರಿಮನ್ ಅವರ ಪುತ್ರ ರೋಹಿಂಟನ್ ನಾರಿಮನ್ ಅವರು ಭಾರತದ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿಯೂ ಸೇವೆ ಸಲ್ಲಿಸಿದವರು. ಅವರು 1972-1975ರಲ್ಲಿ ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿದ್ದರು. ತುರ್ತು ಪರಿಸ್ಥಿತಿಯನ್ನು ಘೋಷಿಸಿದ ನಂತರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಹೊರ ನಡೆದರು.

ಸಮರ್ಥ ನ್ಯಾಯವಾದಿ ಕಳೆದುಕೊಂಡಿದ್ದೇವೆ: ಬೊಮ್ಮಾಯಿ

ಸುಪ್ರೀಂ ಕೋರ್ಟ್ ನ ಹಿರಿಯ ನ್ಯಾಯವಾದಿ ಫಾಲಿ ಎಸ್. ನಾರಿಮನ್ ಅವರ ನಿಧನದ ಸುದ್ದಿ ಕೇಳಿ ಮನಸಿಗೆ ನೋವಾಯಿತು.

ಸುಮಾರು 70 ವರ್ಷಗಳ ಕಾಲ ನ್ಯಾಯವಾದಿಯಾಗಿ ಸೇವೆ ಸಲ್ಲಿಸಿರುವ ಅವರು ದೇಶದ ಪ್ರಮುಖ ವಕೀಲರಲ್ಲಿ ಇವರು ಒಬ್ಬರು.

ಕರ್ನಾಟಕದ ನೀರಾವರಿ ಯೋಜನೆ ಕುರಿತು ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯದ ಪರ ವಾದ ಮಾಡಿ, ರಾಜ್ಯಕ್ಕೆ ನ್ಯಾಯ ಕೊಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇಂತಹ ಒಬ್ಬ ಸಮರ್ಥ ನ್ಯಾಯವಾದಿಯನ್ನು ಕಳೆದುಕೊಂಡಂತಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಬಸವರಾಜ ಬೊಮ್ಮಾಯಿ ಪ್ರಾರ್ಥಿಸಿದರು.

ವೃತ್ತಿ ಮೌಲ್ಯಗಳನ್ನು ಪ್ರತಿನಿಧಿಸುತ್ತಿದ್ದರು: ಪಾಟೀಲ್

ನಾರಿಮನ್ ಅವರು ಈ ದೇಶ ಕಂಡ ಅಪ್ರತಿಮ ನ್ಯಾಯವಾದಿಗಳಲ್ಲಿ ಒಬ್ಬರು. ವೃತ್ತಿಯಲ್ಲಿ ಮೌಲ್ಯಗಳನ್ನು ಪ್ರತಿನಿಧಿಸುತ್ತಿದ್ದ ಅವರು, ಉದಾರ ಮಾನವತಾವಾದಿ. ಇದೆಲ್ಲವು ನನಗೆ ಜಲ ಸಂಪನ್ಮೂಲ ಸಚಿವನಾಗಿದ್ದಾಗ ಅವರೊಂದಿಗೆ ಕಾವೇರಿ ನೀರಿನ ಹಕ್ಕಿನ ವಿಚಾರವಾಗಿ ಮಾತನಾಡುವಾಗ ಅನುಭವಕ್ಕೆ ಬಂದಿದೆ ಎಂದು ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಸ್ಮರಿಸಿದರು.

ಕಾವೇರಿ ಜಲ ವಿವಾದ ಭುಗಿಲೆದ್ದಾಗ ನಾರಿಮನ್ ಅವರು ಕರ್ನಾಟಕದ ಹಕ್ಕನ್ನು ಸಮರ್ಥವಾಗಿ ಮಂಡಿಸಿದರು. ಅವರ ವಾದದಿಂದಾಗಿ ರಾಜ್ಯಕ್ಕೆ ಹೆಚ್ಚು ನೀರು ಸಿಕ್ಕಿತು. ನಮ್ಮ ಅಹವಾಲುಗಳನ್ನು ನಾರಿಮನ್ ಅವರು ಸದಾ ಸಹಾನುಭೂತಿಯಿಂದ ಆಲಿಸುತ್ತಿದ್ದರು ಎಂದು ಹೇಳಿದರು.

ನಾರಿಮನ್ ಅವರೊಂದಿಗೆ ನನಗೆ ವೈಯಕ್ತಿಕವಾಗಿ ಗಾಢ ಸಂಬಂಧವಿತ್ತು. ಎಷ್ಟೋ ಸಂದರ್ಭಗಳಲ್ಲಿ ಅವರು ನಮ್ಮನ್ನೆಲ್ಲ ಉದ್ದೇಶಿಸಿ, ಸಚಿವರಾದವರು ಯಾವುದೇ ವಿಚಾರದ ಬಗ್ಗೆ ಸೂಕ್ತ ತಿಳಿವಳಿಕೆ ಹೊಂದಿರಬೇಕು ಎಂದು ಹೇಳುತ್ತಿದ್ದರು. ಅವರ ಇಂತಹ ಮಾತುಗಳು ನಮ್ಮ ಆತ್ಮಸಾಕ್ಷಿಯನ್ನು ಜಾಗೃತಗೊಳಿಸುತ್ತಿದ್ದವು ಎಂದು ಅವರು ನೆನಪಿಸಿಕೊಂಡಿದ್ದಾರೆ.

ಭಗವಂತನು ನಾರಿಮನ್ ಅವರ ಆತ್ಮಕ್ಕೆ ಶಾಂತಿ ನೀಡಲ. ಅವರ ಕುಟುಂಬದ ಸದಸ್ಯರಿಗೆ ಈ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಕರುಣಿಸಲಿ ಎಂದು ಸಚಿವರು ಪ್ರಾರ್ಥಿಸಿದ್ದಾರೆ. ಇವರು ಸೇರಿದಂತೆ ಅನೇಕ ಗಣ್ಯರು ನಾರಿಮನ್ ಅವರ ಜತೆಗಿನ ಸಂಬಂಧ ಸ್ಮರಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+