ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅನರ್ಹ ಶಾಸಕರಿಗೆ ತುಸು ನೆಮ್ಮದಿ ನೀಡಿದ ಸುಪ್ರೀಂಕೋರ್ಟ್

|
Google Oneindia Kannada News

Recommended Video

ಅನರ್ಹ ಶಾಸಕರು ಫುಲ್ ಖುಷಿ..? | Rebel MLA's | Oneindia Kannada

ಬೆಂಗಳೂರು, ಸೆಪ್ಟೆಂಬರ್ 06 : ಕರ್ನಾಟಕದ ಕಾಂಗ್ರೆಸ್‌ ಮತ್ತು ಜೆಡಿಎಸ್‌ನ 17 ಅನರ್ಹ ಶಾಸಕರಿಗೆ ಕೊಂಚ ನೆಮ್ಮದಿ ಸಿಕ್ಕಿದೆ. ಸುಪ್ರೀಂಕೋರ್ಟ್ ಶಾಸಕರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 11ರಿಂದ ನಡೆಸಲಿದೆ.

ಶಾಸಕರು ತುರ್ತಾಗಿ ಅರ್ಜಿಯ ವಿಚಾರಣೆ ನಡೆಸಬೇಕು ಎಂದು ಮಾಡಿದ್ದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿತ್ತು. ಸದ್ಯ ನ್ಯಾಯಮೂರ್ತಿಗಳಾದ ಎನ್. ವಿ. ರಮಣ, ಅಜಯ್ ರಸ್ತೋಗಿ ಪೀಠ ಶಾಸಕರ ಅರ್ಜಿಯನ್ನು ವಿಚಾರಣೆ ನಡೆಸಲು ಒಪ್ಪಿಗೆ ನೀಡಿದೆ.

ಅನರ್ಹ ಶಾಸಕರಿಗೆ ಕೊಂಚ ರಿಲೀಫ್ ನೀಡಿದ ಸುಪ್ರೀಂಕೋರ್ಟ್ಅನರ್ಹ ಶಾಸಕರಿಗೆ ಕೊಂಚ ರಿಲೀಫ್ ನೀಡಿದ ಸುಪ್ರೀಂಕೋರ್ಟ್

 Supreme Court To Hear Disqualified MLAs Petitions On September 11

ಕರ್ನಾಟಕ ವಿಧಾನಸಭೆ ಸ್ಪೀಕರ್ ರಮೇಶ್ ಕುಮಾರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕಾಂಗ್ರೆಸ್‌ನ 14 ಮತ್ತು ಜೆಡಿಎಸ್‌ನ 3 ಶಾಸಕರನ್ನು ಅನರ್ಹಗೊಳಿಸಿದ್ದರು. ಶಾಸಕರು ಈ ತೀರ್ಪನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನೆ ಮಾಡಿದ್ದರು.

ಸುಪ್ರೀಂಕೋರ್ಟ್‌ನಲ್ಲಿ ಮತ್ತೆ ಹಿನ್ನಡೆ: ಅನರ್ಹ ಶಾಸಕರು ಕಂಗಾಲುಸುಪ್ರೀಂಕೋರ್ಟ್‌ನಲ್ಲಿ ಮತ್ತೆ ಹಿನ್ನಡೆ: ಅನರ್ಹ ಶಾಸಕರು ಕಂಗಾಲು

ಯಾವ-ಯಾವ ಶಾಸಕರು : ಶ್ರೀಮಂತ ಪಾಟೀಲ್ (ಕಾಗವಾಡ), ರಮೇಶ್ ಜಾರಕಿಹೊಳಿ (ಗೋಕಾಕ್), ಕೆ.ಸುಧಾಕರ್ (ಚಿಕ್ಕಬಳ್ಳಾಪುರ), ಪ್ರತಾಪ್ ಗೌಡ ಪಾಟೀಲ್ (ಮಸ್ಕಿ), ಎಚ್. ವಿಶ್ವನಾಥ್ (ಹುಣಸೂರು), ಆರ್. ಶಂಕರ್ (ರಾಣೆಬೆನ್ನೂರು), ಆನಂದ್ ಸಿಂಗ್ (ವಿಜಯನಗರ), ಎಂಟಿಬಿ ನಾಗರಾಜ್ (ಹೊಸಕೋಟೆ), ರೋಷನ್ ಬೇಗ್ (ಶಿವಾಜಿನಗರ), ಮುನಿರತ್ನ (ಆರ್. ಆರ್. ನಗರ), ಎಸ್‌. ಟಿ. ಸೋಮಶೇಖರ್ (ಯಶವಂತಪುರ), ಬೈರತಿ ಬಸವರಾಜ (ಕೆ. ಆರ್. ಪುರಂ), ಕೆ. ಗೋಪಾಲಯ್ಯ (ಮಹಾಲಕ್ಷ್ಮೀ ಲೇಔಟ್), ಕೆ. ನಾರಾಯಣ ಗೌಡ (ಕೆ. ಆರ್. ಪೇಟೆ), ಬಿ. ಸಿ. ಪಾಟೀಲ್ (ಹಿರೇಕೆರೂರು) ಅನರ್ಹಗೊಂಡ ಶಾಸಕರು.

ಅನರ್ಹ ಶಾಸಕರಿಗೆ ಸುಪ್ರೀಂಕೋರ್ಟಿನಲ್ಲಾದ ಎರಡು ಆಘಾತ ಏನು?ಅನರ್ಹ ಶಾಸಕರಿಗೆ ಸುಪ್ರೀಂಕೋರ್ಟಿನಲ್ಲಾದ ಎರಡು ಆಘಾತ ಏನು?

ಅನರ್ಹ ಶಾಸಕರ ಅರ್ಜಿಯ ವಿಚಾರಣೆ ನಡೆಸಿ ನ್ಯಾಯಾಲಯ ಸ್ಪೀಕರ್ ಆದೇಶವನ್ನು ರದ್ದುಗೊಳಿಸಿದರೆ ಎಲ್ಲರೂ ಶಾಸಕರಾಗಿ ಮುಂದುವರೆಯಲಿದ್ದಾರೆ. ಆಗ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟ ಸೇರಿ ಸಚಿವರಾಗಬಹುದಾಗಿದೆ.

English summary
Supreme Court of India will hear the petition of Karnataka's 17 disqualified MLA's on September 11, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X