Siddaramaiah: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸುಪ್ರೀಂ ಕೋರ್ಟ್‌ನಿಂದ ಬಿಗ್‌ ರಿಲೀಫ್‌

ಬೆಂಗಳೂರು, ಫೆಬ್ರವರಿ 19: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ಬಿಗ್‌ ರಿಲೀಫ್‌ ನೀಡಿದೆ. ಅವರ ವಿರುದ್ಧ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್‌ ಮಧ್ಯಂತರ ತಡೆ ನೀಡಿದೆ. ಇದರಿಂದ ಹೈಕೋರ್ಟ್‌ಗೆ ವಿಚಾರಣೆಗೆ ಖುದ್ದು ಹಾಜರಾಗುವುದರಿಂದ ಸಿಎಂ ಸಿದ್ದರಾಮಯ್ಯ ವಿನಾಯಿತಿ ಪಡೆದಿದ್ದಾರೆ.

ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ಮುಂದಿನ ಆದೇಶದವರೆಗೆ ತಡೆ ನೀಡಿದೆ. ಈ ಬಗ್ಗೆ ಆರು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸಿಎಂ ಸಿದ್ದರಾಮಯ್ಯಗೆ ಸುಪ್ರೀಂ ಕೋರ್ಟ್ ತಿಳಿಸಿದ್ದು, ಸದ್ಯ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ರಿಲೀಫ್‌ ಸಿಕ್ಕಂತಾಗಿದೆ.

Supreme Court Stay For Karnataka High Court Order Aainst CM Siddaramaiah

2022ರ ಏಪ್ರಿಲ್‌ನಲ್ಲಿ ನಡೆದ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ರಾಜ್ಯ ಸಚಿವ ಕೆ. ಎಸ್. ಈಶ್ವರಪ್ಪ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರ ಕಾಂಗ್ರೆಸ್ ನಾಯಕರನ್ನು ಕರ್ನಾಟಕ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿತ್ತು.

ಮಾರ್ಚ್ 6 ರಂದು ಸಿಎಂ ಸಿದ್ದರಾಮಯ್ಯ, ಮಾರ್ಚ್ 7 ರಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಮಾರ್ಚ್ 11 ರಂದು ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ಆರ್.ಎಸ್ ಸುರ್ಜೇವಾಲಾ ಮತ್ತು ಮಾರ್ಚ್ 15 ರಂದು ಎಂ.ಬಿ ಪಾಟೀಲ್ ಅವರು ನ್ಯಾಯಾಲಯಕ್ಕೆ ಹಾಜರಗಬೇಕು ಎಂದು ಸಮನ್ಸ್ ನೀಡಿತ್ತು. ಅಲ್ಲದೇ 10 ಸಾವಿರ ರೂಪಾಯಿ ದಂಡ ವಿಧಿಸಿತ್ತು. ಈ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿದ್ದು, ಸದ್ಯ ಸುಪ್ರೀಂ ಕೋರ್ಟ್‌ ಆದೇಶದಿಂದ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+