ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶುಲ್ಕ ಪಾವತಿಸಲಾಗದ ವಿದ್ಯಾರ್ಥಿ ಮನೆಗೆ ಭೇಟಿ ಕೊಟ್ಟ ಶಿಕ್ಷಣ ಸಚಿವ ಸುರೇಶ್ ಕುಮಾರ್!

|
Google Oneindia Kannada News

ಬೆಂಗಳೂರು, ಫೆ. 11: ಶಾಲಾ ಶುಲ್ಕ ಪಾವತಿಸದಿರುವುದರಿಂದ ಪ್ರಾಚಾರ್ಯರಿಂದ ಬಹಿರಂಗ ಅವಮಾನಕ್ಕೊಳಗಾಗಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿಯ ಮನೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಭೇಟಿ ನೀಡಿ ಧೈರ್ಯ ತುಂಬಿ ಸಮಾಧಾನ ಹೇಳಿದರು.

ನಗರದ ಎಚ್.ಎಸ್.ಆರ್. ಲೇಔಟ್‌ನ ಸೋಮಸುಂದರ ಪಾಳ್ಯದ ರವೀಂದ್ರ ಭಾರತಿ ಗ್ಲೋಬಲ್ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಶಾಲಾ ಶುಲ್ಕ ಪಾವತಿಸಿಲ್ಲವಾದ್ದರಿಂದ ಶಾಲೆಯ ಪ್ರಾಚಾರ್ಯರು ಎಲ್ಲ ವಿದ್ಯಾರ್ಥಿಗಳ ಮುಂದೆ ನಿಂದಿಸಿ ಅಪಮಾನಿಸಿ ಶಾಲಾ ಮಟ್ಟದ ಪರೀಕ್ಷೆಗೆ ನಿರಾಕರಣೆ ಮಾಡಿದ್ದರು. ಸಹಪಾಠಿಗಳೆದುರಿಗೆ ಆದ ಅವಮಾನದಿಂದ ಮನನೊಂದ ವಿದ್ಯಾರ್ಥಿ ಆತ್ಮಹತ್ಯೆಗೆ ಮುಂದಾಗಿದ್ದ ಎಂಬ ವಿಷಯ ಗಮನಕ್ಕೆ ಬಂದಾಗ ವಿದ್ಯಾರ್ಥಿಯ ಮನೆಗೆ ಖುದ್ದಾಗಿ ತೆರಳಿದ ಸಚಿವರು, ವಿದ್ಯಾರ್ಥಿ ಮತ್ತು ಆತನ ಪೋಷಕರಿಗೆ ಧೈರ್ಯ ಹೇಳಿದರು.

ವಿದ್ಯಾರ್ಥಿ ಮತ್ತು ಪೋಷಕರೊಂದಿಗೆ ಕುಳಿತು, ಶಾಲೆಯಲ್ಲಿ ಏನೇನು ನಡೆಯಿತೆಂದು ವಿಚಾರಿಸಿದರು. ಶಾಲೆಯ ಎಲ್ಲ ವಿದ್ಯಾರ್ಥಿಗಳೆದುರಿಗೆ ಆದ ಅವಮಾನದಿಂದ ನಾನು ಬದುಕುವುದೇ ಬೇಡ ಎಂದು ನಿರ್ಧರಿಸಿ ಆತ್ಮಹತ್ಯೆಗೆ ಮುಂದಾದೆ ಎಂದು ಹೇಳುತ್ತಿದ್ದಂತೆ ಅವನ ಮಾತನ್ನು ತಡೆದು, ಹೆಗಲ ಮೇಲೆ ಕೈಹಾಕಿ, ಜೀವನ ಇಷ್ಟಕ್ಕೆ ಮುಗಿಯುವುದಿಲ್ಲ. ಸಮಾಜದಲ್ಲಿ ಎಲ್ಲ ರೀತಿಯ ಜನ ಇರುತ್ತಾರೆ, ಇಂತಹದಕ್ಕೆಲ್ಲ ಹೆದರಿ ಕೂರಬಾರದು, ಎಲ್ಲದನ್ನೂ ಧೈರ್ಯವಾಗಿ ಎದುರಿಸಬೇಕು ಎಂದು ಹೇಳಿದರು.

ಒಳ್ಳೆಯ ಕಾಲ ಬರುತ್ತದೆ

ಒಳ್ಳೆಯ ಕಾಲ ಬರುತ್ತದೆ

ಯಾರೊಬ್ಬರೂ ಇಂತಹುದೇ ಜಾತಿಯಲ್ಲಿ ಹುಟ್ಟಬೇಕೆಂದು ಅರ್ಜಿ ಹಾಕುವುದಿಲ್ಲ. ಯಾರೂ ಮೇಲಲ್ಲ, ಯಾರೂ ಕೀಳಲ್ಲ, ಎಲ್ಲರೂ ಸಮಾನರು. ಶಿಕ್ಷಣವೊಂದು ಮಾತ್ರವೇ ಎಲ್ಲವನ್ನೂ ಭೇದಿಸಿ ನಿಲ್ಲಬಲ್ಲದು ಎಂದು ಸುರೇಶ್ ಕುಮಾರ್ ಹೇಳಿದರು.


ನೀನು ಆತ್ಮಹತ್ಯೆ ಮಾಡಿಕೊಂಡಿದ್ದರೆ ಇಷ್ಟು ದಿನ ಕಷ್ಟದಲ್ಲಿ ಸಂಪಾದನೆ ಮಾಡಿ ನಿನ್ನನ್ನು ಕಷ್ಟಪಟ್ಟು ಬೆಳೆಸಿ ನಿನ್ನ ಮೇಲೆ ಅಪಾರ ವಿಶ್ವಾಸವಿಟ್ಟುಕೊಂಡಿರುವ ನಿನ್ನ ತಂದೆ ತಾಯಿ, ನಿನ್ನ ಪುಟ್ಟ ತಂಗಿಗೆ ಯಾರು ಗತಿ, ಅವರ ಕಥೆ ಏನಾಗುತಿತ್ತು ಎಂಬುದನ್ನು ನೀನು ಯೋಚಿಸಿದ್ದೀಯಾ? ಆತ್ಮಹತ್ಯೆಗೆ ಯಾವತ್ತೂ ಪ್ರಯತ್ನಿಸಬೇಕು. ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳುವಂತಹ ಮನಸ್ಸು ಕೆಲವರಿಗೆ ಇರುವುದಿಲ್ಲ. ಇಷ್ಟಕ್ಕೇ ಜೀವನವೂ ಮುಗಿಯುವುದಿಲ್ಲ. ಒಳ್ಳೆ ಕಾಲ ಬಂದೇ ಬರುತ್ತದೆ. ಅಲ್ಲಿ ತನಕ ಸಮಾಧಾನದಿಂದ ಇರಬೇಕು ಎಂದರು.

ಭರವಸೆ ತುಂಬಿದ ಸುರೇಶ್ ಕುಮಾರ್

ಭರವಸೆ ತುಂಬಿದ ಸುರೇಶ್ ಕುಮಾರ್

ವಲಸೆ ಕಾರ್ಮಿಕರೊಬ್ಬರ ಪುತ್ರ ಮಹೇಶ ಎಂಬಾತ ಕಳೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣನಾದಾಗ ಅವನ ಶಿಕ್ಷಣ ಮುಂದುವರೆಕೆಗೆ ಹಲವಾರು ಮಂದಿ ಮುಂದೆ ಬಂದರು. ಜೀವನ ಯಾವಾಗಲೂ ನಿಂತ ನೀರಲ್ಲ. ಅಪಮಾನ-ನಿಂದನೆ ಎಲ್ಲದನ್ನೂ ಮೆಟ್ಟಿ ನಿಂತಾಗ ಮಾತ್ರವೇ ಪ್ರಸ್ತುತ ಕಾಲಮಾನದಲ್ಲಿ ಜೀವನ ಮಾಡಲು ಸಾಧ್ಯವಾಗುತ್ತದೆ ಎಂದು ಸುರೇಶ್ ಕುಮಾರ್ ಅವರು ಭರವಸೆ ತುಂಬಿದರು.

ಶಾಲೆಗೆ ನೋಟಿಸ್ ಕೊಟ್ಟಿದ್ದೇವೆ

ಶಾಲೆಗೆ ನೋಟಿಸ್ ಕೊಟ್ಟಿದ್ದೇವೆ

ನಿನಗೆ ಅಪಮಾನ ಮಾಡಿದ ಸ್ಕೂಲ್‍ಗೆ ಈಗಾಗಲೇ ನೋಟಿಸ್ ನೀಡಿದ್ದೇವೆ. ಆ ಸ್ಕೂಲ್ ಬಗ್ಗೆ ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಕೈಗೊಳ್ಳುತ್ತೇವೆ. ಇನ್ನು ಮುಂದೆ ಯಾವುದೇ ಕಾರಣಕ್ಕೂ ಆತ್ಮಹತ್ಯೆಯಂತಹ ಕ್ರಮಕ್ಕೆ ಮುಂದಾಗಬಾರದು, ನಿನ್ನ ತಂದೆತಾಯಿಗಳಿಗೆ ನೀನೇ ಧೈರ್ಯ ಹೇಳಬೇಕು ಎಂದು ಸುರೇಶ್ ಕುಮಾರ್ ವಿದ್ಯಾರ್ಥಿಗೆ ಕಿವಿಮಾತು ಹೇಳಿದರು.

Recommended Video

ಶಿಕ್ಷಣ ಸಚಿವರ ಉಸ್ತುವಾರಿ ಜಿಲ್ಲೆಯಲ್ಲೇ ಬಸ್ ಗೆ ಪರದಾಟ - ಗೂಡ್ಸ್ ಹಾಗೂ ಅಂತರ್ರಾಜ್ಯ ಬಸ್ ಗಳಲ್ಲಿ ವಿದ್ಯಾರ್ಥಿಗಳ ಸಂಚಾರ | Oneindia Kannada
ಲೈಸನ್ಸ್ ಹಿಂದಕ್ಕೆ ಪಡೆಯಲು ಚಿಂತನೆ?

ಲೈಸನ್ಸ್ ಹಿಂದಕ್ಕೆ ಪಡೆಯಲು ಚಿಂತನೆ?

ಬೆಂಗಳೂರು ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ, ತರಗತಿಗಳಲ್ಲಿ ವಿದ್ಯಾರ್ಥಿಗಳನ್ನು ನಿಂದಿಸುವುದು ಇಲ್ಲವೇ ಅಪಮಾನ ಮಾಡುವುದು ದುರ್ನಡತೆಯ ಪ್ರದರ್ಶನವಾಗಿರುವ ಹಿನ್ನೆಲೆಯಲ್ಲಿ ಶಾಲೆಗೆ ನೋಟಿಸ್ ನೀಡಲಾಗಿದೆ. ವಿದ್ಯಾರ್ಥಿಯ ಆತ್ಮಹತ್ಯೆ ಯತ್ನಕ್ಕೆ ಶಾಲೆಯೇ ನೇರ ಹೊಣೆಯಾಗಿರುವುದರಿಂದ ಅಮಾನವೀಯತೆ ಮತ್ತು ಕ್ರೂರ ನಡವಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ಶಾಲೆಯ ವಿರುದ್ಧ ಸಾಂಕ್ರಾಮಿಕ ರೋಗಗಳ ಅಧಿನಿಯಮ 1897ರ ಸೆಕ್ಷನ್ (3), ಪ್ರಕೃತಿ ವಿಕೋಪ ನಿರ್ವಹಣಾ ಅಧಿನಿಯಮ, ಭಾರತೀಯ ದಂಡ ಸಂಹಿತೆ-188ನೇ ಪ್ರಕರಣಗಳಡಿ ಕ್ರಿಮಿನಲ್ ಮೊಕದ್ದಮೆ ಮತ್ತು ಕರ್ನಾಟಕ ಶಿಕ್ಷಣ ಕಾಯ್ದೆ-1995ರಡಿ ಶಾಲೆಯ ಮಾನ್ಯತೆ ಹಾಗೂ ಕೇಂದ್ರ ಪಠ್ಯಕ್ರಮ ಸಂಯೋಜನೆಗೆ ರಾಜ್ಯ ಸರ್ಕಾರದ ನಿರಪೇಕ್ಷಣಾ ಪತ್ರವನ್ನು ಹಿಂಪಡೆಯಲು ಏಕೆ ಶಿಫಾರಸು ಮಾಡಬಾರದೆಂದು ಸಮುಜಾಯಿಷಿ ಕೇಳಿ ಸದರಿ ಶಾಲೆಗೆ ನೋಟಿಸ್ ಈಗಾಗಲೇ ನೀಡಿದ್ದಾರೆ.

English summary
Primary and secondary education minister S. Suresh Kumar visited and consoled student who allegedly tried to commit suicide by insults from school for not paying school fees. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X