• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

2021ರ ಮಾರ್ಚ್‌ ತಿಂಗಳಿನಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ವಾರ್ಷಿಕ ಪರೀಕ್ಷೆ?

|

ಬೆಂಗಳೂರು, ಡಿ. 22: ಕೊರೊನಾ ವೈರಸ್ ಆತಂಕ ಸ್ವಲ್ಪ ಮಟ್ಟಿಗೆ ಕಳೆದು, ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಇದೇ ಸಂದರ್ಭದಲ್ಲಿ ಇಂಗ್ಲೆಂಡ್‌ನಲ್ಲಿ ರೂಪಾಂತರಿ ಕೊರೊನಾ ವೈರಸ್ ಪತ್ತೆಯಾಗುವ ಮೂಲಕ ಮತ್ತೊಮ್ಮೆ ಆತಂಕ ಸೃಷ್ಟಿಸಿದೆ. ಆದರೆ ಶಾಲೆ ಆರಂಭಿಸುವ ಪ್ರಕ್ರಿಯೆ ನಿಗದಿಯಂತೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.

2021ರ ಜನವರಿ 1 ರಿಂದ ಶಾಲೆ ಆರಂಭಿಸಲು ರಾಜ್ಯ ಶಿಕ್ಷಣ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಜೊತೆಗೆ ಮಹತ್ವಾಕಾಂಕ್ಷಿ ವಿದ್ಯಾಗಮ ಕಾರ್ಯಕ್ರಮವನ್ನೂ ಮತ್ತಷ್ಟು ಮುಂಜಾಗ್ರತಾ ಕ್ರಮಗಳೊಂದಿಗೆ ಜಾರಿ ಮಾಡಲಾಗುತ್ತಿದೆ. ಈ ಶೈಕ್ಷಣಿಕ ವರ್ಷವನ್ನು ಶೂನ್ಯ ಕಲಿಕಾ ವರ್ಷವೆಂದು ಘೋಷಣೆ ಮಾಡಲು ವಿಪಕ್ಷ ನಾಯಕರೂ ಸೇರಿದಂತೆ ಹಲವರು ಸೂಚಿಸಿದ್ದರು.

ಜನವರಿ, ಫೆಬ್ರವರಿಯಲ್ಲಿ ಯಾವುದೇ ಬೋರ್ಡ್ ಪರೀಕ್ಷೆಗಳಿಲ್ಲ: ರಮೇಶ್ ಪೋಖ್ರಿಯಾಲ್

ಆದರೆ ಅದಕ್ಕೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಒಪ್ಪಿರಲಿಲ್ಲ. ಜೊತೆಗೆ ಕಳೆದ ಶೈಕ್ಷಣಿಕ ವರ್ಷದಲ್ಲಿ ಬಹುದೊಡ್ಡ ರಿಸ್ಕ್‌ ತೆಗೆದುಕೊಂಡು ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಇಂಗ್ಲೀಷ್ ಪರೀಕ್ಷೆ ನಡೆಸಿದ್ದರು. ಇದೀಗ 2021ರ ಮಾರ್ಚ್‌ನಲ್ಲಿ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ಕುರಿತು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮಹತ್ವದ ಘೋಷಣೆ ಮಾಡಿದ್ದಾರೆ.

ಎಸ್ಎಸ್ಎಲ್‌ಸಿ, ಪಿಯುಸಿ ಪರೀಕ್ಷೆ

ಎಸ್ಎಸ್ಎಲ್‌ಸಿ, ಪಿಯುಸಿ ಪರೀಕ್ಷೆ

ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಎಲ್ಲ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳುತ್ತಿದ್ದು ಶಾಲಾರಂಭ ಪ್ರಕ್ರಿಯೆ ಸುರಕ್ಷಿತವಾಗಿ, ಸುಲಲಿತವಾಗಿ ನಿರ್ವಹಣೆಯಾಗಲಿದೆ. ಹಾಗೂ ಲಭ್ಯವಾಗುವ ಸೀಮಿತ ಅವಧಿಯ ಹಿನ್ನೆಲೆಯಲ್ಲಿ, ಮಾರ್ಚ್ 2021 ರಲ್ಲಿ‌ ಎಸ್ಎಸ್ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳು ನಡೆಯುವುದಿಲ್ಲವೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಖಚಿತಪಡಿಸಿದ್ದಾರೆ.

ಕಲವೇ ದಿನಗಳಲ್ಲಿ ಸೂಕ್ತ ನಿರ್ಧಾರ

ಕಲವೇ ದಿನಗಳಲ್ಲಿ ಸೂಕ್ತ ನಿರ್ಧಾರ

ಬೆಂಗಳೂರಿನಲ್ಲಿ ಖಾಸಗಿ ಸುದ್ದಿ ವಾಹಿನಿಯ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಎಸ್. ಸುರೇಶ್ ಕುಮಾರ್, ಮಕ್ಕಳಿಗೆ ಹೊರೆಯಾಗದ ರೀತಿ ಪಠ್ಯಕ್ರಮವನ್ನು ಅಂತಿಮ ಗೊಳಿಸಲಾಗುತ್ತದೆ. ಕನಿಷ್ಟ ಕಲಿಕೆಗೆ ಒತ್ತು ನೀಡಲಾಗುತ್ತದೆ. ಅಲ್ಲದೇ, ವಿಶೇಷವಾಗಿ ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವ ಹಿರಿಯ ತರಗತಿಗಳ ವಿದ್ಯಾರ್ಥಿಗಳ ಕಲಿಕೆಯ ಅವಶ್ಯಕತೆಗಳನ್ನು ಸಹ ಗಮನದಲ್ಲಿಟ್ಟುಕೊಂಡು ಕೆಲವೇ ದಿನಗಳಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ‌ ಎಂದು ಅವರು ಹೇಳಿದ್ದಾರೆ.

ವಿದ್ಯಾಗಮ ಅಳವಡಿಸಿಕೊಳ್ಳಿ

ವಿದ್ಯಾಗಮ ಅಳವಡಿಸಿಕೊಳ್ಳಿ

ವಿಶೇಷವಾಗಿ ಗ್ರಾಮೀಣ ಭಾಗಗಳ ಮಕ್ಕಳ ಹಿತದೃಷ್ಟಿಯಿಂದ ಆರಂಭಿಸಲಾದ ವಿದ್ಯಾಗಮ ಕಾರ್ಯಕ್ರಮವನ್ನು ಖಾಸಗಿ ಶಾಲೆಗಳು ಸಹ ಅಳವಡಿಸಿಕೊಳ್ಳಬೇಕೆಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಸಲಹೆ ನೀಡಿದ್ದಾರೆ. ಖಾಸಗಿ ಶಾಲೆಗಳ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಮುಕ್ತ ನಿಲುವನ್ನು ಹೊಂದಿದೆ. ಜೊತೆಗೆ ವಿದ್ಯಾಗಮ ಕಾರ್ಯಕ್ರಮವನ್ನು ಖಾಸಗಿ ಶಾಲೆಗಳೂ ಅಳವಡಿಸಿಕೊಳ್ಳಲಿ ಎಂದಿದ್ದಾರೆ.

 ಪರೀಕ್ಷಾ ಗೊಂದಲಕ್ಕೆ ತೆರೆ

ಪರೀಕ್ಷಾ ಗೊಂದಲಕ್ಕೆ ತೆರೆ

ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದ ವಿದ್ಯಾಗಮ ಕಾರ್ಯಕ್ರಮವನ್ನು ಸರ್ಕಾರಿ ಶಾಲೆಗಳಲ್ಲಿ ಸುರಕ್ಷತಾ ಕ್ರಮಗಳೊಂದಿಗೆ ಹೊಸ ರೂಪದಲ್ಲಿ ಆರಂಭಿಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಆದರೆ ವಿದ್ಯಾಗಮದ ಮೂಲಕ ತರಗತಿಗಳು ನಡೆದರೂ ವಾರ್ಷಿಕ ಪರೀಕ್ಷೆಗಳನ್ನು ಮಾರ್ಚ್‌ ತಿಂಗಳಿನಲ್ಲಿ ನಡೆಸುವುದಿಲ್ಲ. ಮಕ್ಕಳಿಗೆ ಸರಿಯಾದ ತರಗತಿಯ ಬಳಿಕವೇ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟವಾಗಿ ಹೇಳಿದ್ದಾರೆ. ಆ ಮೂಲಕ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳು ಹಾಗೂ ಅವರ ಪಾಲಕರ ಬಹುದೊಡ್ಡ ಗೊಂದಲವನ್ನು ಶಿಕ್ಷಣ ಸಚಿವರು ಪರಿಹರಿಸಿದ್ದಾರೆ.

   Bangalore: ರೂಪಾಂತರಗೊಂಡ ಕೊರೊನಾ ವೈರಸ್‌ ಬಗ್ಗೆ ರಾಜ್ಯದಲ್ಲಿ ಕಟ್ಟೆಚ್ಚರ- ಸಿಎಂ ಯಡಿಯೂರಪ್ಪ ಮಾಹಿತಿ | Oneindia Kannada

   English summary
   The Department of Education is making all preparations for the future of the children and ensuring that the preschool process is safe and sound. Minister of Education Suresh Kumar has confirmed that the SSLC and PUC exams will not take place in March 2021, due to limited availability. Know more.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X