ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಲ್ಲ ತರಗತಿ ಆರಂಭಿಸುವ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ!

|
Google Oneindia Kannada News

ಬೆಂಗಳೂರು, ಫೆ. 12: ರಾಜ್ಯದಲ್ಲಿ ಈಗಾಗಲೇ ಶಾಲಾ-ಕಾಲೇಜುಗಳು ಆರಂಭವಾಗಿವೆ. ಆದರೆ ಶೈಕ್ಷಣಿಕ ಚಟುವಟಿಕೆಗಳು ಈಗಲೂ ಸಂಪೂರ್ಣವಾಗಿ ಶುರುವಾಗಿಲ್ಲ. ಹೀಗಾಗಿ ಮಕ್ಕಳ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳು ಕುಂಠಿತಗೊಂಡಿವೆ. ಹೀಗಾಗಿ ಎಲ್ಲ ತರಗತಿಗಳನ್ನು ಆರಂಭಿಸುವ ಕುರಿತು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಮಹತ್ವದ ಮಾಹಿತಿ ನೀಡಿದ್ದಾರೆ.

Recommended Video

ಸುರೇಶ್ ಕುಮಾರ್ ಅವರ ನಿರ್ಧಾರ ಸರೀನಾ! | Oneindia Kannada

ರಾಜ್ಯದ ಎಲ್ಲ ಭಾಗಗಳಿಂದಲೂ ಪ್ರಸ್ತುತ ಶೈಕ್ಷಣಿಕ ವರ್ಷದ ಉಳಿದ ತರಗತಿಗಳನ್ನು ಆರಂಭಿಸಬೇಕೆಂಬ ಪೋಷಕರು, ವಿದ್ಯಾರ್ಥಿ ಸಮುದಾಯ ಒತ್ತಾಯದ ಹಿನ್ನೆಲೆಯಲ್ಲಿ ಶಾಲಾರಂಭ ಕುರಿತಂತೆ ಫೆ. 16ರಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಮತ್ತು ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು.

ಶುಕ್ರವಾರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಇಲಾಖೆಯ ಹಲವಾರು ವಿಷಯಗಳ ಮತ್ತು ಈಗಾಗಲೇ ಆರಂಭವಾಗಿರುವ ತರಗತಿಗಳ ಹಾಜರಾತಿ ಪ್ರಗತಿ ಪರಿಶೀಲನೆ ನಡೆಸಲಾಗಿದೆ.

ಶಾಲೆಗಳಿಗೆ ಖುದ್ದು ಭೇಟಿ

ಶಾಲೆಗಳಿಗೆ ಖುದ್ದು ಭೇಟಿ

ತಾವು ಇತ್ತೀಚೆಗೆ ಭೇಟಿ ನೀಡಿದ 15ಕ್ಕೂ ಹೆಚ್ಚು ಜಿಲ್ಲೆಗಳ ಹಲವಾರು ಶಾಲೆಗಳಲ್ಲಿ ಕೋವಿಡ್ ನಿಯಮಗಳ ಪಾಲನೆ ಮಾಡುತ್ತಿರುವುದನ್ನು ತಾವು ಖುದ್ದಾಗಿ ಪರಿಶೀಲಿಸಿದ್ದು, ಶಾಲೆಗಳು ತಡವಾಗಿ ಆರಂಭವಾಗಿರುವುದರಿಂದ ಶಾಲೆಗಳಿಗೆ ಮಕ್ಕಳು ಖುಷಿಯಿಂದ ಬರುತ್ತಿದ್ದಾರೆ. ಜೊತೆಗೆ ಕಲಿಯುವುದರಲ್ಲಿ ಹೆಚ್ಚಿನ ಆಸಕ್ತಿ ವಹಿಸುತ್ತಿರುವುದು ಕಂಡು ಬರುತ್ತಿದೆ ಎಂದು ಸುರೇಶ್ ಕುಮಾರ್ ಹೇಳಿದರು.

ಫೆ. 16ರಂದು ಮಹತ್ವದ ಸಭೆ

ಫೆ. 16ರಂದು ಮಹತ್ವದ ಸಭೆ

ಕಳೆದ ವಿಧಾನ ಪರಿಷತ್ ಅಧಿವೇಶನದಲ್ಲಿ ಪ್ರಸ್ತಾಪವಾದ ಖಾಸಗಿ ಶಾಲೆಗಳ ಸುರಕ್ಷತಾ ನಿಯಮಗಳ ಸರಳೀಕರಿಸಬೇಕೆಂಬ ಪ್ರಸ್ತಾವನೆಗಳ ಕುರಿತಂತೆ ಸುಪ್ರೀಂ ಕೋರ್ಟ್ ತೀರ್ಪಿನ ವ್ಯಾಪ್ತಿಯಲ್ಲಿಯೇ ಮರು ಪರಿಶೀಲಿಸುವ ಕುರಿತು ಫೆ. 16ರಂದು ಅಗ್ನಿಶಾಮಕ ದಳ, ಲೋಕೋಪಯೋಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗೃಹ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.

ಕಡತ ವಿಲೇವಾರಿ ಅದಾಲತ್

ಕಡತ ವಿಲೇವಾರಿ ಅದಾಲತ್

ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಉಪನಿರ್ದೇಶಕರ ಕಚೇರಿಗಳಲ್ಲಿ ಕೆಲಸಗಳು ಸರಿಯಾಗಿ ಹಾಗೂ ಸಕಾಲದಲ್ಲಿ ಆಗುತ್ತಿಲ್ಲವೆಂದು ಪದೇ ಪದೇ ಸಾರ್ವಜನಿಕರಿಂದ ದೂರುಗಳು ಸ್ವೀಕೃತವಾಗಿರುವ ಹಿನ್ನೆಲೆಯಲ್ಲಿ ಕಡತ ವಿಲೇವಾರಿಯನ್ನು ಸಕಾಲದಲ್ಲಿ ಮಾಡಲು ಅಧಿಕಾರಿಗಳಿಗೆ ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ. ತಂತ್ರಜ್ಞಾನಾ ಆಧಾರಿತ ಆಡಳಿತಕ್ಕೆ ಪ್ರಾಶಸ್ತ್ಯ ಕೊಡಿ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.

ಮಾರ್ಚ್ ಒಂದರಂದು ಧಾರವಾಡ ಅಪರ ಆಯುಕ್ತಾಲಯ ವಿಭಾಗ ವ್ಯಾಪ್ತಿಯಲ್ಲಿ ಕಡತ ವಿಲೇವಾರಿ ಆದಾಲತ್‍ನ್ನು ತಮ್ಮ ನೇತೃತ್ವದಲ್ಲಿ ನಡೆಸಲಾಗುತ್ತಿದ್ದು, ಅದೇ ಮಾದರಿಯಲ್ಲಿ ಉಳಿದ ಆಯುಕ್ತಾಲಯಗಳೂ ಕ್ರಮ ವಹಿಸಲು ಮುಂದಾಗಬೇಕೆಂದೂ ಸಚಿವ ಸುರೇಶ್ ಕುಮಾರ್ ಅವರು ಸೂಚಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ ಫಲಿತಾಂಶ

ಎಸ್‌ಎಸ್‌ಎಲ್‌ಸಿ, ಪಿಯುಸಿ ಫಲಿತಾಂಶ

ಪ್ರಸ್ತುತ ವರ್ಷದ ತರಗತಿ ಆರಂಭವಾಗಿರುವ ಹಿನ್ನೆಲೆಯಲ್ಲಿ 9ರಿಂದ 12ನೇ ತರಗತಿಗಳಿಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಮತ್ತು 6ರಿಂದ 9ರವರೆಗಿನ ಪರಿಷ್ಕೃತ ವಿದ್ಯಾಗಮ ತರಗತಿಗಳಿಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳ ವಿವರವನ್ನು ಪರಿಶೀಲಿಸಿ ಶಾಲೆಗಳು ಕೋವಿಡ್ ನಿಯಮಗಳ ಪಾಲಿಸುವ ಕುರಿತು ವಿವರ ಪಡೆದುಕೊಂಡರು.

ಈಗಾಗಲೇ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ತರಗತಿಗಳು ಪೂರ್ಣ ಪ್ರಮಾಣದಲ್ಲಿ ನಡೆಯುತ್ತಿದ್ದು, ಭೌತಿಕ ತರಗತಿಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿದೆ. ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಪರೀಕ್ಷಾಭಿಮುಖವಾಗಿ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದು, ಅಧಿಕೃತ ಪರೀಕ್ಷಾ ವೇಳಾಪಟ್ಟಿಯತ್ತ ಮುಖ ಮಾಡಿದ್ದಾರೆ ಎಂದು ಸುರೇಶ್ ಕುಮಾರ್ ತಿಳಿಸಿದರು.

ಹಾಗೆಯೇ ಪರೀಕ್ಷೆಗಳ ದಿನಾಂಕ, ಮೌಲ್ಯಮಾಪನ, ಫಲಿತಾಂಶ ಪ್ರಕಟಣೆ ಸೇರಿದಂತೆ ಮುಂದಿನ ಶೈಕ್ಷಣಿಕ ವರ್ಷದ ಆರಂಭ ಕುರಿತಂತೆ ಸುದೀರ್ಘವಾಗಿ ಚರ್ಚೆ ನಡೆಸಿದ ಸಚಿವರು, 10 ಮತ್ತು 12ನೇ ತರಗತಿಗಳ ಪರೀಕ್ಷೆ ಮತ್ತು ಫಲಿತಾಂಶಗಳನ್ನು ಜೂನ್ ಅಂತ್ಯದೊಳಗೆ ಮತ್ತು ಉಳಿದ ತರಗತಿಗಳ ಪರೀಕ್ಷೆ ಮತ್ತು ಫಲಿತಾಂಶ ಘೊಷಣೆಯನ್ನು ಜೂ. 10ರೊಳಗೆ ಪೂರ್ಣಗೊಳಿಸಿ ಈ ಎಲ್ಲ ಪ್ರಕ್ರಿಯೆ ಮುಗಿದ ತಕ್ಷಣವೇ ಮಂದಿನ ಶೈಕ್ಷಣಿಕ ವರ್ಷದ ತರಗತಿಗಳನ್ನು ಏಕ ಕಾಲಕ್ಕೆ ಆರಂಭಗೊಳಿಸಲಾಗುವುದು ಎಂದು ತಿಳಿಸಿದರು.

English summary
Education Minister Suresh Kumar said that the decision will be taken to open all classes at a meeting of the Health Minister and the State Covid Technical Advisory Committee on the Feb. 16th. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X