ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೆಚ್ಚುತ್ತಿರುವ ಕೊರೊನಾ: ಶಾಲೆಗಳಿಗೆ ಮಹತ್ವದ ಸೂಚನೆ ಕೊಟ್ಟ ಶಿಕ್ಷಣ ಇಲಾಖೆ!

|
Google Oneindia Kannada News

ಬೆಂಗಳೂರು, ಫೆ. 19: ಇದೇ ಫೆಬ್ರುವರಿ 22ರಿಂದ 6 ರಿಂದ 8ನೇ ತರಗತಿಗಳು ಆರಂಭವಾಗುತ್ತಿವೆ. ಮಕ್ಕಳ ಸಂಖ್ಯೆ ಶಾಲೆಗಳಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಕೋವಿಡ್ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವ ಎಸ್. ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.

6 ರಿಂದ 8ನೇ ತರಗತಿಗಳ ಆರಂಭಕ್ಕೆ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಇಂದು ಸುತ್ತೋಲೆ ಹೊರಡಿಸಿದ್ದು, ಸುತ್ತೋಲೆಯಲ್ಲಿ ವಿವರಿಸಿರುವ ಅಂಶಗಳು ಹಾಗೂ ಆರೋಗ್ಯ ಇಲಾಖೆಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿ ಮತ್ತು ಕೇರಳ ರಾಜ್ಯದ ಗಡಿಭಾಗಕ್ಕೆ ಹೊಂದಿಕೊಂಡ ಶಾಲೆಗಳು ಸೇರಿದಂತೆ ರಾಜ್ಯದೆಲ್ಲೆಡೆ 6ರಿಂದ 12ನೇ ತರಗತಿಗಳು ಪೂರ್ಣಾವಧಿಯಲ್ಲಿ ನಡೆಯಲಿವೆ. ಬಿಬಿಎಂಪಿ ಮತ್ತು ಕೇರಳ ಗಡಿಯ ಶಾಲೆಗಳಲ್ಲಿ 6 ಮತು 7ನೇ ತರಗತಿಗಳಿಗೆ ಎಂದಿನಂತೆ ಪರಿಷ್ಕೃತ ವಿದ್ಯಾಗಮ ತರಗತಿಗಳು ನಡೆಯಲಿವೆ.

6ರಿಂದ ಮೇಲಿನ ತರಗತಿಗಳ ವಿದ್ಯಾರ್ಥಿಗಳು ಮನೆಯಿಂದ ಮಧ್ಯಾಹ್ನದ ಊಟ ತರಬಹುದಾಗಿದೆ. ಸಾಮಾಜಿಕ ಅಂತರ ಮತ್ತು ಶುಚಿತ್ವ ಕಾಪಾಡುವುದು ಮತ್ತು ಮಾಸ್ಕ್ ಹಾಕುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಶಾಲಾ ವೇಳಾಪಟ್ಟಿ

ಶಾಲಾ ವೇಳಾಪಟ್ಟಿ

ವಾರದ ಐದು ದಿನಗಳು 6ರಿಂದ ಮೇಲಿನ ತರಗತಿಗಳು ಬೆಳಗ್ಗೆ 10ರಿಂದ 4.30ರವರೆಗೆ ಮತ್ತು ಶನಿವಾರ ಬೆಳಗ್ಗೆ 10.30ರಿಂದ 12.30ರವರೆಗೆ ನಡೆಯಲಿವೆ ಎಂದು ವೇಳಾಪಟ್ಟಿ ನಿಗದಿ ಪಡಿಲಾಗಿದೆ. ಬಿಬಿಎಂಪಿ ಮತ್ತು ಕೇರಳ ಗಡಿ ಭಾಗದ ಶಾಲೆಗಳಲ್ಲಿ 6 ಮತ್ತು 7ನೇ ತರಗತಿಗಳ ವಿದ್ಯಾಗಮ ಕಾರ್ಯಕ್ರಮಗಳು ವಾರದಲ್ಲಿ ಪ್ರತ್ಯೇಕ ಮೂರು ದಿನಗಳ ಕಾಲ ನಡೆಯಲಿವೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕೋವಿಡ್ ಲಕ್ಷಣಗಳಿದ್ದರೆ ನೋ ಎಂಟ್ರಿ!

ಕೋವಿಡ್ ಲಕ್ಷಣಗಳಿದ್ದರೆ ನೋ ಎಂಟ್ರಿ!

ರಾಜ್ಯದ ಎಲ್ಲ ಜಿಲ್ಲೆಗಳ ಆಯ್ದ ಶಾಲೆಗಳು ಮತ್ತು ವಿದ್ಯಾರ್ಥಿನಿಲಯಗಳಲ್ಲಿ ಆರೋಗ್ಯ ಇಲಾಖೆ ವಿದ್ಯಾರ್ಥಿಗಳ ರ‍್ಯಾಂಡಮ್ ಪರೀಕ್ಷೆ ನಡೆಸಲಿದೆ. ವಿದ್ಯಾರ್ಥಿಗಳು ತಮ್ಮ ಪೋಷಕರಿಂದ ಶಾಲೆಗೆ ಬರಲು ಅನುಮತಿ ಪತ್ರ ತರಬೇಕಿದ್ದು, ಪೋಷಕರು ತಮ್ಮ ಪುತ್ರ ಅಥವಾ ಪುತ್ರಿ ಕೋವಿಡ್ ಲಕ್ಷಣಗಳಿಂದ ಮುಕ್ತವಾಗಿದ್ದಾರೆಂದು ಎಂದು ಅದರಲ್ಲಿ ತಿಳಿಸುವುದು ಕಡ್ಡಾಯವಾಗಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ವೇಳಾಪಟ್ಟಿ ಪರಿಷ್ಕರಿಸಲು ಅವಕಾಶ

ವೇಳಾಪಟ್ಟಿ ಪರಿಷ್ಕರಿಸಲು ಅವಕಾಶ

ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವಸತಿನಿಲಯಗಳು ಹಾಗೂ ಇತರೆ ವಸತಿ ನಿಲಯಗಳ ವಿದ್ಯಾರ್ಥಿಗಳ ಪಾಲನೆಗಾಗಿ ಆರೋಗ್ಯ ಇಲಾಖೆ ನಿಗದಿಪಡಿಸಿರುವ ಎಸ್‍ಒಪಿ ಅನುಸರಿಸಬೇಕಿದೆ. ತರಗತಿಗಳನ್ನು ಪೂರ್ಣ ಪ್ರಮಾಣದಲ್ಲಿ ನಡೆಸಲು ಆಯಾ ಶಾಲಾ ಹಂತದಲ್ಲಿ ಕೊಠಡಿಗಳ ಲಭ್ಯತೆ, ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಶಿಕ್ಷಕರ ಸಂಖ್ಯೆಗಳ ಆಧಾರದಲ್ಲಿ ಎಸ್‍ಒಪಿ ಪಾಲನೆಗಾಗಿ ಶಾಲಾ ವೇಳಾಪಟ್ಟಿ ಪರಿಷ್ಕರಿಸಿ ತರಗತಿಗಳನ್ನು ನಡೆಸಲೂ ಅವಕಾಶವಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

Recommended Video

ಮಂಗಳನ ಅಂಗಳದಲ್ಲಿ ಪರ್ಸೀವರೆನ್ಸ್ ರೋವರ್ ಇಳಿಸಿದ ಕರ್ನಾಟಕ ಮೂಲದ ವಿಜ್ಞಾನಿ | Karnataka | Oneindia Kannada
ದಾಖಲಾತಿ ವಿಸ್ತರಣೆ

ದಾಖಲಾತಿ ವಿಸ್ತರಣೆ

ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಪೂರ್ಣಪ್ರಮಾಣದಲ್ಲಿ ವಿದ್ಯಾರ್ಥಿಗಳು ದಾಖಲಾಗದ ಹಿನ್ನೆಲೆಯಲ್ಲಿ ದಾಖಲಾತಿ ಅವಧಿಯನ್ನು ಮಾರ್ಚ್ 30ರವರೆಗೆ ವಿಸ್ತರಿಸಲಾಗಿದ್ದು, ಪೋಷಕರು ಮತ್ತು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಸಚಿವ ಸುರೇಶ್ ಕುಮಾರ್ ಅವರು ಮನವಿ ಮಾಡಿದ್ದಾರೆ.

English summary
Education Minister Suresh Kumar has suggested that Covid guidelines should be adhered to in schools. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X