Suraj Revanna: ಪ್ರಜ್ವಲ್‌ ಬಳಿಕ ಸೂರಜ್‌ ರೇವಣ್ಣಗೂ ಬಿಗ್‌ ಶಾಕ್‌, ಮತ್ತೆ ಜೈಲಿಗೆ?

ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಅವರ ಮೊಮ್ಮಗ ಹಾಗೂ ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಈಗಾಗಲೇ ಗಂಭೀರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಜೈಲಿನಲ್ಲಿದ್ದಾರೆ. ಇದೀಗ ರೇವಣ್ಣ ಅವರ ಮತ್ತೊಬ್ಬ ಪುತ್ರ, ವಿಧಾನ ಪರಿಷತ್ ಸದಸ್ಯ ಸೂರಜ್​​ ರೇವಣ್ಣಗೂ ದೊಡ್ಡ ಸಂಕಷ್ಟ ಎದುರಾಗಿದೆ. ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್‌ಗೆ ಕೋರ್ಟ್‌ ಬಿಗ್‌ಶಾಕ್‌ ನೀಡಿದೆ.

ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಜೀವ ಬೆದರಿಕೆ ಹಾಕಿರುವ ಕೇಸ್‌ನಲ್ಲಿ ಆರೋಪಿಯಾಗಿರುವ ಸೂರಜ್​​ ರೇವಣ್ಣ ವಿರುದ್ಧದ ಬಿ ರಿಪೋರ್ಟ್​​ ಅನ್ನು ನ್ಯಾಯಾಲಯ ತಿರಸ್ಕರಿಸಿದೆ. ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧ ಎಸ್ಐಟಿ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು​​ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ತಿರಸ್ಕರಿಸಿ ಆದೇಶ ಹೊರಡಿಸಿದೆ. ಇದರ ತನಿಖೆ ಮುಂದುವರಿಸಿ, ಇದೇ ಡಿಸೆಂಬರ್ 29ರೊಳಗೆ ತನಿಖಾ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.

Suraj Revanna Faces Major Setback Court Rejects B-Report In Assault Case

ಈ ಹಿಂದೆ ಜೆಡಿಎಸ್‌ ಕಾರ್ಯಕರ್ತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕೇಸ್‌ನಲ್ಲಿ ಸೂರಜ್‌ ರೇವಣ್ಣ ಅವರನ್ನು ಈ ಹಿಂದೆ ಬಂಧಿಸಲಾಗಿತ್ತು. ಕೆಲ ದಿನಗಳ ಕಾಲ ಸೂರಜ್‌ ಕೂಡ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಬಳಿಕ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲ ಷರತ್ತುಬದ್ಧ ಜಾಮೀನು ನೀಡಿತ್ತು. ಆಗ ಸೂರಜ್​ ಬರೋಬ್ಬರಿ ಒಂದು ತಿಂಗಳ ಬಳಿಕ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್‌ ಆಗಿದ್ದರು. ಇದೀಗ ಅವರಿಗೆ ಕೋರ್ಟ್‌ನಲ್ಲಿ ಹಿನ್ನಡೆಯಾಗಿದ್ದು, ಢವಢವ ಶುರುವಾಗಿದೆ.

ಏನಿದು ಪ್ರಕರಣ?

2024ರಲ್ಲಿ ಸಂತ್ರಸ್ತರೊಬ್ಬರು ಸೂರಜ್‌ ರೇವಣ್ಣ ವಿರುದ್ಧ ದೂರು ನೀಡಿದ್ದರು. ಸೂರಜ್ ರೇವಣ್ಣ ನನ್ನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದರು. ಈ ಸಂಬಂಧ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್‌ ದಾಖಲಾಗಿತ್ತು. ಆರಂಭದಲ್ಲಿ ಹಾಸನದ ಜಿಲ್ಲಾ ಪೊಲೀಸ್ ಠಾಣೆಗೆ ಬಂದಿದ್ದ ದೂರನ್ನು ಹೊಳೆನರಸೀಪುರ ಗ್ರಾಮಾಂತರ ಠಾಣೆ ಪೊಲೀಸರಿಗೆ ವರ್ಗಾಯಿಸಲಾಗಿತ್ತು. ಈ ಆರೋಪದ ಮೇರೆಗೆ ಸೂರಜ್ ರೇವಣ್ಣ ಅವರನ್ನು ಅರೆಸ್ಟ್‌ ಕೂಡ ಮಾಡಲಾಗಿತ್ತು.

ಆದರೆ ಈ ರೀತಿ ಸುಳ್ಳು ಆರೋಪ ಮಾಡಿ ಸಂತ್ರಸ್ತ ಹಣಕ್ಕಾಗಿ ಪೀಡಿಸಿದ್ದಾನೆ ಎಂದು ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ಪ್ರತಿ ದೂರು ನೀಡಿದ್ದರು. ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ದೂರು ನೀಡುವುದಾಗಿ ಬೆದರಿಕೆ ಹಾಕಿದ್ದ. ಅಲ್ಲದೆ ಐದು ಕೋಟಿ ಹಣ ನೀಡದಿದ್ದರೆ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸುವುದಾಗಿ ಬ್ಲ್ಯಾಕ್​​ಮೇಲ್ ಮಾಡಿದ್ದಾಗಿ ಪ್ರತಿದೂರಿನಲ್ಲಿ ತಿಳಿಸಲಾಗಿತ್ತು. ಬಳಿಕ ರಾಜ್ಯ ಸರ್ಕಾರ ಈ ಪ್ರಕರಣದ ತನಿಖೆಗೆ ಆದೇಶಿಸಿತ್ತು. ಸದ್ಯ ಈ ಕೇಸ್‌ನಿಂದ ತುಸು ರಿಲೀಫ್‌ ಆಗಿದ್ದ ಸೂರಜ್‌ ರೇವಣ್ಣಗೆ ಮತ್ತೆ ಸಂಕಷ್ಟ ಎದುರಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+