ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಶಿಕ್ಷಣ ಸಚಿವ ಸುರೇಶ್ ಕುಮಾರ್!

|
Google Oneindia Kannada News

ಬೆಂಗಳೂರು, ಮಾ. 16: ರಾಜ್ಯದಲ್ಲಿ ಮತ್ತೊಮ್ಮೆ ಕೊರೊನಾತಂಕ ಶುರುವಾಗಿದೆ. ಜನವರಿ 1 ರಿಂದ ಹಂತ-ಹಂತವಾಗಿ ಆರಂಭಗೊಂಡಿರುವ ಶಾಲಾ-ಕಾಲೇಜುಗಳ ಶೈಕ್ಷಣಿಕ ಚಟುವಟಿಕೆ ಮೇಲೆ ಮತ್ತೆ ಕೊರೊನಾ ವೈರಸ್ ಪರಿಣಾಮ ಬೀರುವ ಸಾಧ್ಯತೆಗಳಿವೆ. ಕೊರೊನಾ ನಿಯಂತ್ರಣದ ಕುರಿತು ನಿನ್ನೆ(ಮಾ.15)ಯಷ್ಟೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ತಜ್ಞರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ಕಠಿಣಕ್ರಮದ ಎಚ್ಚರಿಕೆಯನ್ನು ನೀಡಿದ್ದಾರೆ.

ಇದೇ ಸಂದರ್ಭದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಮಕ್ಕಳ ಆರೋಗ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ವರದಿಗಳು ಬಂದಿವೆ. ಇದೇ ವಿಚಾರವಾಗಿ ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಕೆಲ ದಿನಗಳ ಹಿಂದೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರ ಗಮನ ಸೆಳೆದಿದ್ದರು.

ಈ ಸಲವೂ ಬೇಸಿಗೆ ರಜೆ ಘೋಷಣೆ? ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಆದೇಶ!ಈ ಸಲವೂ ಬೇಸಿಗೆ ರಜೆ ಘೋಷಣೆ? ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಆದೇಶ!

ಇದೀಗ ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಕಠಿಣ ಎಚ್ಚರಿಕೆ ಕೊಟ್ಟಿದ್ದಾರೆ. ಜೊತೆಗೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಖಡಕ್ ಆದೇಶ ಕೊಟ್ಟಿದ್ದಾರೆ.

ನರ್ಸರಿ ತರಗತಿಗಳನ್ನೂ ಆರಂಭಿಸಿರುವ ಶಿಕ್ಷಣ ಸಂಸ್ಥೆಗಳು

ನರ್ಸರಿ ತರಗತಿಗಳನ್ನೂ ಆರಂಭಿಸಿರುವ ಶಿಕ್ಷಣ ಸಂಸ್ಥೆಗಳು

ಜನವರಿ 1 ರಿಂದ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಿವೆ. ಅದೇ ರೀತಿ ಹಂತ-ಹಂತವಾಗಿ 6ನೇ ತರಗತಿ ವರೆಗೆ ತರಗತಿಗಳು ಆರಂಭಗೊಂಡಿವೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಸರ್ಕಾರದ ಆದೇಶವನ್ನೂ ಧಿಕ್ಕರಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳು ನಡೆದುಕೊಳ್ಳುತ್ತಿವೆ. ಹೆಚ್ಚುತ್ತಿರುವ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಸರ್ಕಾರ ಮಕ್ಕಳ ವಿಚಾರವಾಗಿ ಆತಂಕ ವ್ಯಕ್ತಪಡಿಸಿದೆ. ನರ್ಸರಿ, ಎಲ್‌ಕೆಜಿ, ಯುಕೆಜಿ ಸೇರಿದಂತೆ ಒಂದರಿಂದ ಐದನೇ ತರಗತಿಯ ಮಕ್ಕಳಿಗೂ ಶಾಲೆ ಆರಂಭಿಸಿವೆ. ಅಷ್ಟೇ ಅಲ್ಲ ಚಿಕ್ಕ ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ ಪಾಲಕರ ಮೇಲೆ ಒತ್ತಡ ಹಾಕುತ್ತಿವೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಸರ್ಕಾರ ಎಚ್ಚೆತ್ತುಕೊಂಡಿದೆ.

ಕಠಿಣ ಕಾನೂನು ಕ್ರಮ ಕಟ್ಟಿಟ್ಟ ಬುತ್ತಿ!

ಕಠಿಣ ಕಾನೂನು ಕ್ರಮ ಕಟ್ಟಿಟ್ಟ ಬುತ್ತಿ!

ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ಸೂಚನೆ ಇಲ್ಲದೇ ಹೋದರೂ 1 ರಿಂದ 5ನೇ ತರಗತಿಗಳನ್ನು ರಾಜ್ಯದಲ್ಲಿ ಹಲವು ಖಾಸಗಿ ಶಿಕ್ಷಣ ಶಿಕ್ಷಣ ಆರಂಭಿಸಿವೆ. ಈ ವಿಚಾರವನ್ನು ಕಳೆದ ಕೆಲ ದಿನಗಳ ಹಿಂದೆ ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಶಿಕ್ಷಣ ಸಚಿವರ ಗಮನಕ್ಕೆ ತಂದಿದ್ದರು. ಆಗ ಸುರೇಶ್ ಕುಮಾರ್ ಅವರು ಯಾವುದೇ ಕಾರಣಕ್ಕೂ ಒಂದರಿಂದ ಐದನೇ ತರಗತಿ ವರೆಗೆ ತರಗತಿಗಳನ್ನು ನಡೆಸಬಾರದು ಎಂದು ಖಾಸಗಿ ಶಾಲೆಗಳಿಗೆ ಸೂಚಿಸಿದ್ದರು. ಆದರೂ ಮೊಂಡು ಹಠ ಬಿಡದ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮುಲಾಜಿಲ್ಲದೆ ಕ್ರಮಕ್ಕೆ ಸುರೇಶ್ ಕುಮಾರ್ ಸೂಚನೆ!

ಮುಲಾಜಿಲ್ಲದೆ ಕ್ರಮಕ್ಕೆ ಸುರೇಶ್ ಕುಮಾರ್ ಸೂಚನೆ!

ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ರಾಜ್ಯ ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿಯ ಅನುಮತಿಯೊಂದಿಗೆ 6ನೇ ತರಗತಿಯಿಂದ ಮೇಲ್ಪಟ್ಟ ತರಗತಿಗಳನ್ನು ಮಾತ್ರ ಆರಂಭಿಸಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಆದರೆ ರಾಜ್ಯದ ಹಲವೆಡೆ ಕೆಲವು ಖಾಸಗಿ ಶಾಲೆಗಳು 1 ರಿಂದ 5ನೇ ತರಗತಿಗಳನ್ನು ಅನಧಿಕೃತವಾಗಿ ನಡೆಸುತ್ತಿರುವ ಕುರಿತು ಮಾಧ್ಯಮ ವರದಿಗಳ ಹಿನ್ನೆಲೆಯಲ್ಲಿ ಇಂತಹ ಶಾಲೆಗಳ ಕುರಿತು ಕ್ರಮ ಕೈಗೊಳ್ಳಬೇಕೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಇದೀಗ ಮತ್ತೊಮ್ಮೆ ಕಠಿಣ ಆದೇಶ ಮಾಡಿದ್ದಾರೆ.

Recommended Video

ಸದ್ಯಕ್ಕೆ ಶಾಲೆ ಓಪನ್ ಮಾಡಲ್ಲಾ!! | Oneindia Kannada
ತಾಲೂಕಾ ಮಟ್ಟದಲ್ಲಿ ಪರಿಶೀಲನಾ ತಂಡ ರಚನೆ

ತಾಲೂಕಾ ಮಟ್ಟದಲ್ಲಿ ಪರಿಶೀಲನಾ ತಂಡ ರಚನೆ

ಸರ್ಕಾರದ ಆದೇಶವನ್ನು ಉಲ್ಲಂಘಿಸುತ್ತಿರುವ ಖಾಸಗಿ ಶಾಲೆಗಳನ್ನು ಪತ್ತೆ ಮಾಡಿ ಕಾನೂನು ಕ್ರಮಕೈಗೊಳ್ಳಲು ತಾಲೂಕು ಮಟ್ಟದಲ್ಲಿ ಪರಿಶೀಲನಾ ತಂಡಗಳನ್ನು ರಚಿಸಲು ಶಿಕ್ಷಣ ಸಚಿವರು ಆದೇಶ ಮಾಡಿದ್ದಾರೆ. ಸರ್ಕಾರದ ಆದೇಶವನ್ನೂ ಮೀರಿ ಈ ರೀತಿ ಅನಧಿಕೃತವಾಗಿ 1 ರಿಂದ 5ನೇ ತರಗತಿಗಳನ್ನು ನಡೆಸುತ್ತಿರುವ ಶಾಲೆಗಳ, ಶಿಕ್ಷಣ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಕುರಿತು ಕೂಡಲೇ ಸುತ್ತೋಲೆ ಹೊರಡಿಸಬೇಕೆಂದು ಸುರೇಶ್ ಕುಮಾರ್ ಇಲಾಖೆಯ ಆಯಕ್ತರು ಮತ್ತು ಅಪರ ಆಯುಕ್ತರುಗಳಿಗೆ ಸೂಚನೆ ನೀಡಿದ್ದಾರೆ.


ತಾಲೂಕಾ ಮಟ್ಟದ ತಂಡಗಳು ಪ್ರತಿ ಊರು/ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿವೆ. ಈ ತಂಡಗಳಿಗೆ ಸರ್ಕಾರದ ಸುತ್ತೋಲೆ ಮೂಲಕ ಮಾನ್ಯತೆ ದೊರೆಯಲಿದ್ದು, ಕೋವಿಡ್ ಮಾರ್ಗಸೂಚಿ ಉಲ್ಲಂಘಿಸುವ ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಕ್ರಮಕೈಗೊಳ್ಳಲು ಅನುಕೂಲವಾಗಲಿದೆ.

English summary
Education minister Suresh Kumar has ordered take serious action against private education institutes that run classes in violation of government guidelines regarding covid pandemic.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X