ಶಾಲೆ ಆರಂಭಿಸುವ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಹೇಳಿಕೆ!

ಬೆಂಗಳೂರು, ನ. 04: ಇದೇ ನವೆಂಬರ್ 18 ರಿಂದ ರಾಜ್ಯದಲ್ಲಿ ಕಾಲೇಜು ತಗರಗತಿಗಳು ಆರಂಭವಾಗಲಿದೆ. ಹೀಗಾಗಿ ಶಾಲೆಗಳನ್ನೂ ಆರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂಬ ಚರ್ಚೆ ಶುರುವಾಗಿದೆ. ಶಾಲೆಗಳನ್ನು ಆರಂಭಿಸುವ ಬಗ್ಗೆ ರಾಜ್ಯ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮಹತ್ವದ ಹೇಳಿಕೆಯನ್ನು ಕೊಟ್ಟಿದ್ದಾರೆ.

ಬೆಂಗಳೂರಿನ ಸಮಗ್ರ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ, ಪ್ರಾಥಮಿಕ ಶಿಕ್ಷಣ ಇಲಾಖೆ ಕಾರ್ಯದರ್ಶಿ, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು, ನಿರ್ದೇಶಕರುಗಳು, ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು, ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘದ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿದ ನಂತರ ಸುರೇಶ್ ಕುಮಾರ್ ಅವರು ಈ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದ್ದಾರೆ.

ಶಾಲಾ ಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗಬಾರದು ಎಂದು ವಿದ್ಯಾಗಮ ಎಂಬ ವಿನೂತನ ಕಾರ್ಯಕ್ರಮವನ್ನು ರಾಜ್ಯ ಶಿಕ್ಷಣ ಇಲಾಖೆ ಕೊರೊನಾ ವೈರಸ್ ಸಂಕಷ್ಟದ ಕಾಲದಲ್ಲಿ ಜಾರಿಗೆ ತಂದಿತ್ತು. ಆದರೆ ಅದರಿಂದ ಮಕ್ಕಳಿಗೆ ಹಾಗೂ ಶಿಕ್ಷಕರಿಗೆ ಕೊರೊನಾ ವೈರಸ್ ಸೋಂಕು ಹರಡುತ್ತದೆ ಎಂದು ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ವಿದ್ಯಾಗಮ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಆದರೆ ಹೆಚ್ಚು ಕಾಲ ಶಾಲಾ ಮಕ್ಕಳು ತರಗತಿಯಿಂದ ಹೊರಗೆ ಉಳಿಯುವುದು ಸರಿಯಲ್ಲ ಎಂಬ ಕಾರಣದಿಂದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ.

ರಾಜ್ಯದಲ್ಲಿ ಶೀಘ್ರದಲ್ಲಿ ಶಾಲೆಗಳು ಆರಂಭವಾಗುತ್ತವೆಯಾ? ಈ ಬಗ್ಗೆ ಸುರೇಶ್ ಕುಮಾರ್ ಏನು ಹೇಳಿದ್ದಾರೆ? ಮುಂದಿದೆ ಸಂಪೂರ್ಣ ಮಾಹಿತಿ!

ಶಾಲೆಗಳನ್ನು ಆರಂಭಿಸುವ ಬಗ್ಗೆ ಚರ್ಚೆ

ಶಾಲೆಗಳನ್ನು ಆರಂಭಿಸುವ ಬಗ್ಗೆ ಚರ್ಚೆ

ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಕುರಿತು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸುದೀರ್ಘ ಚರ್ಚೆ ನಡೆಸಿದ್ದಾರೆ. ಈ ಬಗ್ಗೆ ಸಮಾಲೋಚನೆ-ಸಂವಾದಗಳನ್ನು ಕೈಗೊಂಡಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ರಾಜ್ಯದ ಸ್ಥಿತಿಗತಿಗಳನ್ನು ಮನದಟ್ಟು ಮಾಡಿದ ನಂತರವೇ ಆ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಹೇಳಿದ್ದಾರೆ.

ಮಕ್ಕಳ ಹಿತ ಹಾಗೂ ಮಕ್ಕಳ ಆರೋಗ್ಯವೇ ಪ್ರಧಾನವಾಗಿರುವುದರಿಂದ ಶಾಲೆಗಳನ್ನು ತಕ್ಷಣದಲ್ಲೇ ಆರಂಭಿಸುವ ಉದ್ದೇಶವಿಲ್ಲವಾದರೂ, ಮಕ್ಕಳು ಶಾಲೆಯಿಂದ ಬಹುಕಾಲ ಹೊರಗುಳಿಯುವುದರಿಂದಾಗುವ ಸಮಸ್ಯೆಗಳ ಕುರಿತೂ ಚಿಂತಿಸಬೇಕಾದ ಅಗತ್ಯವಿದೆ ಎಂದರು.

ಮಕ್ಕಳ ಯೋಗಕ್ಷೇಮ ಮುಖ್ಯ

ಮಕ್ಕಳ ಯೋಗಕ್ಷೇಮ ಮುಖ್ಯ

ಮಕ್ಕಳ ಹಿತ, ಮಕ್ಕಳ ಯೋಗಕ್ಷೇಮ, ಪೋಷಕರ ಆತಂಕ, ಶಿಕ್ಷಕರ ಹಿತಗಳೇ ನಮಗೆ ಅತ್ಯಂತ ಪ್ರಮುಖ ವಿಷಯಗಳಾದ್ದರಿಂದ ಯಾವ ಕಾರಣಕ್ಕೂ ಶಾಲೆಗಳನ್ನು ತಕ್ಷಣವೇ ತೆರೆಯುವ ಉದ್ದೇಶ ಸರ್ಕಾರಕ್ಕಿಲ್ಲ ಎಂದೂ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ರಾಜ್ಯದ ಮಕ್ಕಳ ಹಿತದೃಷ್ಟಿಯಿಂದ ಶಾಲೆಗಳನ್ನು ಸೂಕ್ತ ಕ್ರಮಗಳೊಂದಿಗೆ ಆರಂಭಿಸಬಹುದೆಂಬ ಕುರಿತು ಸಮಾಜದ ವಿವಿಧ ಸ್ತರಗಳೊಂದಿಗೆ ಸಮಾಲೋಚನೆಗಳನ್ನು ಕೈಗೊಳ್ಳಲಾಗಿದೆ ಎಂದರು.

ಬೇರೆ ರಾಜ್ಯಗಳ ಸ್ಥಿತಿಗತಿ ಅವಲೋಕನ

ಬೇರೆ ರಾಜ್ಯಗಳ ಸ್ಥಿತಿಗತಿ ಅವಲೋಕನ

ಕೊರೊನಾ ಸಂದರ್ಭದಲ್ಲಿ ವಿವಿಧ ರಾಜ್ಯಗಳಲ್ಲಿನ ಕಲಿಕಾ ಪ್ರಕ್ರಿಯೆಗಳು, ಅದರಿಂದಾದ ಉಪಯೋಗಗಳು ಮತ್ತು ಸಮಸ್ಯೆಗಳ ಕುರಿತು ಸುದೀರ್ಘವಾಗಿ ಚರ್ಚೆ ನಡೆಸಲಾಗಿದ್ದು, ಇದರ ಪರಿಣಾಮಗಳ ಬೆಳಕಿನಲ್ಲಿ ನಾವು ಹೇಗೆ ಕಲಿಕಾ ಪ್ರಕ್ರಿಯೆಗೆ ನಾಂದಿ ಹಾಡಬಹುದೆಂದು ವಿಷದವಾಗಿ ಚರ್ಚಿಸಲಾಯಿತು. ಆ ರಾಜ್ಯದ ಸ್ಥಿತಿಗತಿಗಳೊಂದಿಗೆ ನಮ್ಮ ರಾಜ್ಯದ ಇಂದಿನ ಪರಿಸ್ಥಿತಿಯನ್ನು ಅವಲೋಕಿಸಲಾಗಿದೆ ಎಂದರು.

Recommended Video

    US Election ನಾನು ಸುಪ್ರೀಂ ಕೋರ್ಟ್ ಹೋಗ್ತೀನಿ !! | Oneindia Kannada
    ಎಲ್ಲರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ

    ಎಲ್ಲರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ

    ಮುಂದಿನ ಎರಡು ದಿನಗಳಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ಸಾರಿಗೆ ಇಲಾಖೆ, ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಎಸ್‍ಡಿಎಂಸಿ ಪ್ರತಿನಿಧಿಗಳು ಸೇರಿದಂತೆ ಹಲವು ಶೈಕ್ಷಣಿಕ ಪಾಲುದಾರರೊಂದಿಗೆ ಚರ್ಚೆ ನಡೆಸಿ ಸಮಗ್ರ ವರದಿಯನ್ನು ಸಿದ್ಧಪಡಿಸಲಿದ್ದಾರೆ.


    ಹಾಗೆಯೇ ಈಗಾಗಲೇ ಆಯುಕ್ತರು ರಾಜ್ಯದ ಡಿಡಿಪಿಐಗಳು, ಬಿಇಒಗಳೊಂದಿಗೆ ಚರ್ಚೆ ಮಾಡಿ ವಿವರಗಳನ್ನು ಪಡೆದಿದ್ದಾರೆ. ಈ ಎಲ್ಲ ವರದಿಗಳ ಹಿನ್ನೆಲೆಯಲ್ಲಿ ವರದಿ ಸಿದ್ಧಪಡಿಸಿ ಮಾನ್ಯ ಮುಖ್ಯಮಂತ್ರಿಗಳಿಗೆ ಸಲ್ಲಿಸಿ ರಾಜ್ಯದ ಸ್ಥಿತಿಗತಿಗಳನ್ನು ಗಮನಕ್ಕೆ ತರಲಾಗುವುದು. ಆ ನಂತರವೇ ಶಾಲೆಗಳ ಆರಂಭ ಕುರಿತು ಒಂದು ನಿರ್ಧಾರಕ್ಕೆ ಬರಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದರು.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+