BREAKING: ಮುಡಾ ಕೇಸ್‌ನಲ್ಲಿ ಸಿದ್ದರಾಮಯ್ಯಗೆ ಬಿಗ್ ರಿಲೀಫ್; ಸುಪ್ರೀಂ ಕೋರ್ಟ್ ತೀವ್ರ ತರಾಟೆ
ನವದೆಹಲಿ, ಜುಲೈ 21: 40 ವರ್ಷಗಳ ಸುದೀರ್ಘ ರಾಜಕೀಯ ಜೀವನದಲ್ಲಿ ಯಾವುದು ಕಪ್ಪು ಚುಕ್ಕೆ ಇಲ್ಲದಂತೆ ರಾಜಕೀಯ ಮಾಡಿದ್ದೇನೆ ಎಂದು ಹೇಳಿಕೊಳ್ಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೊರಳಿಗೆ ಮುಡಾ ಹಗರಣವೇ ದೊಡ್ಡ ಕಂಟಕವಾಗಿತ್ತು. ಅಲ್ಲದೇ ರಾಜ್ಯ ರಾಜಕೀಯದಲ್ಲಿ ಮುಡಾ ಹಗರಣ ಸಾಕಷ್ಟು ಸದ್ದು ಮಾಡುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಿಪಕ್ಷಗಳು ಭಾರೀ ಆಕ್ರೋಶ ವ್ಯಕ್ತಪಡಿಸಿದ್ರು. ಅಲ್ಲದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಪ್ರತಿಭಟನೆ ಮಾಡಿದ್ದರು.
ಇನ್ನೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದಲ್ಲಿನ ಅಕ್ರಮ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಡಿ ಅರ್ಜಿ ಸಲ್ಲಿಸಿತ್ತು. ಇಂದು ಸುಪ್ರೀಂಕೋರ್ಟ್ ನಲ್ಲಿ ಇಡಿ ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಾಧೀಶರು ಅರ್ಜಿಯನ್ನು ವಜಾಗೊಳಿಸಿದೆ.. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಪ್ರಕರಣದಿಂದ ಬಿಗ್ ರಿಲೀಫ್ ಸಿಕ್ಕಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸುಪ್ರೀಂ ಕೋರ್ಟ್‌ನಿಂದ ಬಹುದೊಡ್ಡ ರಿಲೀಫ್ ಸಿಕ್ಕಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಮತ್ತು ಸಿದ್ದರಾಮಯ್ಯ ಅವರ ಆಪ್ತ ಹಾಗೂ ಸಚಿವ ಬೈರತಿ ಸುರೇಶ್ ಅವರ ವಿರುದ್ಧದ ಸಮನ್ಸ್ ರದ್ದುಗೊಳಿಸಿದ್ದ ಕರ್ನಾಟಕ ಹೈಕೋರ್ಟ್‌ನ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಜಾರಿ ನಿರ್ದೇಶನಾಲಯ (ಇ.ಡಿ)ಗೆ ಭಾರೀ ಹಿನ್ನಡೆಯಾಗಿದೆ.
ಹೈಕೋರ್ಟ್ ಆದೇಶ ಪ್ರಶ್ನಿಸಿ ಇಡೀ ಅರ್ಜಿ ಸಲ್ಲಿಸಿತ್ತು. ಇದೀಗ ಇಡಿ ಸಲ್ಲಿಸಿದ ಅರ್ಜಿ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಮುಡಾದಿಂದ ಸಿದ್ದರಾಮಯ್ಯ ಪತ್ನಿಗೆ 14 ನಿವೇಶನ ಹಂಚಿಕೆ ಪ್ರಕರಣದಲ್ಲಿ ಇದೀಗ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ರಿಲೀಫ್ ಸಿಕ್ಕಿದೆ. ಮೇಲ್ಮನವಿಯನ್ನು ಪರಿಗಣಿಸಲು ನಿರಾಕರಿಸಿರುವ ಸುಪ್ರೀಂ ಕೋರ್ಟ್, ಜಾರಿ ನಿರ್ದೇಶನಾಲಯವನ್ನು ತರಾಟೆಗೆ ತೆಗೆದುಕೊಂಡಿದೆ. ಇ.ಡಿಯನ್ನು ರಾಜಕೀಯ ಹೋರಾಟಗಳಿಗೆ ಏಕೆ ಬಳಸಲಾಗುತ್ತಿದೆ ಎಂದು ಕಿಡಿಕಾರಿದೆ.
ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳುವ ಕುರಿತು ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮುರ್ತಿ ಬಿಆರ್ ಗವಾಯಿ ಅವರಿದ್ದ ಪೀಠ, ಇಡಿಯನ್ನು ತರಾಟೆಗೆ ತೆಗೆದುಕೊಂಡಿದ್ದಲ್ಲದೆ, ಅರ್ಜಿಯನ್ನು ವಜಾಗೊಳಿಸಿದೆ. ದಯವಿಟ್ಟು ನಾವು ಬಾಯಿ ತೆರೆಯುವಂತೆ ಮಾಡಬೇಡಿ. ಹಾಗೆ ಮಾಡಿದರೆ, ನಾವು ಇಡಿ ಬಗ್ಗೆ ಕೆಲವು ಕಟು ಟೀಕೆಗಳನ್ನು ಮಾಡಬೇಕಾಗಬಹುದು. ದುರದೃಷ್ಟವಶಾತ್, ನನಗೆ ಮಹಾರಾಷ್ಟ್ರದಲ್ಲಿ ಸ್ವಲ್ಪ ಅನುಭವವಿದೆ. ನೀವು ಈಗ ದೇಶಾದ್ಯಂತ ಈ ರೀತಿಯ ವರ್ತನೆ ಮುಂದುವರಿಸಬಾರದು. ರಾಜಕೀಯ ಪೈಪೋಟಿಯನ್ನು ಏನಿದ್ದರೂ ಮತದಾರರ ಎದುರು ಮಾಡಿಕೊಳ್ಳಲಿ. ಇಡಿಯನ್ನು ಏಕೆ ಎಂದು ಬಳಸಲಾಗುತ್ತಿದೆ ಎಂದು ಅಡಿಷನಲ್ ಸಾಲಿಸಿಟರ್ ಜನರಲ್ ಎಸ್ವಿ ರಾಜಿ ಅವರನ್ನುದ್ದೇಶಿಸಿ ಸಿಜೆಐ ಬಿಆರ್ ಗವಾಯಿ ಪ್ರಶ್ನಿಸಿದರು.












Click it and Unblock the Notifications