ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನಾಂಕ ಘೋಷಣೆ: ಇಲ್ಲಿದೆ ಮಾಹಿತಿ
ನವದೆಹಲಿ, ಮಾರ್ಚ್ 16: ದೇಶದಲ್ಲಿ ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಕಾವು ಜೋರಾಗಿದ್ದು, ಏಳು ಹಂತದಲ್ಲಿ ಲೋಕಸಭಾ ಚುನಾವಣೆ ಘೋಚಣೆಯಾಗಿದೆ. ಕರ್ನಾಟಕದ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆಯು ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗದ ಅಧ್ಯಕ್ಷ ರಾಜೀವ್ ಕುಮಾರ್ ಹೇಳಿದ್ದಾರೆ.
ಕೇಂದ್ರ ಚುನಾವಣಾ ಆಯೋಗ ಶನಿವಾರ ಲೋಕಸಭಾ ಚುನಾವಣೆಯ ದಿನಾಂಕದೊಂದಿಗೆ ಕರ್ನಾಟಕದ ಸುರಪುರ ವಿಧಾನಸಭಾ ಕ್ಷೇತ್ರದ ಚುನಾವಣೆಯ ದಿನಾಂಕವನ್ನು ಪ್ರಕಟಿಸಿದೆ. ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮೇ 7ರಂದು ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪನಾಯಕ ಅವರು ನಿಧನರಾದ್ದರಿಂದ ಸುರಪುರ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದೆ. ಕರ್ನಾಟಕದಲ್ಲಿ ಏಪ್ರಿಲ್ 26 ಮೊದಲ ಹಂತದ ಮತದಾನ ಹಾಗೂ ಮೇ 7ರಂದು ಎರಡನೇ ಹಂತದ ಮತದಾನ ಲೋಕಸಭೆ ಚುನಾವಣೆ ನಡೆಯಲಿದ್ದು , ಮೇ 7 ರಿಂದ ಕರ್ನಾಟಕದ ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆಯಲಿದೆ.
ಮೊದಲ ರಾಜ್ಯದಲ್ಲಿ ಹಂತದ ಚುನಾವಣಾ ಪ್ರಕ್ರಿಯೆಗೆ ಅಧಿಸೂಚನೆ ಮಾರ್ಚ್ 28 ರಂದು ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 04 ಕೊನೆಯ ದಿನವಾಗಿರುತ್ತದೆ. ಏಪ್ರಿಲ್ 05 ರಂದು ನಾಮಪತ್ರ ಪರಿಶೀಲನೆ ನಡೆದರೆ, ನಾಮಪತ್ರ ವಾಪಸ್ ತೆಗೆದುಕೊಳ್ಳಲು ಏಪ್ರಿಲ್ 08 ಕೊನೆಯ ದಿನವಾಗಿರುತ್ತದೆ. ಮೊದಲ ಹಂತದ ಮತದಾನ ಏಪ್ರಿಲ್ 26 ರಂದು ನಡೆಯಲಿದೆ.
ಮೊದಲ ಹಂತದಲ್ಲಿ ಮತದಾನ ಉಡುಪಿ - ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ , ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯಲ್ಲಿ ಚುನಾವಣೆ ನಡೆಯಲಿದೆ.
ಇನ್ನು, ಕರ್ನಾಟಕದಲ್ಲಿ ಎರಡನೇ ಹಂತದ ಚುನಾವಣಾ ಪ್ರಕ್ರಿಯೆಗೆ ಅಧಿಸೂಚನೆ ಏಪ್ರಿಲ್ 12 ರಂದು ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 19 ಕೊನೆಯ ದಿನವಾಗಿರುತ್ತದೆ. ಏಪ್ರಿಲ್ 20 ರಂದು ನಾಮಪತ್ರ ಪರಿಶೀಲನೆ ನಡೆದರೆ, ನಾಮಪತ್ರ ವಾಪಸ್ ತೆಗೆದುಕೊಳ್ಳಲು ಏಪ್ರಿಲ್ 22 ಕೊನೆಯ ದಿನವಾಗಿರುತ್ತದೆ. ಎರಡನೇ ಹಂತದ ಮತದಾನ ಮೇ 07 ರಂದು ನಡೆಯಲಿದೆ.
ಎರಡನೇ ಹಂತದ ಮತದಾನ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ , ಗುಲ್ಬರ್ಗಾ, ರಾಯಚೂರು , ಬೀದರ್, ಕೊಪ್ಪಳ, ಬಳ್ಳಾರಿ , ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗದಲ್ಲಿ ನಡೆಯಲಿದೆ.











Click it and Unblock the Notifications