ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಾಲೆ ಆರಂಭ: ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸುರೇಶ್ ಕುಮಾರ್ ಎಚ್ಚರಿಕೆ!

|
Google Oneindia Kannada News

ಬೆಂಗಳೂರು, ಮಾ. 11: ಖಾಸಗಿ ಶಾಲಾ ಆಡಳಿತ ಮಂಡಳಿಗಳಿಗೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಎಚ್ಚರಿಕೆ ಕೊಟ್ಟಿದ್ದಾರೆ.

ಕೊರೊನಾಅ ವೈರಸ್‌ನಿಂದ ಕಳೆದ ವರ್ಷದ ಶೈಕ್ಷಣಿಕ ಚಟುವಟಿಕೆಗಳು ಕುಂಠಿತಗೊಂಡಿವೆ. ಜನವರಿ 1 ರಿಂದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯೂಸಿ ಹಾಗೂ ಫೆಬ್ರವರಿ 1 ರಿಂದ ಒಟ್ಟು 6 ತರಗತಿ ಮೇಲ್ಪಟ್ಟ ಎಲ್ಲ ತರಗತಿಗಳು ಆರಂಭವಾಗಿದೆ. ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಕಾಲಕಾಲಕ್ಕೆ ಕೊಟ್ಟಿರುವ ಮಾರ್ಗಸೂಚಿಯಂತೆಯೆ ಎಲ್ಲ ತರಗತಿಗಳು ಆರಂಭವಾಗಿವೆ.

ಈಗಲೂ ಕೂಡ 1 ರಿಂದ 5ನೇ ತರಗತಿಯ ಶಾಲೆ ಆರಂಭಿಸಲು ಸರ್ಕಾರ ಇನ್ನೂ ಅನುಮತಿ ಕೊಟ್ಟಿಲ್ಲ. ಆದರೂ ರಾಜ್ಯದ ಕೆಲವು ಶಾಲೆಗಳಲ್ಲಿ ಈ ತರಗತಿಗಳನ್ನು ಆರಂಭಿಸಿರುವುದರ ಕುರಿತು ಆರೋಗ್ಯ ಸಚಿವ ಡಾ. ಸುಧಾಕರ್ ಆಗ್ರಹಿಸಿದ್ದರು. ಜೊತೆಗೆ ಅಂತಹ ಶಾಲೆಗಳ ಅನುಮತಿ ರದ್ದು ಮಾಡುವಂತೆಯೂ ಮನವಿ ಮಾಡಿದ್ದರು.

ಮಕ್ಕಳ ಯೋಗಕ್ಷೇಮದ ಜವಾಬ್ದಾರಿ ಇದೆ

ಮಕ್ಕಳ ಯೋಗಕ್ಷೇಮದ ಜವಾಬ್ದಾರಿ ಇದೆ

ಆರೋಗ್ಯ ಸಚಿವರ ಟ್ವೀಟ್ ಕುರಿತು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸರ್ಕಾರ ಯಾವುದೇ ನಿರ್ಧಾರ ಕೈಗೊಂಡರೂ ಅದರ ಹಿಂದೆ ಮಕ್ಕಳ ಹಿತ, ಯೋಗಕ್ಷೇಮದ ಕುರಿತು ಚಿಂತನೆ ಇರುತ್ತದೆ.


ಸದ್ಯಕ್ಕೆ ರಾಜ್ಯದಲ್ಲಿ ಆರನೇ ತರಗತಿಯಿಂದ 12ನೇ ತರಗತಿಯವರೆಗೆ ಶೈಕ್ಷಣಿಕ ಚಟುವಟಿಕೆಗಳು ನಡೆಯುತ್ತಿವೆ. ಒಂದರಿಂದ 5 ರವರೆಗೂ ತರಗತಿಗಳನ್ನು ಪ್ರಾರಂಭಿಸಲು ಆರೋಗ್ಯ ಇಲಾಖೆ ಸಮ್ಮತಿ ನೀಡಿಲ್ಲ. ಶಿಕ್ಷಣ ಇಲಾಖೆ ಸಹ ಇದನ್ನು ಆಧರಿಸಿ ನಿರ್ಧಾರಗಳನ್ನು ಕೈಗೊಂಡಿದೆ ಎಂದು ವಿವರಿಸಿದ್ದಾರೆ.

ಶಿಕ್ಷಣ ಸಚಿವ ಸುರೇಶ್ ಕುಮಾರ್ ಎಚ್ಚರಿಕೆ

ಶಿಕ್ಷಣ ಸಚಿವ ಸುರೇಶ್ ಕುಮಾರ್ ಎಚ್ಚರಿಕೆ

ಆದರೆ ಕೆಲ ಖಾಸಗಿ ಶಾಲೆಗಳಲ್ಲಿ ಸರ್ಕಾರದ ಆದೇಶವನ್ನು ಮೀರಿ, ನಿಯಮ ಉಲ್ಲಂಘಿಸಿ ಒಂದರಿಂದ ಐದರವರೆಗೆ ತರಗತಿಗಳನ್ನು ನಡೆಸುತ್ತಿರುವ ಮಾಹಿತಿ ದೊರಕಿದೆ. ಎಲ್ಲಾ ಜಿಲ್ಲೆಗಳ ಉಪನಿರ್ದೇಶಕರಿಗೆ ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ಯಾರೂ ಸಹ ಮಕ್ಕಳ ಯೋಗಕ್ಷೇಮಕ್ಕಾಗಿ ಸುದೀರ್ಘ ಚಿಂತನೆ ನಡೆಸಿ ಕೈಗೊಂಡಿರುವ ಸರ್ಕಾರದ ನಿರ್ಧಾರಗಳನ್ನು ಮೀರುವಂತಿಲ್ಲ. ಸರ್ಕಾರದ ಆದೇಶಗಳನ್ನು ಮೀರಿ ತಾವೇ ಸ್ವತಃ ಯಾವುದೇ ನಿರ್ಧಾರ ಕೈಗೊಳ್ಳುವುದಕ್ಕೆ ಅವಕಾಶವಿಲ್ಲ ಎಂದು ಸುರೇಶ್ ಕುಮಾರ್ ಎಚ್ಚರಿಸಿದ್ದಾರೆ.

ಅನುಮತಿ ಇಲ್ಲದಿದ್ದರೂ ಶಾಲೆ ಆರಂಭ

ಅನುಮತಿ ಇಲ್ಲದಿದ್ದರೂ ಶಾಲೆ ಆರಂಭ

ಕೆಲ ಖಾಸಗಿ ಶಾಲೆಗಳು ಸರ್ಕಾರದ ಅನುಮತಿ ಇಲ್ಲದಿದ್ದರೂ 1-6ನೇ ತರಗತಿಯ ಮಕ್ಕಳಿಗೆ ಶಾಲೆ ಪುನರಾರಂಭಿಸಿರುವುದರ ಬಗ್ಗೆ ದೂರು ಬಂದಿವೆ. ನಿಯಮ ಉಲ್ಲಂಘಿಸಿ ತರಗತಿಗಳನ್ನು ಪುನರಾರಂಭಿಸಿರುವ ಶಾಲೆಗಳ ವಿರುದ್ಧ ಪರವಾನಗಿ ರದ್ದು ಸೇರಿದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಮನವಿ ಮಾಡಿದ್ದೇನೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಎಚ್ಚರಿಸಿದ್ದಾರೆ.

Recommended Video

ಕೋರೋನ ಹಾವಳಿ ಜಾಸ್ತಿ ಆದ ಕಾರಣ ! ಲಾಕ್ ಡೌನ್ | Oneindia Kannada
ಸುರೇಶ್ ಕುಮಾರ್ ಎಚ್ಚರಿಕೆ

ಸುರೇಶ್ ಕುಮಾರ್ ಎಚ್ಚರಿಕೆ

ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಶಾಲೆ ಆರಂಭದ ಕುರಿತು ಚರ್ಚೆ ನಡೆಸಿದ್ದಾರೆ. ನೆರೆಯ ಮಹಾರಾಷ್ಟ್ರ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 13,000ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದು ನನ್ನನ್ನು ಚಿಂತೆಗೀಡು ಮಾಡಿದೆ ಎಂದು ಸುಧಾಕರ್ ಅವರು ಸುರೇಶ್ ಕುಮಾರ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.

ಇದನ್ನು ಎಚ್ಚರಿಕೆಯ ಗಂಟೆ ಎಂದು ಪರಿಗಣಿಸಿ, ಹಬ್ಬ-ಹರಿದಿನಗಳು, ಸಭೆ-ಸಮಾರಂಭಗಳು ಏನೇ ಇದ್ದರೂ ಮಾಸ್ಕ್ ಧರಿಸಿವುದು, ಭೌತಿಕ ಅಂತರವನ್ನು ತಪ್ಪದೇ ಪಾಲಿಸಬೇಕು. ಜನಸಂದಣಿಯಿಂದ ದೂರವಿರಬೇಕು ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ವಿನಂತಿಸಿದ್ದರು.

ಹೀಗಾಗಿ ನಿಯಮ ಉಲ್ಲಂಘಿಸಿ ಒಂದರಿಂದ ಐದನೇ ತರಗತಿವರೆಗೆ ಶಾಲೆ ಆರಂಭಿಸುವ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣಕ್ರಮ ಕೈಗೊಳ್ಳಲಾಗುವುದು ಎಂದು ಸುರೇಶ್ ಕುಮಾರ್ ಎಚ್ಚರಿಸಿದ್ದಾರೆ.

English summary
Education Minister Suresh Kumar has warned private school boards starting from one to fifth grade classes.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X