ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿಕ್ಷಕರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಬಿಜೆಪಿ ಸರ್ಕಾರ!

|
Google Oneindia Kannada News

ಬೆಂಗಳೂರು, ಅ. 21: ಕೊರೊನಾ ವೈರಸ್ ಸಂಕಷ್ಟ, ವಿದ್ಯಾಗಮ ಕಾರ್ಯಕ್ರಮ ಇವುಗಳ ಆತಂಕದ ಮಧ್ಯೆ ಶಿಕ್ಷಕರಿಗೆ ರಾಜ್ಯ ಬಿಜೆಪಿ ಸರ್ಕಾರ ಸಿಹಿ ಸುದ್ದಿ ಕೊಟ್ಟಿದೆ. ಇದೇ ನವೆಂಬರ್‌ 5 ರಿಂದ ಶಿಕ್ಷಕರ‌ ವರ್ಗಾವಣೆ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್‌ ಕುಮಾರ್‌ ಅವರು ತಿಳಿಸಿದ್ದಾರೆ. ಈ ಮೊದಲೇ ಹೇಳಿರುವಂತೆ ನೀಡಿರುವಂತೆ, ಕಳೆದ ಸಾಲಿನಲ್ಲಿ ಕಡ್ಡಾಯ ಹಾಗೂ ಹೆಚ್ಚುವರಿ ವರ್ಗಾವಣೆ ಶಿಕ್ಷೆಗೆ ಒಳಗಾದ ಶಿಕ್ಷಕರಿಗೆ ಮೊದಲು ಆದ್ಯತೆ ಸಿಗಲಿದೆ ಎಂದು ಅವರು ತಿಳಿಸಿದ್ದಾರೆ.

ಈ ನಿಟ್ಟಿನಲ್ಲಿ ಕೂಡಲೇ ಅಧಿಸೂಚನೆ ಹಾಗೂ ವೇಳಾಪಟ್ಟಿಯನ್ನು ಹೊರಡಿಸಲು ಸಾರ್ವಜನಿಕ‌ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಸೂಚಿಸಿದ್ದೇನೆ ಎಂದು ಸುರೇಶ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಿಕ್ಷಕರ ವರ್ಗಾವಣೆ ವಿಚಾರವಾಗಿ ನಾಳೆ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಅವರು‌ ಮಾಹಿತಿ ನೀಡಿದ್ದಾರೆ.

Suresh Kumar Said That Teachers Transfer Process Will Commence On November 5, 2020

Recommended Video

ಇದನ್ನು ಬಳಸಿ corona ಇಂದ ದೂರ ಇರಿ | Oneindia Kannada

ಶಿಕ್ಷಕರ ವರ್ಗಾವಣೆ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆದೇಶ ಮಾಡಿದ್ದರು. ರಾಜ್ಯದ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳ ಶಿಕ್ಷಕರು ಹಾಗೂ ಉಪನ್ಯಾಸಕರು ವರ್ಗಾವಣೆ ಸೌಲಭ್ಯವಿಲ್ಲದೆ ಆತಂಕಕ್ಕೆ ಒಳಗಾಗಿದ್ದಾರೆ ಎಂಬುದು ಗಮನಕ್ಕೆ ಬಂದಿದೆ. ಈಗಾಗಲೇ ಸರ್ಕಾರ ಕಳೆದ 5 ತಿಂಗಳುಗಳ ಹಿಂದೆಯೆ ವರ್ಗಾವಣೆ ಮಾರ್ಗಸೂಚಿ ಹೊರಡಿಸಿದೆ. ಆದರೆ ವೇಳಾಪಟ್ಟಿ ಇನ್ನೂ ಪ್ರಕಟವಾಗಿಲ್ಲ. ಬೇರೆ ಇಲಾಖೆಗಳಲ್ಲಿ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ. ಹೀಗಾಗಿ ಶಿಕ್ಷಣ ಇಲಾಖೆಯಲ್ಲಿಯೂ ವೇಳಾಪಟ್ಟಿ ಪ್ರಕಟಿಸಿ ವರ್ಗಾವಣೆಗೆ ಪ್ರಕ್ರಿಯೆ ಶುರು ಮಾಡಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶಿಕ್ಷಣ ಇಲಾಖೆ ಕಾರ್ಯದರ್ಶಿಗೆ ಆದೇಶ ಮಾಡಿದ್ದರು.

English summary
Primary edcucation minister Suresh kumar said that the teachers' transfer process will commence on November 5, 2020. Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X